Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 16 ನವೆಂಬರ್ 2022 (08:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಆರೋಗ್ಯದಲ್ಲಿ ತೃಪ್ತಿದಾಯಕ ಚೇತರಿಕೆ. ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷಕ್ಕೆ ದಾರಿ ಮಾಡಿಕೊಡಬೇಡಿ. ಕಾರ್ಯನಿಮಿತ್ತ ದೀರ್ಘ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ವ್ಯಾಪಾರಿಗಳಿಗೆ ಮುನ್ನಡೆಯಿರಲಿದೆ.

ವೃಷಭ: ನಿಮ್ಮ ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ.

ಮಿಥುನ: ಉದ್ಯೋಗ,ವ್ಯವಹಾರದಲ್ಲಿ ತಾಳ್ಮೆಯಿಂದ ವ್ಯವಹರಿಸುವುದು ಉತ್ತಮ. ಕ್ರಿಯಾತ್ಮಕ ಕೆಲಸಗಳಿಗೆ ತಕ್ಕ ಮನ್ನಣೆ ಸಿಗಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ.

ಕರ್ಕಟಕ: ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಹೊಸ ಯೋಜನೆಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಜ್ಞಾನ ಸಂಪಾದನೆಗೆ ಹೆಚ್ಚಿನ ಅವಕಾಶ ಸಿಗುವುದು.

ಸಿಂಹ: ಬಚ್ಚಿಟ್ಟುಕೊಂಡು ಮಾಡಿದ ಕೆಲಸಗಳು ಬಯಲಿಗೆ ಬರಲಿದೆ. ಗುರುಹಿರಿಯ ಮಾರ್ಗದರ್ಶನ ಲಭಿಸಲಿದೆ. ಕೌಟುಂಬಿಕವಾಗಿ ಹೊಸ ಹೊಣೆಗಾರಿಕೆಗೆ ಸಿದ್ಧರಾಗಬೇಕಾಗುತ್ತದೆ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಕಾಲ ಕೂಡಿಬರಲಿದೆ. ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷ ಬೇಡ. ಅನಿರೀಕ್ಷಿತವಾಗಿ ಧನಾಗಮನವಾಗಲಿದೆ. ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ.

ತುಲಾ: ನಿರುದ್ಯೋಗಿಗಳು ಸಂದರ್ಶನಕ್ಕಾಗಿ ಪರವೂರಿಗೆ ಪ್ರಯಾಣ ಬೆಳೆಸಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವೈಯಕ್ತಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ವೃಶ್ಚಿಕ: ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳುವುದರಿಂದ ಸಮಸ್ಯೆಗಳಿಂದ ಪಾರಾಗಬಹುದು. ಉನ್ನತಾಧಿಕಾರಿಗಳೊಂದಿಗೆ ಅನಗತ್ಯ ಸಂಘರ್ಷ ಬೇಡ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.

ಧನು: ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ವ್ಯಾಪಾರೀ ವರ್ಗದವರಿಗೆ ಹಿತ ಶತ್ರುಗಳ ಕಾಟ ಕಂಡುಬಂದೀತು. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆಗೆ ಸಿದ್ಧರಾಗಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಮಕರ: ನೀವು ನಂಬಿಕೊಂಡಿದ್ದವರಿಂದಲೇ ವಂಚನೆಗೊಳಗಾಗುವ ಸಾಧ‍್ಯತೆ. ಅತಿಯಾದ ಆತ್ಮವಿಶ್ವಾಸ ಒಳ‍್ಳೆಯದಲ್ಲ. ನೂತನ ಮಿತ್ರರ ಸಮಾಗಮ. ಸಾಂಸಾರಿಕವ ಸುಖ ಮಧ್ಯಮವಾಗಿರಲಿದೆ. ತಾಳ್ಮೆ, ಸಂಯಮ ಅಗತ್ಯ.

ಕುಂಭ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವಚ್ಚವಾಗಲಿದೆ. ಪರರಿಗೆ ಸಹಾಯ ಮಾಡುವ ಮುನ್ನ ಪೂರ್ವಾಪರ ತಿಳಿದು ಮುನ್ನಡೆಯಿರಿ. ವಿದ್ಯಾರ್ಥಿಗಳು ಶಿಕ್ಷಕ ವೃಂದದವರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ.

ಮೀನ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ. ಅನಿರೀಕ್ಷಿತ ಧನಾಗಮನದಿಂದ ವ್ಯವಹಾರದಲ್ಲಿ ಅಭಿವೃದ್ಧಿಯಾಗಲಿದೆ. ನಿರೀಕ್ಷಿತ ಸಮಯಕ್ಕೆ ಕಾರ್ಯ ಪೂರ್ತಿ ಮಾಡಿದ ಸಮಾಧಾನ ನಿಮ್ಮದಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?