Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 16 ಅಕ್ಟೋಬರ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಪರರ ನಿಂದನೆಯಲ್ಲಿ ತೊಡಗಿಸಿಕೊಳ್ಳುವುದನ್ನು ಬಿಟ್ಟು ವೈಯಕ್ತಿಕ ಜೀವನ ಸರಿಪಡಿಸಲು ಮುಂದಾಗಿ. ದೇವತಾ ಕಾರ್ಯಗಳಲ್ಲಿ ಲೋಪಗಳಾಗುವ ಭೀತಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ತಾಳ್ಮೆಯಿರಲಿ.

ವೃಷಭ: ಹಿಂದೆ ಕೂಡಿಟ್ಟ ಹಣ ಅನಿವಾರ್ಯ ಕಾರಣಗಳಿಗೆ ಖರ್ಚಾಗಲಿವೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳುವ ಪ್ರಸಂಗ ಎದುರಾದೀತು. ಕಾರ್ಯರಂಗದಲ್ಲಿ ಸೋಲಿನ ಭೀತಿ ಎದುರಾಗಲಿದೆ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ.

ಕರ್ಕಟಕ: ಪ್ರೀತಿ ಪಾತ್ರರ ಮೇಲಿನ ಮೋಹದಿಂದ ತಪ್ಪು ನಿರ್ಧಾರ ಕೈಗೊಳ್ಳುವ ಸಾಧ‍್ಯತೆ. ವ್ಯಾಪಾರೀ ವರ್ಗದವರಿಗೆ ಸಾಲಗಾರರ ಕಾಟದಿಂದ ಮುಕ್ತಿ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ತಾಳ್ಮೆಯಿರಿಲಿ.

ಸಿಂಹ: ಕೈ ಹಿಡಿದ ಕೆಲಸಗಳಿಗೆ ಅಡೆತಡೆಗಳು ಬಂದೀತು. ವಾಹನ ರಿಪೇರಿ ಸಂಬಂಧವಾಗಿ ಸಣ್ಣ ಪುಟ್ಟ ಖರ್ಚುಗಳು ಬಂದೀತು. ಹೊಸದಾಗಿ ಪರಿಚಿತರಾಗಿದ್ದವರಿಂದ ಸಹಾಯವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಮಕ್ಕಳ ಖುಷಿಯಲ್ಲಿ ನೀವೂ ಪಾಲುದಾರರಾಗಲಿದ್ದೀರಿ. ವಿಶೇಷ ವ್ಯಕ್ತಿಗಳು ನಿಮ್ಮ ಮನೆಗೆ ಅತಿಥಿಗಳಾಗಿ ಬರಲಿದ್ದಾರೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ತುಲಾ: ಹೊಸ ಸುದ್ದಿ ಕೇಳಿಬರುವುದು, ಹೊಸ ಜನರನ್ನು ಭೇಟಿ ಮಾಡುವ ಯೋಗ ಕೂಡಿಬರಲಿದೆ. ಸಂಕಷ್ಟದ ಸಮಯದಲ್ಲಿ ಸಹಾಯ ಮಾಡಿದವರಿಗೆ ಪ್ರತ್ಯುಪಕಾರ ಮಾಡಲು ಅವಕಾಶ ಸಿಗುವುದು. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ವೃಶ್ಚಿಕ: ವಿದ್ಯಾರ್ಥಿಗಳು ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಂಶೋಧನಾ ವೃತ್ತಿಯವರಿಗೆ ಮುನ್ನಡೆಯ ಯೋಗ. ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಧನು: ನಿಮ್ಮಲ್ಲಿರುವ ಕ್ರಿಯಾತ್ಮಕ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲು ಅವಕಾಶ ಸಿಗುವುದು. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಮಕ್ಕಳಿಗೆ ಉಡುಗೊರೆ ಮೂಲಕ ಖುಷಿ ಕೊಡಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮಕರ: ಕಟ್ಟಡ-ಕಾಮಗಾರಿ ಕೆಲಸಗಳಿಗೆ ಯೋಜನೆ ರೂಪಿಸಲಿದ್ದೀರಿ. ಗೃಹ ಸಂಬಂಧೀ ವಿಚಾರಗಳನ್ನು ಪರಾಮರ್ಶಿಸಿ ನಿರ್ಧರಿಸುವುದು ಉತ್ತಮ. ಸಹೋದರಾದಿ ಸಂಬಂಧಿಗಳ ಕಷ್ಟಕ್ಕೆ ನೆರವಾಗಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಕುಂಭ: ನಿಮ್ಮ ಬಗ್ಗೆ ಕೆಟ್ಟ ಮಾತನಾಡಿದವರೇ ಇಂದು ನಿಮ್ಮನ್ನು ಹೊಗಳುವ ಸಂದರ್ಭ ಬಂದೀತು. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ‍್ಧಿಯಾಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಮೀನ: ಮಹಿಳೆಯರಿಗೆ ಸ್ತ್ರೀ ಆರೋಗ್ಯ ಸಮಸ್ಯೆಗಳು ಎದುರಾದೀತು. ಕೌಟುಂಬಿಕವಾಗಿ ಇತರರ ಸಹಕಾರವಿರಲಿದೆ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

ಮುಂದಿನ ಸುದ್ದಿ