Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 24 ನವೆಂಬರ್ 2022 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನೀವು ಅತಿಯಾಗಿ ನಂಬಿದ್ದವರಿಂದಲೇ ನೋವು ಅನುಭವಿಸುವ ಪರಿಸ್ಥಿತಿ ಎದುರಾದೀತು. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಸಿಗುವುದು. ಹೊಸ ಅವಕಾಶಗಳಿಗೆ ನಿಮ್ಮನ್ನು ನೀವು ತೆರೆದುಕೊಳ್ಳಲಿದ್ದೀರಿ.

ವೃಷಭ: ಅಧ್ಯಯನ ಶೀಲರಿಗೆ ಹೊಸ ಅವಕಾಶಗಳು ಕಂಡುಬರಲಿವೆ. ಪಾಲುದಾರಿಕೆ ವ್ಯವಹಾರದಲ್ಲಿ ಏಳು ಬೀಳುಗಳು ಸಾಮಾನ್ಯ. ಸಾಂಸಾರಿಕವಾಗಿ ಸುಖಕ್ಕೆ ಕೊರತೆಯಾಗದು. ಆಘಾತಕಾರಿ ಸುದ್ದಿ ಕೇಳಿಬಂದೀತು. ಎಚ್ಚರಿಕೆಯಿರಲಿ.

ಮಿಥುನ: ಸಾಂಸಾರಿಕವಾಗಿ ಕೆಲವೊಂದು ವಿಚಾರಗಳಿಂದ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾದೀತು. ವಾಸ್ತವ ಸ್ಥಿತಿ ಅರಿತು ಮುನ್ನಡೆಯಿರಿ. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷ ಬೇಡ. ದುಂದು ವೆಚ್ಚಕ್ಕೆ ಕಡಿವಾಣವಿರಲಿ.

ಕರ್ಕಟಕ: ವಿದೇಶದಲ್ಲಿ ಕೆಲಸ ಮಾಡುವ ವ್ಯಕ್ತಿಗಳಿಗೆ ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾಗುವ ಯೋಗ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿಬರುವುದು. ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಅಧಿಕ ದನ ಸಂಪಾದನೆಯ ಹಪಹಪಿ ಕಂಡುಬರಲಿದೆ. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡುವುದು ಮುಖ್ಯವಾಗುತ್ತದೆ. ರಾಜಕೀಯ ರಂಗದಲ್ಲಿರುವರಿಗೆ ಮುನ್ನಡೆ ಕಂಡುಬಂದೀತು. ತಾಳ್ಮೆಯಿರಲಿ.

ಕನ್ಯಾ: ಉದ್ಯೋಗ, ವ್ಯವಹಾರದಲ್ಲಿ ಹೆಚ್ಚಿನ ಜವಾಬ್ಧಾರಿ ನಿಮ್ಮದಾಗಲಿದೆ. ಕ್ರಿಯಾತ್ಮಕ ಯೋಜನೆಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ಕಟ್ಟಡ ಕಾಮಗಾರಿ ಕೆಲಸಕ್ಕೆ ಕೈ ಹಾಕಿದ್ದರೆ ಅಡಚಣೆಗಳು ಕಂಡುಬಂದೀತು. ವಿಘ್ನೇಶ್ವರನ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ವಿದ್ಯಾರ್ಥಿಗಳಿಗೆ ಅಧ‍್ಯಯನದಲ್ಲಿ ಆಸಕ್ತಿ. ಆರೋಗ್ಯದಲ್ಲಿ ಸುಧಾರಣೆ.

ವೃಶ್ಚಿಕ: ಮನಸ್ಸಿನಲ್ಲಿರುವ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಸಂದರ್ಭಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುವುದು ಮುಖ್ಯವಾಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಾಲ ಪಾವತಿಯಾಗಲಿದೆ.

ಧನು: ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಸಂಗಾತಿಯ ಮೇಲೆ ಕೋಪ-ತಾಪಗಳು ಕಂಡುಬರುವ ಸಾಧ‍್ಯತೆಯಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಮಾತಿನ ಮೇಲೆ ನಿಗಾ ಇರಲಿ.

ಮಕರ: ನಕಾರಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ನಿಮ್ಮಲ್ಲಿರುವ ಸುಪ್ತಪ್ರತಿಭೆಯನ್ನು ಬೆಳಕಿಗೆ ತರಲು ವೇದಿಕೆ ಸಿಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗುವ ಲಕ್ಷಣ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರುವುದು. ದಾಯಾದಿ ಕಲಹಗಳಿಗೆ ಅಂತ್ಯ ಹಾಡಲಿದ್ದೀರಿ. ಮಹಿಳೆಯರಿಗೆ ಮಂಗಲ ವಸ್ತ್ರ ಖರೀದಿ ಯೋಗ. ಅಪರಿಚಿತ ವ್ಯಕ್ತಿಗಳು ನಿಮ್ಮ ವ್ಯವಹಾರಕ್ಕೆ ನೆರವಾಗಲಿದ್ದಾರೆ.

ಮೀನ: ನಿಮ್ಮ ಕ್ಷಮಾಗುಣ ಕುಟುಂಬದವರಿಗೆ ಶ್ರೇಯಸ್ಸು ಉಂಟು ಮಾಡಲಿದೆ. ದೂರದ ಬಂಧುಗಳಿಂದ ಅನುಕೂಲವಾದೀತು. ಅನಿರೀಕ್ಷಿತ ಧನಾಗಮನವಾಗುವ ಯೋಗ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?