Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 26 ಅಕ್ಟೋಬರ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡರೆ ಕೆಲಸದಲ್ಲಿ ಯಶಸ್ಸು ಸಾಧ್ಯ. ಬೇರೆಯವರು ನಿಮ್ಮ ಬಗ್ಗೆ ಏನೇ ಹೇಳಿದರೂ ನಿಮ್ಮ ದಾರಿಯಲ್ಲಿ ಸಾಗುವುದು ಉತ್ತಮ. ಮಕ್ಕಳ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗಬೇಡಿ.

ವೃಷಭ: ಧನಾದಾಯಕ್ಕೆ ಕೊರತೆಯಾಗದು. ಆದರೆ ಅಷ್ಟೇ ಖರ್ಚೂ ಇರಲಿದೆ. ಮನೆಗೆ ಹೊಸ ಅತಿಥಿಗಳ ಆಗಮನ ಸಾಧ್ಯತೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮಿಥುನ: ಕಷ್ಟದ ಸಂದರ್ಭದಲ್ಲಿ ಜೊತೆಯಾಗಿದ್ದವರಿಗೆ ಈಗ ನಿಮ್ಮ ಅವಶ್ಯಕತೆ ಇರಲಿದೆ. ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ವಾಹನಾದಿ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಮಾತಿನಲ್ಲಿ ಆಡಿದ್ದನ್ನು ಮಾಡಿ ತೋರಿಸುವ ಕಾಲವಿದು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಉನ್ನತ ಅಧಿಕಾರಕ್ಕಾಗಿ ಅಧಿಕ ಪರಿಶ್ರಮ ಪಡಬೇಕಾದೀತು. ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರಲಿದೆ.

ಸಿಂಹ: ನಿಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರಗೆ ಹಾಕಲು ವೇದಿಕೆ ಸಿಗಲಿದೆ. ತಾಂತ್ರಿಕ ವೃತ್ತಿಯವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ದಾಂಪತ್ಯದಲ್ಲಿ ಸುಖ, ಸಮೃದ್ಧಿ ಕಂಡುಬರಲಿದೆ. ನೆರೆಹೊರೆಯವರಿಗೆ ಸಹಾಯ ಮಾಡಲಿದ್ದೀರಿ.

ಕನ್ಯಾ: ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ಯಾತ್ರಾರ್ಥಿಗಳಿಗೆ ಅಡೆತಡೆಗಳು ತೋರಿಬರಲಿದೆ. ನಿರುದ್ಯೋಗಿಗಳು ಶನಿ ದೇವರ ಪ್ರಾರ್ಥನೆ ಮಾಡಿ ಮುನ್ನಡೆಯುವುದು ಉತ್ತಮ.

ತುಲಾ: ಕಾಲಕ್ಕೆ ತಕ್ಕಂತೆ ನಿಮ್ಮ ಮನೋಭಾವ, ನಿರ್ಧಾರಗಳನ್ನು ಬದಲಾಯಿಸಿಕೊಳ್ಳಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ.

ವೃಶ್ಚಿಕ: ಸಾಂದರ್ಭಿಕವಾಗಿ ಆಡುವ ಮಾತುಗಳು ಇನ್ನೊಬ್ಬರ ಮೇಲೆ ಪರಿಣಾಮ ಬೀರಿತು. ಧನಾರ್ಜನೆ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ತಾಳ್ಮೆಯಿರಲಿ.

ಧನು:  ನಿಮ್ಮೊಂದಿಗೆ ಪ್ರೀತಿ ಮಾತನಾಡಿ ವಂಚಿಸುವವರಿರುತ್ತಾರೆ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಅಧ್ಯಯನಶೀಲರಿಗೆ, ವಿದ್ಯಾರ್ಥಿಗಳಿಗೆ ಉನ್ನತ ಅವಕಾಶ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಮಕರ: ದೈಹಿಕವಾಗಿ ಕೆಲಸದೊತ್ತಡವಿದ್ದರೂ ಮಾನಸಿಕವಾಗಿ ತೃಪ್ತಿ ಸಿಗಲಿದೆ. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ. ಮಕ್ಕಳ ಮನಸ್ಸಿಗೆ ಸಂತೋಷ ಕೊಡುವ ಕೆಲಸ ಮಾಡಲಿದ್ದೀರಿ. ನೆಂಟರಿಷ್ಟರ ಆಗಮನ ಸಾಧ‍್ಯತೆ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ. ಸಾಮಾಜಿವಕಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಬದಲಾವಣೆಗೆ ಸಿದ್ಧರಾಗಿ. ದಿನದಂತ್ಯಕ್ಕೆ ಶುಭ ಸುದ್ದಿ.

ಮೀನ: ಮಿತ್ರರ ನಡುವೆ ಭಿನ್ನಾಬಿಪ್ರಾಯಗಳಾಗುವ ಸಾಧ್ಯತೆ. ಆಡುವ ಮಾತಿನ ಮೇಲೆ ನಿಗಾ ಇರಲಿ. ಸಾಲದ ವಿಚಾರದಲ್ಲಿ ದಾಕ್ಷಿಣ್ಯದ ಪ್ರವೃತ್ತಿ ಸಲ್ಲದು. ದಂಪತಿಗಳ ನಡುವೆ ಪರಸ್ಪರ ಸಹಕಾರವಿರಲಿದೆ. ದೇವತಾ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಖಂಡಗ್ರಾಸ ಸೂರ್ಯಗ್ರಹಣ