ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 29 ಅಕ್ಟೋಬರ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಇನ್ನೊಬ್ಬರು ಹೇಳುವ ಚಾಡಿ ಮಾತುಗಳಬಗ್ಗೆ ಅನಗತ್ಯವಾಗಿ ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಉದ್ಯೋಗ, ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದ್ದೀರಿ. ಅನಗತ್ಯ ಚಿಂತೆ ಬೇಡ.

ವೃಷಭ: ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲು ಅಡೆತಡೆಗಳು ಬಂದೀತು. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ನೂತನ ಮಿತ್ರರ ಸಮಾಗಮ ನಡೆಯಲಿದೆ. ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾಗುವ ಖುಷಿ ನಿಮ್ಮದಾಗಲಿದೆ. ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಕರ್ಕಟಕ: ಮನೆಯಲ್ಲಿ ಸಣ್ಣ ಪುಟ್ಟ ಸಂಘರ್ಷಗಳು ಬರುವುದು ಸಹಜ. ತಾಳ್ಮೆಯಿಂದ ನಿಭಾಯಿಸಿಕೊಂಡು ಹೋಗಬೇಕಾಗುತ್ತದೆ ವಿದ್ಯಾರ್ಥಿಗಳಿಗೆ ಕಲಾ ಪ್ರದರ್ಶನಕ್ಕೆ ವೇದಿಕೆ ಸಿಗುವುದು. ದುಂದು ವೆಚ್ಚ ಬೇಡ.

ಸಿಂಹ: ಆರ್ಥಿಕವಾಗಿ ಹಣ ಗಳಿಕೆಗೆ ನಾನಾ ಮಾರ್ಗಗಳು ಕಂಡುಬರಲಿದೆ. ಆದರೆ ಸರಿಯಾದ ರೀತಿಯಲ್ಲಿ ತೊಡಗಿಸಿಕೊಳ್ಳಿ. ಮಿತ್ರರ ಕಷ್ಟಗಳಿಗೆ ನೆರವಾಗಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ‍್ಧತೆ ನಡೆಸಲಿದ್ದೀರಿ.

ಕನ್ಯಾ: ಮಿತ್ರರ ಮೇಲೆ ಅತಿಯಾಗಿ ಅವಲಂಬಿತವಾಗಿರುವುದು ಒಳ್ಳೆಯದಲ್ಲ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ನಿರ್ವಹಿಸಿ. ಪಾಲುದಾರಿಕೆ ಕ್ಷೇತ್ರದಲ್ಲಿ ಲಾಭ ಕಂಡುಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ತುಲಾ: ನಿಮ್ಮ ವಾಕ್ಚತುರತೆಯಿಂದ ವ್ಯವಾಹರದಲ್ಲಿ ಮುನ್ನಡೆ ಕಂಡುಬರಲಿದೆ. ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಸಂಗಾತಿಯ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಲಿದ್ದೀರಿ.

ವೃಶ್ಚಿಕ: ಗುರುಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ದೈಹಿಕ ಆರೋಗ್ಯ ಸಮಸ್ಯೆ ಪರಿಹಾರವಾಗಲಿದೆ. ಕಲಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ.

ಧನು: ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನ ಸಾಧ‍್ಯತೆ. ದೂರದ ವ್ಯವಹಾರದಿಂದ ಲಾಭ ನಿರೀಕ್ಷಿಸಬಹುದು. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ.

ಮಕರ: ದೀರ್ಘ ಪ್ರಯಾಣದಿಂದ ದೇಹಾಯಾಸವಾಗುವ ಸಾಧ‍್ಯತೆ. ಹಣಕಾಸಿನ ವಿಚಾರದಲ್ಲಿ ಅನ್ಯರ ಸಲಹೆಗಳಿಗೆ ಕಿವಿಗೊಡಬೇಡಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಬಹುಜನರ ಒಡನಾಟದಿಂದ ನಿಮ್ಮ ಕೆಲಸ ಕಾರ್ಯ ಸುಗಮವಾಗಲಿದೆ. ಮಹಿಳೆಯರಿಗೆ ತವರಿನ ಕಡೆಯಿಂದ ಶುಭ ಸುದ್ದಿ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.

ಮೀನ: ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗಲಿದೆ. ಕೆಳ ಹಂತದ ಉದ್ಯೋಗಿಗಳಿಗೆ ಉದ್ಯೋಗ ನಷ್ಟದ ಭೀತಿ. ಹಿರಿಯರಿಗೆ ಧಾರ್ಮಿಕ ಕೆಲಸಗಳಲ್ಲಿ ನೆಮ್ಮದಿ ಸಿಗಲಿದೆ. ಕೌಟುಂಬಿಕವಾಗಿ ಅಭಿವೃದ್ಧಿ, ನೆಮ್ಮದಿ ಸಿಗಲಿದೆ. ತಾಳ್ಮೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಕೃಪೆಗಾಗಿ ಶ್ರೀ ರುದ್ರ ಸ್ತುತಿಯನ್ನು ಇಂದು ತಪ್ಪದೇ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಇಂದು ತಪ್ಪದೇ ಓದಿ

ಶುಕ್ರವಾರ ಓದಬೇಕಾದ ಲಕ್ಷ್ಮೀ ಚಾಲೀಸಾ ಮಂತ್ರ

ಶ್ರೀಹರಿ ಸ್ತೋತ್ರಂ ಇಂದು ತಪ್ಪದೇ ಓದಿ

ಈ ರಾಶಿಯವರು ತಪ್ಪದೇ ದೀಪಾವಳಿಗೆ ಗೋ ಪೂಜೆ ಮಾಡಿ

ಮುಂದಿನ ಸುದ್ದಿ
Show comments