ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 25 ಸೆಪ್ಟಂಬರ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಾಂಸಾರಿಕವಾಗಿ ಕಿರಿ ಕಿರಿಗಳು ಕಂಡುಬಂದೀತು. ಅನಗತ್ಯ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಸಹೋದರರೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ವೃಷಭ: ಗುರುಹಿರಿಯರಿಂದ ಸೂಕ್ತ ಸಲಹೆಗಳು ಬರಲಿವೆ. ಹಿಂದೆ ಮಾಡಿದ್ದ ಸಾಲ ತೀರಿಸಲು ಮುಂದಾಗಲಿದ್ದೀರಿ. ಕೌಟುಂಬಿಕವಾಗಿ ಪರಸ್ಪರ ಸಹಕಾರ ಕಂಡುಬರಲಿದೆ. ನಿರುದ್ಯೋಗಿಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ.

ಮಿಥುನ: ದೀರ್ಘ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ದೈಹಿಕ, ಮಾನಸಿಕ ಆರೋಗ್ಯ ಸದೃಢವಾಗಿರಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ವಿಶೇಷ ವ್ಯಕ್ತಿಗಳಿಂದ ನಿಮ್ಮ ಜೀವನಕ್ಕೆ ಹೊಸ ತಿರುವು ಸಿಗಲಿದೆ. ತಾಯಿಯ ಆರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ.

ಸಿಂಹ: ವ್ಯಾಪಾರೀ ವರ್ಗದವರಿಗೆ ಸ್ಥಾನ ಮಾನ ವೃದ್ಧಿಯಾಗಲಿದೆ. ಮನಸ್ಸಿನಲ್ಲಿರುವ ಮಾತುಗಳನ್ನು ಆತ್ಮೀಯರೊಂದಿಗೆ ಹಂಚಿಕೊಳ್ಳಲಿದ್ದೀರಿ. ಪ್ರೇಮಿಗಳಿಗೆ ಶುಭ ದಿನವಾಗಲಿದೆ. ದೂರ ಸಂಚಾರದಿಂದ ದೇಹಾಯಾಸವಾದೀತು.

ಕನ್ಯಾ: ವಾಹನ ಸಂಚಾರ ಮಾಡುವಾಗ ಅಪಘಾತದ ಭಯವಿದೆ. ಕುಟುಂಬದವರ ಪ್ರೋತ್ಸಾಹದಿಂದ ಹೊಸ ಕೆಲಸದಲ್ಲಿ ತೊಡಗಿಸಿಕೊಳ್ಳುವ ಪ್ರಯತ್ನ ಮಾಡಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಆರ್ಥಿಕ ಮುನ್ನಡೆ ಯೋಗ.

ತುಲಾ: ಪಾಲು ಬಂಡವಾಳ ವ್ಯವಹಾರದಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯ ಯೋಗ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ವೃಶ್ಚಿಕ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆಯ ಯೋಗವಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಕ್ಷಣ ಕಳೆಯಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು. ಕುಲದೇವರ ಪ್ರಾರ್ಥನೆ ಮಾಡಿ.

ಧನು: ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಇತರರ ಕಷ್ಟಗಳಿಗೆ ಸ್ಪಂದಿಸುವ ನಿಮ್ಮ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.

ಮಕರ: ಹಣಕಾಸಿನ ವಿಚಾರದಲ್ಲಿ ತೀವ್ರ ಎಚ್ಚರಿಕೆ ಅಗತ್ಯ. ದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಧನಾಗಮನವಿದ್ದರೂ ಖರ್ಚಿಗೆ ನಾನಾ ದಾರಿಗಳಾಗಲಿವೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ.

ಕುಂಭ: ಪಾಲುದಾರಿಕೆ ವ್ಯವಹಾರದಲ್ಲಿ ಚರ್ಚೆಗೆ ಆಸ್ಪದ ಕೊಡಬೇಡಿ. ಕಟ್ಟಡ-ಕಾಮಗಾರಿ ಕೆಲಸಗಳಿಗೆ ವಿಘ‍್ನಗಳು ಕಂಡುಬಂದೀತು. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಸ್ವಯಂ ಉದ್ಯೋಗಿಗಳಿಗೆ ಹಿತ ಶತ್ರುಗಳ ಕಾಟ ಕಂಡುಬಂದೀತು. ದಿನದಂತ್ಯಕ್ಕೆ ಸಂತೋಷದ ಸುದ್ದಿ ಕೇಳಿಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಮುಂದಿನ ಸುದ್ದಿ
Show comments