Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

webdunia
ಶುಕ್ರವಾರ, 23 ಸೆಪ್ಟಂಬರ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕೆಲಸ ಕಾರ್ಯಗಳಲ್ಲಿ ಪ್ರಗತಿ ಸಂತೋಷಕ್ಕೆ ಕಾರಣವಾಗಲಿದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆ ಕೊಡಲು ಮುಂದಾಗಲಿದ್ದೀರಿ. ಹಿರಿಯರ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ. ಸಂಗಾತಿಯೊಂದಿಗೆ ಘರ್ಷಣೆ ಬೇಡ.

ವೃಷಭ: ಕಾರ್ಯರಂಗದಲ್ಲಿ ವಿಘ್ನಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಸರಕಾರಿ ನೌಕರರಿಗೆ ಕೆಲಸದೊತ್ತವಿರಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆ.

ಮಿಥುನ: ನಿಮ್ಮ ಕೆಲಸ ಕಾರ್ಯಗಳಲ್ಲಿ ಇತರರ ಹಸ್ತಕ್ಷೇಪ ಅಸಮಾಧಾನಕ್ಕೆ ಕಾರಣವಾದೀತು. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಉತ್ತಮ ವೈವಾಹಿಕ ಸಂಬಂಧ ಕೂಡಿಬರಲಿದೆ.

ಕರ್ಕಟಕ: ನಿಮ್ಮ ಕೆಲಸ ಕಾರ್ಯಗಳಿಗೆ ಕುಟುಂಬ ಸದಸ್ಯರ ಸಹಕಾರ ಕಂಡುಬರುವುದು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ತಾಳ‍್ಮೆ ಅಗತ್ಯ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಉನ್ನತ ಸ್ಥಾನ ಮಾನದ ಯೋಗ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ವೈದ್ಯಕೀಯ ರಂಗದಲ್ಲಿರುವವರಿಗೆ ಕೆಲಸದೊತ್ತಡ ಹೆಚ್ಚಾಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ತುಲಾ: ಹಿಂದೆ ಮಾಡಿದ್ದ ಬಂಡವಾಳಕ್ಕೆ ತಕ್ಕ ಫಲ ಪಡೆಯಲಿದ್ದೀರಿ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ.

ವೃಶ್ಚಿಕ: ಮೇಲಧಿಕಾರಿಗಳೊಂದಿಗೆ ಕಿರಿ ಕಿರಿಯಾಗುವ ಸಾಧ‍್ಯತೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗದೇ ಹೋದೀತು. ತಾಳ್ಮೆ, ಸಂಯಮ ಅಗತ್ಯ. ಕೌಟುಂಬಿಕವಾಗಿ ಪರಸ್ಪರ ಸಹಕಾರ ಕಂಡುಬರಲಿದೆ. ದಿನದಂತ್ಯಕ್ಕೆ ಸಂತೋಷದ ಸುದ್ದಿ ಕೇಳುವಿರಿ.

ಧನು: ದೇಹಾರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡುಬರಲಿದೆ. ನಿಮ್ಮ ಮನಸ್ಸಿನಲ್ಲಿರುವ ಯೋಚನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ.

ಮಕರ: ದಂಪತಿಗಳ ನಡುವೆ ಅನುರಾಗ ವೃದ್ಧಿಯಾಗಲಿದೆ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆ. ಹಿರಿಯರ ದೇಹಾರೋಗ್ಯದ ಬಗ್ಗೆ ಗಮನವಿರಲಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು.

ಕುಂಭ: ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟವಾಗುವ ಭೀತಿ. ಸ್ವಯಂ ಉದ್ಯೋಗದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ಮೀನ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡಲಿವೆ. ಆಪ್ತರೊಂದಿಗೆ ಮನಬಿಚ್ಚಿ ಮಾತನಾಡಲಿದ್ದೀರಿ. ಕ್ರಿಯಾತ್ಮಕ ಕೆಲಸಗಳು ಇತರರ ಗಮನ ಸೆಳೆಯಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರಲಿವೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ