ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಕೆಲಸ ಕಾರ್ಯಗಳು ನಿರಾತಂಕವಾಗಿ ಸಾಗೀತು. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಹಣಕಾಸಿನ ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.
ವೃಷಭ: ದೂರದ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ ಕಂಡುಬರಲಿದೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಅಧಿಕವಾಗಲಿದೆ. ಇಷ್ಟಮಿತ್ರರನ್ನು ಭೇಟಿ ಮಾಡಲಿದ್ದೀರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.
ಮಿಥುನ: ಪಾಲುದಾರಿಕೆ ವ್ಯವಹಾರದಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ. ಗುರುಹಿರಿಯರ ಮಾರ್ಗದರ್ಶನದಲ್ಲಿ ಹೊಸ ಕೆಲಸಕ್ಕೆ ಕೈ ಹಾಕಲಿದ್ದೀರಿ. ಅತಿಯಾಗಿ ಇನ್ನೊಬ್ಬರ ಮೇಲೆ ಅವಲಂಬನೆ ಬೇಡ. ದಿನದಂತ್ಯಕ್ಕೆ ನೆಮ್ಮದಿ.
ಕರ್ಕಟಕ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.
ಸಿಂಹ: ಎಲ್ಲೇ ಹೋದರೂ ನಿಮ್ಮತನವನ್ನು ಬಿಟ್ಟುಕೊಡದಿರಿ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಭೀತಿ ಎದುರಾಗಲಿದೆ. ತಾಂತ್ರಿಕ ವೃತ್ತಿಯವರಿಗೆ ತೊಂದರೆಗಳು ಎದುರಾದೀತು. ಕುಲದೇವರ ಪ್ರಾರ್ಥನೆ ಮಾಡಿ.
ಕನ್ಯಾ: ಹೊಸ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ. ಕಾರ್ಯಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ತುಲಾ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆ ಬರಲಿದೆ. ನಿಮ್ಮಲ್ಲಿದ್ದುದನ್ನು ಇತರರಿಗೆ ದಾನ ಮಾಡಿದ ಖುಷಿ ನಿಮ್ಮದಾಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ವಿದ್ಯಾರ್ಥಿಗಳಿಗೆ ಮುನ್ನಡೆ.
ವೃಶ್ಚಿಕ: ನೀವು ಇಷ್ಟು ದಿನ ಪಟ್ಟಿದ್ದ ಶ್ರಮ ಸಾರ್ಥಕವೆನಿಸುವ ಕಾಲ ಬರಲಿದೆ. ನಿಮ್ಮ ಕಷ್ಟಕ್ಕೆ ಸ್ಪಂದಿಸಿದವರಿಗೆ ಪ್ರತಿಫಲ ನೀಡಲು ಅವಕಾಶ ಸಿಗುವುದು. ಸ್ವಯಂ ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ ಸಿಗಲಿದೆ.
ಧನು: ಎಷ್ಟೋ ದಿನಗಳಿಂದ ಭೇಟಿಯಾಗಬೇಕೆಂದುಕೊಂಡಿದ್ದ ವ್ಯಕ್ತಿಗಳನ್ನು ಅನಿರೀಕ್ಷಿತವಾಗಿ ಭೇಟಿಯಾದ ಸಂತೋಷ ನಿಮ್ಮದಾಗುವುದು. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ. ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆಯಿರಲಿದೆ.
ಮಕರ: ನಿಮ್ಮ ಮೆಚ್ಚಿನ ವ್ಯಕ್ತಿಗಳೊಂದಿಗೆ ಸುಂದರ ಕಾಲ ಕಳೆಯುವ ಯೋಗ. ವ್ಯಾಪಾರೀ ವರ್ಗದವರಿಗೆ ಅಡೆತಡೆಗಳು ಕಂಡುಬಂದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಕುಲದೇವರ ಪ್ರಾರ್ಥಿಸಿ.
ಕುಂಭ: ಯಾವುದೇ ಹೊಸ ಕೆಲಸಕ್ಕೆ ಮುನ್ನ ಗುರುಹಿರಿಯರ ಆಶೀರ್ವಾದ ಪಡೆದು ಮುನ್ನಡೆಯುವುದು ಉತ್ತಮ. ನಿರೀಕ್ಷಿತ ರೀತಿಯಲ್ಲಿ ಧನಾಗಮನವಾಗುವುದರಿಂದ ತೊಂದರೆಯಿಲ್ಲ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.
ಮೀನ: ನೀವು ಉಪೇಕ್ಷೆ ಮಾಡಿದ್ದ ವ್ಯಕ್ತಿಗಳೇ ಇಂದು ನಿಮ್ಮ ಪಾಲಿಗೆ ಆಗಿಬರಲಿದ್ದಾರೆ. ಕೌಟುಂಬಿಕವಾಗಿ ಕೆಲವೊಂದು ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಸಹೋದರರೊಂದಿಗಿನ ಭಿನ್ನಾಭಿಪ್ರಾಯಗಳು ಸರಿ ಹೋಗಲಿವೆ.