Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 3 ಡಿಸೆಂಬರ್ 2022 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅನಿರೀಕ್ಷಿತ ಧನಾಗಮನವಾಗಲಿದ್ದು, ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ನೆನೆಗುದಿಗೆ ಬಿದ್ದಿದ್ದ ಕೆಲಸಕ್ಕೆ ಮರು ಚಾಲನೆ ನೀಡಲಿದ್ದೀರಿ.ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷ ಬೇಡ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಮುನ್ನಡೆ ಕಂಡುಬರುವುದು. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ಕಂಡುಬಂದೀತು. ಸುಬ್ರಹ್ಮಣ್ಯನ ಪ್ರಾರ್ಥನೆಯಿಂದ ನೆಮ್ಮದಿ ಸಿಗುವುದು. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಸಕಾಲದಲ್ಲಿ ಹಣಕಾಸಿನ ನೆರವು ಸಿಗುವುದರಿಂದ ಸಂಭಾವ್ಯ ಸಮಸ್ಯೆಯಿಂದ ಪಾರಾಗಲಿದ್ದೀರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ಅಪರಿಮಿತ ಕೆಲಸದಿಂದ ದೇಹಾಯಾಸವಾದೀತು. ಹೊಸದಾಗಿ ಪರಿಚಯವಾಗಿದ್ವರಿಂದ ನಿಮ್ಮ ಕೆಲಸಗಳಿಗೆ ಅನುಕೂಲವಾದೀತು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ತಾಳ್ಮೆಯಿರಲಿ.

ಸಿಂಹ: ವಿದೇಶ ವ್ಯವಹಾರಗಳಲ್ಲಿ ಆಸಕ್ತಿ ಕಂಡುಬರಲಿದೆ. ನಾನಾ ರೀತಿಯ ಹೂಡಿಕೆ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕನ್ಯಾ: ಕೌಟುಂಬಿಕವಾಗಿ ಹೊಸ ನೆಂಟಸ್ಥಿಕೆ ಕೂಡಿ ಬರಲಿದೆ. ಅಪರಿಮಿತ ಆತ್ಮವಿಶ್ವಾಸದಿಂದ ತೊಂದರೆಗೆ ಸಿಲುಕಿಕೊಳ್ಳಬೇಡಿ. ಆಸ್ತಿ ಖರೀದಿ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ನಿಮ್ಮ ಗೌರವಕ್ಕೆ ಧಕ್ಕೆ ತರುವ ಸಂದರ್ಭಗಳು ಎದುರಾದೀತು. ಆಪ್ತರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಕ್ರಿಯಾತ್ಮಕ ಕೆಲಸಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ಧನು: ಕಾರ್ಯರಂಗದಲ್ಲಿ ಸಹೋದ್ಯೋಗಿಗಳ ಸಹಕಾರ ಕಂಡುಬರಲಿದೆ. ಕೌಟುಂಬಿಕವಾಗಿ ಪರಸ್ಪರ ಸಹಕಾರ, ಸಮೃದ್ಧಿ ಕಂಡುಬರುವುದು. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ಎಚ್ಚರಿಕೆಯಿರಲಿ.

ಮಕರ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕಳೆದು ಹೋದ ವಸ್ತು ಮರಳಿ ಕೈ ಸೇರಲಿದೆ. ಅನಗತ್ಯ ಚಿಂತೆ ಬೇಡ.

ಕುಂಭ: ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ ನಿಮ್ಮದಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮೀನ: ಉದ್ಯೋಗ ವಿಚಾರವಾಗಿ ಬಹುಜನರ ಸಂಪರ್ಕ ಮಾಡಲಿದ್ಧೀರಿ. ಕನಸಿನಲ್ಲಿ ಕಂಡ ವಿಚಾರ ನಿಮ್ಮ ಮನಸ್ಸಿನ ನೆಮ್ಮದಿಗೆ ಭಂಗ ತಂದೀತು. ಬಂಧು ಮಿತ್ರರ ಆಗಮನದಿಂದ ಮನೆಯಲ್ಲಿ ಸಂತೋಷ ಹೆಚ್ಚಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?