Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 20 ಡಿಸೆಂಬರ್ 2022 (08:19 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಾಕ್ಚತರುತೆಯಿಂದ ನಿಮ್ಮ ಕಾರ್ಯ ಸಾಧನೆ ಮಾಡಲಿದ್ದೀರಿ. ಸರಕಾರೀ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಗೆ ಭಂಗ ಉಂಟಾದೀತು. ಸ್ವ ಸಾಮರ್ಥ್ಯದಿಂದ ಮುಂದೆ ಬರಲಿದ್ದೀರಿ.

ವೃಷಭ: ಅಧಿಕ ಧನಾರ್ಜನೆಗಾಗಿ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ  ಕೂಡಿಬರಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ತಾಳ್ಮೆಯಿರಲಿ.

ಮಿಥುನ: ದೈವಾನುಗ್ರಹದಿಂದ ನಿಮ್ಮ ಕೆಲಸ ಕಾರ್ಯಗಳು ಇಂದು ಅಡೆತಡೆಯಿಲ್ಲದೇ ಪೂರ್ತಿಯಾಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಂದರ್ಶನ ಕರೆ ಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ಕರ್ಕಟಕ: ಗುರುಹಿರಿಯರ ಮಧ‍್ಯಸ್ಥಿಕೆಯಿಂದ ಆಸ್ತಿ ವಿವಾದಗಳು ಬಗೆಹರಿಯಲಿವೆ. ಸಾಂಸಾರಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ಕೆಲಸ ಕಾರ್ಯಗಳಿಗಾಗಿ ಹೆಚ್ಚಿನ ಪರಿಶ್ರಮ ಪಡಬೇಕಾದೀತು. ಅಧಿಕ ಓಡಾಟದಿಂದ ದೇಹಾಯಾಸವಾಗುವ ಸಾಧ‍್ಯತೆ. ಅನ್ಯರಿಗೆ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಸಾಂಸಾರಿಕವಾಗಿ ತೃಪ್ತಿ ಇರಲಿದೆ.

ಕನ್ಯಾ: ಧಾರ್ಮಿಕ ವಿಚಾರದಲ್ಲಿ ಧನವ್ಯಯವಾಗಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ವ್ಯಾಪಾರಿಗಳಿಗೆ ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ.

ತುಲಾ: ಹಣಕಾಸಿನ ವಿಚಾರದಲ್ಲಿ ಹೊಸ ಸಾಹಸಕ್ಕೆ ಕೈ ಹಾಕಲಿದ್ದೀರಿ. ಆರ್ಥಿಕ ವಿಚಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಸ್ವಯಂ ವೃತ್ತಿಯವರಿಗೆ ಮುನ್ನಡೆ ಕಂಡುಬರಲಿದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ.

ವೃಶ್ಚಿಕ: ಮನಸ್ಸಿನಲ್ಲಿರುವ ಯೋಜನೆಯನ್ನು ಜಾರಿಗೆ ತರಲು ಇದು ಸಕಾಲ. ಆಸ್ತಿ ವಿಚಾರದಲ್ಲಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಹೊಸದಾಗಿ ಪರಿಚಯವಾದ ವ್ಯಕ್ತಿಗಳಿಂದ ನಿಮಗೆ ಅನುಕೂಲವಾದೀತು. ಚಿಂತೆ ಬೇಡ.

ಧನು: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ದೇಹಾರೋಗ್ಯದಲ್ಲಿ ಏರುಪೇರಾದೀತು. ಮಕ್ಕಳಿಂದ ನೆಮ್ಮದಿ ಸಿಗಲಿದೆ.

ಮಕರ: ನಿಮ್ಮ ಕೆಲಸಗಳಿಗೆ ಇನ್ನೊಬ್ಬರನ್ನು ಅವಲಂಬನೆಯಾಗುವ ಅನಿವಾರ್ಯತೆ. ಹಣಕಾಸಿನ ವಿಚಾರದಲ್ಲಿ ನಿಮ್ಮ ಅಜಾಗರೂಕತೆಯಿಂದ ನಷ್ಟವಾದೀತು. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾಗುತ್ತದೆ.

ಕುಂಭ: ಗುರುಹಿರಿಯರಿಂದ ನಿಮ್ಮ ಸಂತೋಷ ವೃದ್ಧಿಯಾಗಲಿದೆ. ಸಂತಾನಹೀನ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಉದ್ಯೋಗ ಕ್ಷೇತ್ರದಲ್ಲಿ ಸೂಕ್ತ ಗೌರವ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಉದ್ಯೋಗ, ವ್ಯವಹಾರದಲ್ಲಿ ಬದಲಾವಣೆ ಕಂಡುಬರಲಿದೆ. ಮನೋರಂಜನಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ನೆರೆಹೊರೆಯವರೊಂದಿಗೆ ಅನಗತ್ಯ ಚರ್ಚೆಗೆ ಆಸ್ಪದ ಕೊಡಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments