Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 1 ನವೆಂಬರ್ 2022 (08:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಎಷ್ಟೇ ಕಡಿವಾಣ ಹಾಕಿದರೂ ಖರ್ಚು ವೆಚ್ಚಗಳು ಆಗುತ್ತಲೇ ಇರುತ್ತವೆ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಸಮಯಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುವುದನ್ನು ಕಲಿಯಬೇಕಾಗುತ್ತದೆ.

ವೃಷಭ: ವಾಕ್ಚಾತುರ್ಯದಿಂದ ಎಲ್ಲರ ಗಮನಸೆಳೆಯಲಿದ್ದೀರಿ. ವ್ಯಾವಹಾರಿಕವಾಗಿ ಲಾಭ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ವಿವಾಹ ಪ್ರಾಪ್ತಿಯಾಗುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಮಿಥುನ: ಸಂತಾನಾಪೇಕ್ಷಿತ ದಂಪತಿಗಳಿಗೆ ಸದ್ಯದಲ್ಲೇ ಶುಭ ಸೂಚನೆ ಸಿಗಲಿದೆ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಕಾರ್ಯರಂಗದಲ್ಲಿ ಮೇಲಧಿಕಾರಿಗಳ ವಿಶ್ವಾಸ ಗಳಿಸಲಿದ್ದೀರಿ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಸ್ಥಾನ ಮಾನ ಸಿಗುವುದು. ಹಿರಿಯರ ಮಾತುಗಳಿಗೆ ಕಿವಿಗೊಡಬೇಕಾಗುತ್ತದೆ. ಕಾರ್ಯಕ್ಷೇತ್ರದಲ್ಲಿ ಹೊಸ ಜನರ ಭೇಟಿಯಾಗಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ.

ಸಿಂಹ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ದೂರದ ವ್ಯವಹಾರದಿಂದ ಲಾಭ ನಿರೀಕ್ಷಿಸಬಹುದು. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಉಳಿತಾಯದ ಬಗ್ಗೆ ಯೋಚನೆ ಮಾಡಲಿದ್ದೀರಿ.

ಕನ್ಯಾ: ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ಯಾವುದೇ ವಿಚಾರದ ಬಗ್ಗೆ ಕುಟುಂಬದವರೊಡನೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.

ತುಲಾ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ತಲ್ಲೀನತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಪಿತೃ ಸಮಾನರಿಂದ ಒಳ್ಳೆಯ ಸಲಹೆಗಳು ಬರಲಿವೆ. ದೇವತಾ ಕಾರ್ಯಗಳಿಗೆ ಅಡಚಣೆಗಳು ಎದುರಾಗಲಿವೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಸಾಂಸಾರಿಕವಾಗಿ ನಿಮ್ಮ ಸುಖ-ದುಃಖಗಳಲ್ಲಿ ಭಾಗಿಯಾಗಲು ಸಂಗಾತಿಯ ಸಾಥ್ ಇರಲಿದೆ. ಹೊಸ ಜನರ ಭೇಟಿಯಿಂದ ಮನಸ್ಸಿಗೆ ಉಲ್ಲಾಸವಾದೀತು. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಚಿಂತನೆ ಬರಲಿದೆ.

ಧನು: ಆತ್ಮೀಯರನ್ನು ಭೇಟಿಯಾದ ಖುಷಿ ನಿಮ್ಮದಾಗುವುದು. ಇಷ್ಟ ಭೋಜನ ಮಾಡಲಿದ್ದೀರಿ. ನಿಮಗೆ ತಿಳಿದ ವಿದ್ಯೆ ಇತರರಿಗೆ ಹೇಳಿಕೊಡಲಿದ್ದೀರಿ. ಗುರುಹಿರಿಯರ ಮಾರ್ಗದರ್ಶನ ಕಂಡುಬರಲಿದೆ. ಮನೆಯಲ್ಲಿ ಸಂತೋಷವಿರಲಿದೆ.

ಮಕರ: ಮಕ್ಕಳ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯ ಸಲಹೆ ಅಗತ್ಯ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ ಉಂಟಾದೀತು. ತಾಳ್ಮೆಯಿರಲಿ.

ಕುಂಭ: ದೇವತಾ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ನಿಮ್ಮ ಚಿಂತೆಗಳು ದೂರವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಮೀನ: ಗುರುಹಿರಿಯರ ಉತ್ತಮ ಮಾರ್ಗದರ್ಶನ ನಿಮಗೆ ಸಿಗುವುದು. ಬಹಳ ದಿನಗಳಿಂದ ಮಾಡಬೇಕೆಂದುಕೊಂಡಿದ್ದ ಕೆಲಸ ಪೂರ್ತಿ ಮಾಡಲಿದ್ದೀರಿ. ಸಾಂಸಾರಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga Mantra: ದುರ್ಗಾ ಅಷ್ಟೋತ್ತರ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

Shiva mantra: ಇಂದು ಶಿವ ಅಷ್ಟೋತ್ತರ ತಪ್ಪದೇ ಓದಿ

Surya Mantra: ಇಂದು ಸೂರ್ಯನ ಕುರಿತಾದ ಈ ಸ್ತೋತ್ರವನ್ನು ತಪ್ಪದೇ ಓದಿ

Anjaneya Mantra: ಶನಿದೋಷವಿದ್ದವರು ಆಂಜನೇಯನ ಈ ಸ್ತೋತ್ರವನ್ನು ಓದಿ

Lakshmi Mantra: ಮನಸ್ಸಿನ ಭಯ ದೂರ ಮಾಡಲು ಧೈರ್ಯ ಲಕ್ಷ್ಮಿ ಸ್ತೋತ್ರ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments