Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

webdunia
ಬೆಂಗಳೂರು , ಬುಧವಾರ, 14 ಸೆಪ್ಟಂಬರ್ 2022 (07:42 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಧಾರ್ಮಿಕ ಚಟುವಟಿಕೆಗಳ ನೇತೃತ್ವ ವಹಿಸಿಕೊಳ್ಳಲಿದ್ದೀರಿ. ಹಲವು ವಿಚಾರಗಳು ನಿಮ್ಮ ಮನಸ್ಸು ಕೊರೆಯುತ್ತಿದ್ದು, ದೈನಂದಿನ ಕೆಲಸಗಳಿಗೆ ಅಡ್ಡಿಯಾಗಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ತಾಳ್ಮೆಯಿರಲಿ.

ವೃಷಭ: ಕೌಟುಂಬಿವಕಾಗಿ ಹೊಸ ಜವಾಬ್ಧಾರಿಗಳನ್ನು ಹೆಗಲಿಗೇರಿಸಿಕೊಳ್ಳಬೇಕಾಗುತ್ತದೆ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ನಿಮ್ಮ ಮೆಚ್ಚಿನ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಮನಸ್ಸಿಗೆ ಹತ್ತಿರವಾದವರ ಬಳಿ ನಿಮ್ಮ ಮನದಾಳ ಬಿಚ್ಚಿಡಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಆರೋಗ್ಯದಲ್ಲಿ ಚೇತರಿಕೆಯಾಗಲಿದೆ.

ಕರ್ಕಟಕ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಒಳಿತಾಗಲಿದೆ. ವ್ಯಾಪಾರೀ ವರ್ಗದವರಿಗೆ ಹಿತ ಶತ್ರಗುಳಿಂದ ತೊಂದರೆ ಸಾಧ್ಯತೆ.

ಸಿಂಹ: ಗುರುಹಿರಿಯರ ಆಶೀರ್ವಾದದೊಂದಿಗೆ ನಿಮ್ಮ ಕೆಲಸ ಕಾರ್ಯ ನೆರವೇರಿಸಲಿದ್ದೀರಿ. ತಾಂತ್ರಿಕ ಕೆಲಸದಲ್ಲಿರುವವರಿಗೆ ಮುನ್ನಡೆ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಚಿಂತೆ ಬೇಡ.

ಕನ್ಯಾ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಗೃಹ, ವಾಹನಾದಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಇಷ್ಟಮಿತ್ರರ ಭೇಟಿಯಾಗುವ ಯೋಗ.

ತುಲಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಖರ್ಚು ಮಾಡುವುದು ಉತ್ತಮ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ವೃಶ್ಚಿಕ: ವ್ಯಾಪಾರೀ ವರ್ಗದವರಿಗೆ ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಮಾನ ವೃದ್ಧಿಯಾಗಲಿದೆ. ಸಹೋದ್ಯೋಗಿಗಳಿಂದ ಸಹಕಾರ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ನಿಮ್ಮ ಕೆಲವೊಂದು ಮಾತುಗಳು ಸಂಗಾತಿಯ ಮನಸ್ಸಿಗೆ ನೋವುಂಟು ಮಾಡೀತು. ಕಾರ್ಯಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಿ. ವ್ಯವಸಾಯದಲ್ಲಿ ತೊಡಗಿಸಿಕೊಂಡವರಿಗೆ ಮುನ್ನಡೆಯ ಯೋಗ. ತಾಳ್ಮೆಯಿರಲಿ.

ಮಕರ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು. ಕ್ರಿಯಾತ್ಮಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಉತ್ತಮ.

ಕುಂಭ: ಕಾರ್ಯರಂಗದಲ್ಲಿ ಶತ್ರುಪೀಡೆ ನಾಶವಾಗಲಿದೆ. ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರಲಿದೆ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಪರವೂರಿಗೆ ಸಂಚರಿಸಬೇಕಾದೀತು.

ಮೀನ: ಬಹಳ ದಿನಗಳಿಂದ ಮಾಡಬೇಕೆಂದುಕೊಂಡಿದ್ದ ಕೆಲಸ ಕಾರ್ಯಗಳನ್ನು ಪೂರ್ತಿ ಮಾಡಲಿದ್ದೀರಿ. ಸಂಗಾತಿಯ ಪ್ರೀತ್ಯಾದರಗಳಿಗೆ ಪಾತ್ರರಾಗಲಿದ್ದೀರಿ. ನಿರುದ್ಯೋಗಿಗಳಿಗೆ ಕನಸಿನ ಉದ್ಯೋಗ ಶೀಘ್ರದಲ್ಲೇ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ