ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 17 ಸೆಪ್ಟಂಬರ್ 2022 (07:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಅಸಮಾಧಾನವಾದೀತು. ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾದೀತು. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ರೆಡಿಯಾಗಿ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಕಂಡುಬರಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಕ್ರಿಯಾತ್ಮಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಮಕ್ಕಳ ವಿಚಾರದಲ್ಲಿ ಅನಗತ್ಯ ತಲೆಕೆಡಿಸಿಕೊಳ್ಳಲು ಹೋಗಬೇಡಿ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕರ್ಕಟಕ: ದೈಹಿಕವಾಗಿ ಆರೋಗ್ಯವಾಗಿದ್ದರೂ ಮಾನಸಿಕವಾಗಿ ಹಲವು ಚಿಂತೆಗಳು ಕಾಡೀತು. ಪ್ರೇಮಿಗಳು ಶುಭ ಸೂಚನೆ ಪಡೆಯಲಿದ್ದಾರೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ. ಕುಲದೇವರ ಪ್ರಾರ್ಥನೆ ನಡೆಸಲಿದ್ದೀರಿ.

ಸಿಂಹ: ಬಂಧು ಮಿತ್ರರ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಂಡುಬರಲಿದೆ. ವಿಶೇಷ ಖಾದ್ಯಗಳನ್ನು ತಿನ್ನುವ ಯೋಗ. ಉದರ ನಿಮಿತ್ತ ಬೇರೆ ಬೇರೆ ಪ್ರಯತ್ನಕ್ಕೆ ಕೈ ಹಾಕಬೇಕಾಗುತ್ತದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಕನ್ಯಾ: ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭ ಕಂಡುಬರಲಿದೆ. ಕೆಲಸದ ನಿಮಿತ್ತ ಅನ್ಯ ಸ್ಥಳಕ್ಕೆ ಭೇಟಿ ನೀಡಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಚಿಂತೆ ಬೇಡ.

ತುಲಾ: ಹೊಸ ಕೆಲಸಕ್ಕಾಗಿ ಪ್ರಯತ್ನ ನಡೆಸುತ್ತಿದ್ದರೆ ತಕ್ಕ ಫಲ ಸಿಗಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಕೌಟುಂಬಿಕವಾಗಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಿ ಸುಖ ಸಮೃದ್ಧಿಯಿರಲಿದೆ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ.

ಧನು:  ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಮಹಿಳೆಯರಿಗೆ ತವರು ಮನೆಯವರ ಕಡೆಯಿಂದ ಉಡುಗೊರೆ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮಕರ: ಇತರರಿಗೆ ಸಹಾಯ ಮಾಡುವಾಗ ಪೂರ್ವಾಪರ ತಿಳಿದು ಮುನ್ನಡೆಯಿರಿ. ಸಂದರ್ಭೋಚಿತ ಸಲಹೆಯಿಂದ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಪ್ರಶಂಸೆ ಸಿಗಲಿದೆ. ಅನಗತ್ಯ ಚಿಂತೆ ಬೇಡ.

ಕುಂಭ: ದುಡುಕಿ ನಿರ್ಧಾರ ತೆಗೆದುಕೊಂಡು ಸಮಸ್ಯೆಗೆ ಸಿಲುಕುವ ಸಂದರ್ಭ ಎದುರಾದೀತು. ಮಾನಸಿಕವಾಗಿ ಸಂತೋಷ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

ಮೀನ: ಬಹಳ ದಿನಗಳಿಂದ ಬಾಕಿಯಿದ್ದ ದೈವಿಕ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ. ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದ್ವಾದಶ ರಾಶಿಯವರಿಗೆ 2026 ರಲ್ಲಿ ಪ್ರೇಮ ಸಂಬಂಧದ ಭವಿಷ್ಯ ಹೇಗಿರಲಿದೆ

ಭಯವಾಗುತ್ತಿದ್ದರೆ ಪ್ರಭು ರಾಮಚಂದ್ರನ ಈ ಸ್ತೋತ್ರವನ್ನು ಓದಿ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments