ಮೇಷ: ಮಕ್ಕಳ ದೇಹಾರೋಗ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ಅನಗತ್ಯ ಸಂಘರ್ಷಗಳಿಗೆ ಎಡೆ ಮಾಡಿಕೊಡದಿರಿ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ.
ವೃಷಭ: ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮನೆಯಲ್ಲಿ ಸಂತೋಷ, ಸಮೃದ್ಧಿ ಕಂಡುಬಂದೀತು. ಅನಗತ್ಯ ಚಿಂತೆ ಬೇಡ.
ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಇಷ್ಟವಿಲ್ಲದೇ ಇದ್ದರೂ ಕೆಲವೊಂದು ಕೆಲಸಕ್ಕೆ ಕೈ ಹಾಕಬೇಕಾಗುತ್ತದೆ. ಸಂಗಾತಿಯ ಸಲಹೆ ಪಾಲಿಸುವುದು ಮುಖ್ಯ. ಇಷ್ಟಮಿತ್ರರೊಂದಿಗೆ ಉತ್ತಮ ಭೋಜನ ಸವಿಯುವ ಯೋಗ. ತಾಳ್ಮೆಯಿರಲಿ.
ಕರ್ಕಟಕ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ. ಆತ್ಮೀಯರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ಅನಿರೀಕ್ಷಿತ ಧನಾಗಮನ ಮನಸ್ಸು ಚಂಚಲವಾಗಿಸೀತು. ಹಿರಿಯರ ಸಲಹೆ ಪಾಲಿಸುವುದು ಉತ್ತಮ.
ಸಿಂಹ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಕಟ್ಟಡ ಕಾಮಗಾರಿಗಳನ್ನು ಆರಂಭಿಸಿದ್ದರೆ ವಿಘ್ನಗಳು ಎದುರಾದೀತು. ಕುಲದೇವರ ಪ್ರಾರ್ಥನೆ ಮಾಡುವುದು ಉತ್ತಮ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.
ಕನ್ಯಾ: ವ್ಯಾವಹಾರಿಕವಾಗಿ ನಿಮಗೆ ಅಡ್ಡಿ ಆತಂಕಗಳಿದ್ದರೂ ಕುಟುಂಬದವರ ಸಹಕಾರ ನೆಮ್ಮದಿ ನೀಡುವುದು. ಸಂಗಾತಿಯಿಂದ ಅಚ್ಚರಿಯ ಉಡುಗೊರೆ ನಿರೀಕ್ಷಿಸಬಹುದು. ಕಿರು ಸಂಚಾರ ಮಾಡಲಿದ್ದೀರಿ.
ತುಲಾ: ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ್ಯತೆ. ದೂರದ ವ್ಯವಹಾರಗಳಿಗೆ ಅನ್ಯರ ಸಹಾಯ ಪಡೆಯಲಿದ್ದೀರಿ.
ವೃಶ್ಚಿಕ: ದೈಹಿಕವಾಗಿ ಆರೋಗ್ಯ ಸುಧಾರಣೆಯಾಗಿದ್ದರೂ ಹಳೆಯ ವಿಚಾರಗಳಿಗೆ ಮನಸ್ಸು ಕೆಡಿಸಿಕೊಳ್ಳುವಿರಿ. ಸಂಗಾತಿಯೊಂದಿಗೆ ಅನಗತ್ಯ ಘರ್ಷಣೆ ಬೇಡ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ.
ಧನು: ಮನೆ ರಿಪೇರಿ ಕೆಲಸಗಳಿಗಾಗಿ ಖರ್ಚು ವೆಚ್ಚವಾದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾಗುವ ಸಾಧ್ಯತೆ. ಕಾರ್ಯಕ್ಷೇತ್ರದಲ್ಲಿ ಎದುರಾಳಿಗಳಿಂದ ಪೈಪೋಟಿ ಎದುರಾಗಿದೆ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.
ಮಕರ: ಸರಕಾರಿ ನೌಕರರಿಗೆ ಕಾರ್ಯರಂಗದಲ್ಲಿ ಮುನ್ನಡೆಯ ಯೋಗ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ನಿರೀಕ್ಷಿಸಬಹುದು. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಕುಂಭ: ನೀವು ಮಾಡುವ ಕೆಲಸದ ಬಗ್ಗೆ ಎಷ್ಟೇ ನಂಬಿಕೆಯಿದ್ದರೂ ಇತರರು ನಿಮ್ಮನ್ನು ಸಂಶಯದ ದೃಷ್ಟಿಯಿಂದ ನೋಡಲಿದ್ದಾರೆ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಕುಲದೇವರ ಪ್ರಾರ್ಥನೆ ಮಾಡಿ.
ಮೀನ: ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಶಾರೀರಿಕ ಸೌಖ್ಯವಾಗಲಿದೆ. ದಂಪತಿಗಳು ಸುಂದರ ಕ್ಷಣ ಕಳೆಯುವ ಯೋಗ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.