Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

webdunia
ಭಾನುವಾರ, 18 ಸೆಪ್ಟಂಬರ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನೀವು ಯೋಚಿಸುವ ರೀತಿ ಬದಲಾಯಿಸಬೇಕು. ಕಾರ್ಯಸಾಧನೆಯಾಗಬೇಕಾದರೆ ಪ್ರಭಾವಿಗಳ ಮನ ಒಲಿಸಬೇಕು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹೊಸ ವಿಚಾರಗಳನ್ನು ಕಲಿಯಲಿದ್ದೀರಿ. ಭಾವನಾತ್ಮಕವಾಗಿ ಸಂಬಂಧಗಳಿಗೆ ಕಟ್ಟುಬೀಳಲಿದ್ದೀರಿ. ಸಂಗಾತಿಯ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಕಾರ್ಯನಿಮಿತ್ತ ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ಕಾರ್ಯರಂಗದಲ್ಲಿ ನಿಮಗೆ ಆಗಿಬರದವರಿಂದ ತೊಂದರೆಗಳು ಎದುರಾದೀತು. ಸಂಗಾತಿಯ ಕಷ್ಟಗಳಿಗೆ ಹೆಗಲುಕೊಡಲಿದ್ದೀರಿ. ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ತಾಳ್ಮೆಯಿರಲಿ.

ಕರ್ಕಟಕ: ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ಆಸ್ತಿ ವಿವಾದಗಳನ್ನು ಹಿರಿಯರ ಮಧ‍್ಯಸ್ಥಿಕೆಯಲ್ಲಿ ಬಗೆಹರಿಸಿಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿದೆ.

ಸಿಂಹ: ಅತಿಯಾದ ಆತ್ಮವಿಶ್ವಾಸವೇ ಮುಳುವಾಗಲಿದೆ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಧಾರ್ಮಿಕ ವಿಚಾರದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಹೋದರಾದಿ ಸಂಬಂಧಿಗಳೊಂದಿಗೆ ಸಂಬಂಧ ವೃದ್ಧಿಯಾಗಲಿದೆ. ಚಿಂತೆ ಬೇಡ.

ಕನ್ಯಾ: ಮನಸ್ಸಿನಲ್ಲಿ ಗೊಂದಲಕ್ಕೆ ಅವಕಾಶ ಕೊಡದೇ ಆತ್ಮವಿಶ್ವಾಸದಿಂದ ಕಾರ್ಯನಿರ್ವಹಿಸಿ. ನೂತನ ಮಿತ್ರರ ಸಮಾಗಮವಾಗಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಯೋಜನೆಗಳು ಹೊಳೆದೀತು.

ತುಲಾ: ಸಂದರ್ಭಕ್ಕೆ ಸರಿಯಾಗಿ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ವಿಶೇಷವಾದ ವ್ಯಕ್ತಿಗಳು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ಅತಿಯಾದ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಧನು: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಮನಸ್ಸಾಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ.

ಮಕರ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಅಧಿಕವಾಗಲಿದೆ. ದಂಪತಿಗಳಲ್ಲಿ ಪರಸ್ಪರ ಹೊಂದಾಣಿಕೆಯಿರಲಿದೆ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಖರ್ಚು ವೆಚ್ಚ ಅಧಿಕವಾಗಲಿದೆ.

ಮೀನ: ಮನಸ್ಸಿಗೆ ಹಿಡಿಸಿದವರ ಜೊತೆ ಮನಸ್ಸಿನ ಮಾತು ಹೇಳಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವಕರ್ಮ ಜಯಂತಿ: ವಿಶ್ವಕರ್ಮ ಶಿವ ಮತ್ತು ವಿಷ್ಣುವಿಗೆ ನಿರ್ಮಿಸಿಕೊಟ್ಟ ಎರಡು ಆಯುಧಗಳು ಯಾವುದು?