ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಬರಬೇಕಾಗಿದ್ದ ಬಾಕಿ ಹಣ ಪಾವತಿಯಾಗಲಿದೆ. ನಯ ನಾಜೂಕಿನಿಂದ ಮಾತನಾಡಿ ವ್ಯವಹರಿಸುವುದು ಮುಖ್ಯ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ.
ವೃಷಭ: ನಿಮ್ಮ ಕೆಲವೊಂದು ನಿರ್ಧಾರಗಳು ಭವಿಷ್ಯಕ್ಕೆ ಪೂರಕವಾಗಿರಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಬಂದರೂ ಸರಿಯಾಗಿ ಬಳಸಿಕೊಳ್ಳಲು ಆಗುವುದಿಲ್ಲ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.
ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಪ್ರಾಮಾಣಿಕತೆಗೆ ತಕ್ಕ ಫಲ ಸಿಗಲಿದೆ. ನಿರೀಕ್ಷಿಸಿದಷ್ಟು ಹಣ ಸಂಪಾದನೆಯಾಗದೇ ಇದ್ದರೂ ಮಾನಸಿಕವಾಗಿ ನೆಮ್ಮದಿಗೆ ಕೊರತೆಯಿರದು. ತಾಳ್ಮೆಯಿರಲಿ.
ಕರ್ಕಟಕ: ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆ. ಅನಿರೀಕ್ಷಿತ ಖರ್ಚು ವೆಚ್ಚಗಳಾಗುವ ಸಾಧ್ಯತೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ದೊರೆಯಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಿ.
ಸಿಂಹ: ಗುರುಹಿರಿಯರ ಸೂಕ್ತ ಮಾರ್ಗದರ್ಶನದಿಂದ ಕೈಗೊಂಡ ಕೆಲಸಗಳಲ್ಲಿ ಯಶಸ್ಸು ಸಿಗುವುದು. ಮಹಿಳೆಯರು ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಎಚ್ಚರಿಕೆಯಿಂದಿದ್ದರೆ ಉತ್ತಮ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ.
ಕನ್ಯಾ: ನಿಮ್ಮಲ್ಲಿರುವ ದೌರ್ಬಲ್ಯದ ಲಾಭವನ್ನು ಇತರರು ಬಳಸಿಕೊಳ್ಳಲಿದ್ದೀರಿ. ವ್ಯಾವಹಾರಿಕವಾಗಿ ಮುನ್ನಡೆಯಿರಲಿದೆ. ಆರ್ಥಿಕವಾಗಿ ಇನ್ನಷ್ಟು ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಅನಗತ್ಯ ಚಿಂತೆ ಬೇಡ.
ತುಲಾ: ದೈಹಿಕವಾಗಿ ಹೆಚ್ಚು ಶ್ರಮವಹಿಸಬೇಕಾದ ಪರಿಸ್ಥಿತಿ ಎದುರಾಗುತ್ತದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಭೂಮಿ,ವಾಹನ ಖರೀದಿ ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.
ವೃಶ್ಚಿಕ: ಸರಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ಯೋಗ. ದಾಯಾದಿ ಕಲಹಗಳಿಗೆ ಮುಕ್ತಿ ಸಿಗಲಿದೆ. ಮನೆಯಲ್ಲಿ ಮನರಂಜನೆಯ, ಖುಷಿಯ ವಾತಾವರಣ ಸೃಷ್ಟಿಸಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.
ಧನು: ಹಣಕಾಸಿನ ವಿಚಾರದಲ್ಲಿ ನಿಮಗೆ ಆಪ್ತರಿಂದಲೇ ವಂಚನೆಯಾಗುವ ಅಪಾಯವಿದೆ. ಸಂಗಾತಿಯ ಸಲಹೆಗಳಿಗೆ ಕಿವಿಗೊಡುವುದು ಉತ್ತಮ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕುಲದೇವರ ಪ್ರಾರ್ಥನೆ ಮಾಡಿ.
ಮಕರ: ಅಂದುಕೊಂಡ ಕೆಲಸ ಪೂರ್ತಿ ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಸಾಂಸಾರಿಕವಾಗಿ ಸುಖ, ಸಮೃದ್ಧಿಗೆ ಕೊರತೆಯಿರದು. ತಾಳ್ಮೆಯಿರಲಿ.
ಕುಂಭ: ಮನೆಯಲ್ಲಿ ನಿಮ್ಮ ನಿರ್ಧಾರವೇ ಅಂತಿಮವಾಗಲಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.
ಮೀನ: ಆತುರದ ನಿರ್ಧಾರಗಳಿಂದ ಕೈ ಸುಟ್ಟುಕೊಳ್ಳುವ ಪರಿಸ್ಥಿತಿಯಾದೀತು. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗುವ ಸಾಧ್ಯತೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.