ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ನಿಮಗೆ ಅರಿವಿಗೆ ಬಾರದೇ ನಡೆಯುವ ಘಟನೆಗಳು ನಿಮ್ಮ ಚಿಂತೆಗೆ ಕಾರಣವಾದೀತು. ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.
ವೃಷಭ: ನಿಮ್ಮ ಬಹುದಿನಗಳ ಕನಸು ನನಸು ಮಾಡಿಕೊಳ್ಳಲಿದ್ದೀರಿ. ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ತಾಳ್ಮೆಯಿರಲಿ.
ಮಿಥುನ: ಕೈಯಲ್ಲಿ ಬೆಣ್ಣೆಯಿಟ್ಟುಕೊಂಡು ತುಪ್ಪಕ್ಕಾಗಿ ಊರೆಲ್ಲಾ ಅಲೆದಾಡುವ ಪರಿಸ್ಥಿತಿ ನಿಮ್ಮದಾದೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ವ್ಯಾಪಾರಿಗಳಿಗೆ ಆರ್ಥಿಕ ಮುನ್ನಡೆಯಿರಲಿದೆ. ಚಿಂತೆ ಬೇಡ.
ಕರ್ಕಟಕ: ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ವೈಯಕ್ತಿಕ ಜೀವನದಲ್ಲಿ ಏರುಪೇರು ಕಂಡುಬಂದೀತು. ಕುಲದೇವರ ಪ್ರಾರ್ಥನೆ ಮಾಡಿ.
ಸಿಂಹ: ಉದ್ಯೋಗ, ವ್ಯವಹಾರದಲ್ಲಿ ಸುಧಾರಣೆ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾದರೂ ಕ್ಷಣ ಮಾತ್ರದಲ್ಲಿ ಪರಿಹಾರ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.
ಕನ್ಯಾ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದು.
ತುಲಾ: ನೂತನ ಮಿತ್ರರ ಸಮಾಗಮವಾಗಲಿದೆ. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗುವುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ.
ವೃಶ್ಚಿಕ: ಹೊಸದಾಗಿ ಆರಂಭಿಸಿದ್ದ ಉದ್ದಿಮೆಯಲ್ಲಿ ಏಳಿಗೆ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ. ಧನ ಸಂಪತ್ತು ವೃದ್ಧಿಯಾಗಲಿದೆ. ವಾಹನ ಖರೀದಿ ಕನಸು ನನಸು ಮಾಡಲಿದ್ದೀರಿ.
ಧನು: ಬಹಳ ದಿನಗಳ ನಂತರ ಬಂಧು ಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗುವುದು. ದೇಹಾರೋಗ್ಯದ ಸಮಸ್ಯೆಗಳು ಸುಧಾರಿಸಲಿವೆ. ಮನೆ ಕೆಲಸಗಳಲ್ಲಿ ಮಗ್ನರಾಗಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.
ಮಕರ: ಮಹಿಳೆಯರಿಗೆ ಉದ್ಯೋಗ ಸಂಬಂಧವಾದ ಕೆಲವು ಸಮಸ್ಯೆಗಳು ಎದುರಾದೀತು. ದೀರ್ಘ ಪ್ರಯಾಣ ಮಾಡಬೇಕಾದ ಸಂದರ್ಭ ಎದುರಾದೀತು. ನಯವಂಚಕರ ಹುನ್ನಾರಗಳು ಬಯಲಿಗೆ ಬರಲಿವೆ. ಅನಗತ್ಯ ಮಾತು ಬೇಡ.
ಕುಂಭ: ನಿಮ್ಮ ಮಾತಿನಿಂದಲೇ ಇತರರನ್ನು ಮೋಡಿ ಮಾಡಲಿದ್ದೀರಿ. ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಸರಕಾರೀ ನೌಕರರಿಗೆ ಮುಂಬಡ್ತಿ ಯೋಗ. ಚಿಂತೆ ಬೇಡ.
ಮೀನ: ಆಸ್ತಿ ವಿಚಾರಗಳು ಕೋರ್ಟು ಮೆಟ್ಟಿಲೇರಿದ್ದರೆ ನಿಮ್ಮ ಪರವಾಗಿ ನಿರ್ಣಯ ಬರಲಿದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ ಮಾಡಲಿದ್ದೀರಿ. ಆರೋಗ್ಯದಲ್ಲಿ ವೃದ್ಧಿ.