ಮೇಷ: ಬೇರೆಯವರಿಗೆ ನಿಮ್ಮ ಬಗ್ಗೆ ಸದಭಿಪ್ರಾಯ ಮೂಡುವಂತೆ ಮಾಡಲು ಪ್ರಯತ್ನಿಸಲಿದ್ದೀರಿ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಹಣಕಾಸಿನ ಖರ್ಚು ವೆಚ್ಚಗಳು ಕಂಡುಬಂದೀತು. ತಾಳ್ಮೆಯಿರಲಿ.
ವೃಷಭ: ಆಸ್ತಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಮುನ್ನಡೆಯ ಯೋಗ.
ಮಿಥುನ: ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಬಂಧು ಮಿತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ. ಕಾರ್ಯರಂಗದಲ್ಲಿ ಅಡಚಣೆಗಳು ತೋರಿಬಂದೀತು.
ಕರ್ಕಟಕ: ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗಲಿದೆ. ಹೊಸ ಕೆಲಸಕ್ಕೆ ಕೈ ಹಾಕುವ ಮುನ್ನ ಗುರುಹಿರಿಯರ ಸಲಹೆ ಪಡೆಯಿರಿ. ವಿದ್ಯಾರ್ಥಿಗಳಿಗೆ ಹೊಸದನ್ನು ಕಲಿಯುವ ಅವಕಾಶ ಸಿಗಲಿದೆ. ಕುಲದೇವರ ಪ್ರಾರ್ಥನೆ ಮಾಡಲಿದ್ದೀರಿ.
ಸಿಂಹ: ಉದ್ಯೋಗ, ವ್ಯವಹಾರದಲ್ಲಿ ಉನ್ನತಿಯ ಯೋಗ. ಇಷ್ಟಮಿತ್ರರರೊಂದಿಗೆ ಪ್ರವಾಸ ಮಾಡುವ ಯೋಗ. ಭೂ ವ್ಯವಹಾರಗಳು ಕೋರ್ಟ್ ಮೆಟ್ಟಿಲೇರಲಿದೆ. ಹಿರಿಯರು ಪುಣ್ಯ ಕ್ಷೇತ್ರದ ಸಂದರ್ಶನ ಮಾಡಲಿದ್ದಾರೆ.
ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಆಸಕ್ತಿ ಹೆಚ್ಚಾಗಲಿದೆ. ಸಹೋದರ ಸಮಾನರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.
ತುಲಾ: ನಿಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಬೆಳಕಿಗೆ ತರುವ ಅವಕಾಶ ಸಿಗಲಿದೆ. ಮನೆಯಲ್ಲಿ ಸಣ್ಣ ಪುಟ್ಟ ಕಿರಿ ಕಿರಿಗಳು ಸಾಮಾನ್ಯ. ಎಲ್ಲವನ್ನೂ ಎದುರಿಸಿಕೊಂಡು ಹೋಗುವ ತಾಳ್ಮೆ ಬೆಳೆಸಿಕೊಳ್ಳಬೇಕು. ಅನಗತ್ಯ ಚಿಂತೆ ಬೇಡ.
ವೃಶ್ಚಿಕ: ಆರ್ಥಿಕ ವಿಚಾರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಕೈ ಹಾಕಲಿದ್ಧೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ಪ್ರೇಮಿಗಳಿಗೆ ಸಂತೋಷದ ದಿನವಾಗಲಿದೆ.
ಧನು: ವಿವೇಚನೆಯಿಂದ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಅಪಾಯ ತಪ್ಪಬಹುದು. ವಿಶೇಷ ವ್ಯಕ್ತಿಗಳಿಂದ ನಿಮ್ಮ ಜೀವನಕ್ಕೆ ತಿರುವು ಸಿಗಲಿದೆ. ಸಾಂಸಾರಿಕವಾಗಿ ಪರಸ್ಪರ ಸಹಕಾರ, ನೆಮ್ಮದಿಯಿರಲಿದೆ.
ಮಕರ: ಮಕ್ಕಳ ವಿಚಾರದಲ್ಲಿ ಬಹುಮುಖ್ಯ ತೀರ್ಮಾನ ತೆಗೆದುಕೊಳ್ಳಲಿದ್ದೀರಿ. ನೆಂಟರಿಷ್ಟರ ಆಗಮನ ಸಾಧ್ಯತೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.
ಕುಂಭ: ಮುಂಬಡ್ತಿಗಾಗಿ ಕಾಯುತ್ತಿರುವ ಸರಕಾರಿ ನೌಕರರಿಗೆ ನಿರಾಸೆಯಾದೀತು. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಕಾರ್ಯನಿಮಿತ್ತ ಅಧಿಕ ಓಡಾಟದಿಂದ ದೇಹಾಯಾಸವಾದೀತು.
ಮೀನ: ಯೋಚಿಸಿದ ರೀತಿಯಲ್ಲೇ ಕೆಲಸಗಳು ನಡೆಯದು. ಆದರೆ ಸನ್ಮಿತ್ರರ ಸಹಕಾರ ನಿಮಗೆ ಉಪಯೋಗವಾಗಲಿದೆ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ.