ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ನೂತನ ಮಿತ್ರರ ಸಮಾಗವಾಗಲಿದ್ದು, ಮಾನಸಿಕವಾಗಿ ಸಂತೋಷ ಸಿಗುವುದು. ವ್ಯಾಪಾರ, ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಕೂಡಿಟ್ಟ ಧನ ಸಂಪತ್ತು ಅನಿವಾರ್ಯ ಕಾರಣಗಳಿಗೆ ಖರ್ಚಾಗಲಿದೆ.
ವೃಷಭ: ನಿಮ್ಮ ಮನೋಭಾವ, ಧೋರಣೆ ಕೆಲವರಿಗೆ ಇಷ್ಟವಾಗದೇ ಇರಬಹುದು. ಆದರೆ ಯಾವುದಕ್ಕೂ ತಲೆಕೆಡಿಸಿಕೊಳ್ಳುವ ಗುಣ ನಿಮ್ಮದಲ್ಲ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ತಲ್ಲೀನತೆ ಹೆಚ್ಚಾಗುವುದು. ದೇವತಾ ಪ್ರಾರ್ಥನೆ ಮಾಡಿ.
ಮಿಥುನ: ಸಾಮಾಜಿಕವಾಗಿ ಗೌರವ ಸಂಪಾದಿಸುವ ಯೋಗ ನಿಮ್ಮದಾಗುವುದು. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಸಾಕು ಪ್ರಾಣಿಗಳಿಂದ ತೊಂದರೆಯಾಗುವ ಸಂಭವ. ವಾಹನ ಸಂಚಾರ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಕರ್ಕಟಕ: ನಿತ್ಯ ಕರ್ಮಗಳಿಗೆ ಕೊಂಚ ಅಡೆತಡೆಗಳು ಬಂದೀತು. ಮಾನಸಿಕವಾಗಿ ಕಾಡುತ್ತಿದ್ದ ಸಮಸ್ಯೆಗಳಿಗೆ ಆಪ್ತರಿಂದ ಪರಿಹಾರ ಕಂಡುಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.
ಸಿಂಹ: ನಿಮ್ಮ ಇದಮಿತ್ತಂ ಎನ್ನುವ ನಿರ್ಧಾರಗಳು ಕುಟುಂಬ ಸದಸ್ಯರ ಅಸಮಾಧಾನಕ್ಕೆ ಕಾರಣವಾದೀತು. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಿ.
ಕನ್ಯಾ: ಕುಟುಂಬಸ್ಥರ ಅಭಿಪ್ರಾಯಗಳಿಗೆ ಬೆಲೆಕೊಟ್ಟು ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರುವುದು. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.
ತುಲಾ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಹೊಣೆಗಾರಿಕೆ ಹೆಗಲಿಗೇರಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ತಾಳ್ಮೆಯಿರಲಿ.
ವೃಶ್ಚಿಕ: ಯಾವುದೇ ವಿಚಾರವನ್ನೂ ಕಾರ್ಯರೂಪಕ್ಕೆ ತರದೇ ಮನಸ್ಸಿಗೆ ನೆಮ್ಮದಿಯಾಗದು. ಸಂಗಾತಿಯೊಂದಿಗೆ ಪರಾಮರ್ಶಿಸಿ ಮುನ್ನಡೆಯುವುದು ಉತ್ತಮ. ಹಿರಿಯರಿಗೆ ಪುಣ್ಯ ಕ್ಷೇತ್ರಗಳಿಗೆ ಭೇಟಿ ಕೊಡುವ ಭಾಗ್ಯ.
ಧನು: ಯಾವುದೇ ಕೆಲಸಕ್ಕೆ ಕೈ ಹಾಕುವ ಮೊದಲೇ ಸೋಲು ಒಪ್ಪಿಕೊಳ್ಳುವಂತಾಗುವಿರಿ. ಮಕ್ಕಳ ವಿಚಾರದಲ್ಲಿ ಅನಗತ್ಯ ತಲೆಕೆಡಿಸಿಕೊಳ್ಳುವುದು ಬೇಡ. ಇಷ್ಟಮಿತ್ರರ ಭೇಟಿಯಾಗಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.
ಮಕರ: ಬಹುದಿನಗಳಿಂದ ನಿಮ್ಮನ್ನು ಕಾಡುತ್ತಿದ್ದ ದೇಹಾರೋಗ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ಧೀರಿ. ವ್ಯಾಪಾರೀ ವರ್ಗದವರು ಸಾಲಗಳಿಂದ ಮುಕ್ತರಾಗಲಿದ್ದಾರೆ.
ಕುಂಭ: ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ವ್ಯವಹಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಸನ್ಮಿತ್ರರ ಸಹಕಾರ ಕಂಡುಬರಲಿದೆ. ಗುರುಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿವೆ. ದೇವತಾ ಪ್ರಾರ್ಥನೆ ಮಾಡಿ.
ಮೀನ: ಸಕಾಲದಲ್ಲಿ ಸಿಗುವ ನೆರವಿನಿಂದ ಸಂಭಾವ್ಯ ಅಪಾಯಗಳಿಂದ ಪಾರಾಗಲಿದ್ದೀರಿ. ಸಾಂಸಾರಿಕವಾಗಿ ಮಧ‍್ಯಮ ಸುಖ ಕಂಡುಬರುವುದು. ಪಾಲುದಾರಿಕೆ ಕ್ಷೇತ್ರದಲ್ಲಿ ದುಡುಕಿನ ನಿರ್ಧಾರ ಮಾಡಬೇಡಿ. ಕಿರು ಸಂಚಾರ ಮಾಡುವಿರಿ.