Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

webdunia
ಗುರುವಾರ, 22 ಸೆಪ್ಟಂಬರ್ 2022 (07:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಆತ್ಮೀಯರ ಕಷ್ಟದಲ್ಲಿ ಭಾಗಿಯಾಗಲಿದ್ದೀರಿ. ಕೌಟುಂಬಿಕವಾಗಿ ಅಭಿವೃದ್ಧಿ ನೆಮ್ಮದಿ ಕಂಡುಬರಲಿದೆ. ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರ.

ವೃಷಭ: ಸಾಮಾಜಿಕ ಕೆಲಸಗಳಿಂದ ಮನಸ್ಸಿಗೆ ತೃಪ್ತಿ ಸಿಗಲಿದೆ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ  ಬಲ ಕೂಡಿಬರಲಿದೆ. ತಾಳ್ಮೆಯಿರಲಿ.

ಮಿಥುನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಾಗ ಕೆಲವು ಅಡೆತಡೆಗಳು ಎದುರಾದೀತು. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕರ್ಕಟಕ: ಹೊಸದಾಗಿ ಕೆಲಸ ಆರಂಭಿಸಿದ್ದರೆ ಸವಾಲುಗಳು ಎದುರಾದೀತು. ಗುರುಹಿರಿಯರ ಸಲಹೆ ಪಾಲಿಸುವುದು ಉತ್ತಮ. ಸಾಲಗಾರರ ಕಿರಿ ಕಿರಿ ಕಂಡುಬಂದೀತು. ಸಂಗಾತಿಯಿಂದ ಸಾಂತ್ವನ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಅಭಿವೃದ್ಧಿ ಕಂಡುಬರಲಿದೆ. ವ್ಯಾಪಾರೀ ವರ್ಗದವರಿಗೆ ಸಾಲ ಬಾಧೆಯ ಭಯ ನಿವಾರಣೆಯಾಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗುವುದು. ಇಷ್ಟಮಿತ್ರರೊಂದಿಗೆ ಇಷ್ಟಭೋಜನ ಮಾಡುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣವಿರಲಿ. ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ.

ತುಲಾ: ಹೊಸ ವಿಚಾರಗಳನ್ನು ಕಾರ್ಯಗತಗೊಳಿಸಲು ಪ್ರಯತ್ನಿಸಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ನೆಮ್ಮದಿ.

ವೃಶ್ಚಿಕ: ಸರಕಾರಿ ನೌಕರರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸವಾದೀತು. ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ನಿಮ್ಮ ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಮಕ್ಕಳ ಏಳಿಗೆ ಮನಸ್ಸಿಗೆ ಸಂತೋಷ ಕೊಡುವುದು. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸುವಿರಿ. ತಾಳ್ಮೆಯಿರಲಿ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಕೆಲವೊಂದು ಹೊಂದಾಣಿಕೆ  ಮಾಡಿಕೊಳ್ಳಬೇಕಾಗುತ್ತದೆ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರುವುದು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚಾಗಲಿದೆ.

ಕುಂಭ: ಮನೆಗೆ ವಿಶೇಷ ನೆಂಟರಿಷ್ಟರ ಆಗಮನವಾಗಲಿದೆ. ಯಂತ್ರೋಪಕರಗಳಿಂದ ತೊಂದರೆಗಳು ಎದುರಾದೀತು. ಎಚ್ಚರಿಕೆ ಅಗತ್ಯ. ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಹಿಂದೆ ನೀವು ಮಾಡಿದ್ದ ಪುಣ್ಯದ ಕೆಲಸದ ಫಲ ಅನುಭವಿಸಲಿದ್ದೀರಿ. ವ್ಯಾಪಾರಿ ವರ್ಗದವರಿಗೆ ಹಿತಶತ್ರುಗಳ ಕಾಟ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರುವುದು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ