Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 5 ನವೆಂಬರ್ 2022 (08:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಮಯ ಪ್ರಜ್ಞೆಯಿಂದ ಆಪ್ತರಿಗೆ ಆಗುವ ಅನಾಹುತ ತಪ್ಪಲಿದೆ. ಆರ್ಥಿಕವಾಗಿ ಹಣ ಗಳಿಕೆಗೆ ನಾನಾ ಮಾರ್ಗಗಳು ಕಂಡುಬರಲಿದೆ. ಮಾಡುವ ಕೆಲಸಗಳು ತೃಪ್ತಿ ಕೊಡುತ್ತಿಲ್ಲ ಎನಿಸಬಹುದು. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಮುಂದೆ ಮಾಡಬೇಕಾದ ಒಳ್ಳೆಯ ಕೆಲಸಕ್ಕೆ ಇಂದೇ ಅಡಿಗಲ್ಲು ಹಾಕುವಿರಿ. ಮಹಿಳೆಯರಿಗೆ ಮಂಗಲ ವಸ್ತು ಖರೀದಿಸುವ ಯೋಗ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ. ವ್ಯಾಪಾರಿಗಳಿಗೆ ಉನ್ನತಿಯ ಯೋಗ.

ಮಿಥುನ: ಧನ ಸಂಪತ್ತಿನಲ್ಲಿ ದಿಡೀರ್ ಏಳಿಗೆ ಕಾಣಲಿದ್ದೀರಿ. ವಿದ್ಯಾರ್ಥಿಗಳಿಗೆ ಅಧ್ಯಯನ ನಿಮಿತ್ತ ಪ್ರಯಾಣ ಮಾಡಬೇಕಾದೀತು. ಕೌಟುಂಬಿಕವಾಗಿ ಹೊಸ ಹೊಣೆಗಾರಿಕೆ ನಿಮ್ಮ ಹೆಗಲಿಗೇರಲಿದೆ. ತಾಳ್ಮೆಯಿರಲಿ.

ಕರ್ಕಟಕ: ಸಾಂಸಾರಿಕವಾಗಿ ಮಧ‍್ಯಮ ಸುಖ. ಪ್ರೇಮಿಗಳು ಮನಸ್ಸಿನ ಮಾತು ಹೇಳಲು ಅವಕಾಶ ಸಿಗಲಿದೆ. ಗೃಹ, ಆಸ್ತಿ ಖರೀದಿ  ವಿಚಾರದಲ್ಲಿ ಅಡೆತಡೆಗಳು ಕಂಡುಬಂದೀತು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ

ಸಿಂಹ: ಧನ ಗಳಿಕೆ ಮಾಡುವ ವಿಚಾರದಲ್ಲಿ ಸಾಹಸ ಪ್ರವೃತ್ತಿ ಮಾಡಲಿದ್ದೀರಿ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.

ಕನ್ಯಾ: ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಭೇಟಿ ಯೋಗ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ತುಲಾ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ವೃಶ್ಚಿಕ: ಕಟ್ಟಡ-ಕಾಮಗಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಗೃಹ ಸಂಬಂಧೀ ಕೆಲಸಗಳಿಗಾಗಿ ಅನಿರೀಕ್ಷಿತ ಖರ್ಚು ವೆಚ್ಚವಾಗಲಿದೆ. ನೂತನ ಮಿತ್ರರನ್ನು ಸಂಪಾದಿಸಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಧನು: ಲೇವಾದೇವಿ ವ್ಯವಹಾರ ಮಾಡುವವರಿಗೆ ಬಾಕಿ ಸಂದಾಯವಾಗಲಿದೆ. ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ ದೊರೆಯುವುದು. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಕೂಡಿಬರಲಿದೆ. ಅನಗತ್ಯ ಚಿಂತೆ ಬೇಡ.

ಮಕರ: ಮೇಲಧಿಕಾರಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವೈಯಕ್ತಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.

ಕುಂಭ: ಹಣಕಾಸಿನ ವಿಚಾರದಲ್ಲಿ ಶಿಸ್ತು ಪಾಲಿಸುವುದರಿಂದ ಮುಂದೆ ತೊಂದರೆಯಾಗದು. ಮಕ್ಕಳ ಭವಿಷ್ಯದ ಬಗ್ಗೆ ಸಂಗಾತಿಯೊಂದಿಗೆ ಚರ್ಚಿಸಲಿದ್ದೀರಿ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಮೀನ: ದೀರ್ಘ ಪ್ರಯಾಣ ಮಾಡಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ ಸಿಗಲಿದೆ. ಕೆಲಸದೊತ್ತಡದಿಂದಾಗಿ ಸಂಗಾತಿಯ ಕೋಪಕ್ಕೆ ಗುರಿಯಾಗುವ ಸಂಭವ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga Mantra: ದುರ್ಗಾ ಅಷ್ಟೋತ್ತರ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

Shiva mantra: ಇಂದು ಶಿವ ಅಷ್ಟೋತ್ತರ ತಪ್ಪದೇ ಓದಿ

Surya Mantra: ಇಂದು ಸೂರ್ಯನ ಕುರಿತಾದ ಈ ಸ್ತೋತ್ರವನ್ನು ತಪ್ಪದೇ ಓದಿ

Anjaneya Mantra: ಶನಿದೋಷವಿದ್ದವರು ಆಂಜನೇಯನ ಈ ಸ್ತೋತ್ರವನ್ನು ಓದಿ

Lakshmi Mantra: ಮನಸ್ಸಿನ ಭಯ ದೂರ ಮಾಡಲು ಧೈರ್ಯ ಲಕ್ಷ್ಮಿ ಸ್ತೋತ್ರ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments