Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 22 ಡಿಸೆಂಬರ್ 2022 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಘರ್ಷಣೆಗೆ ಅವಕಾಶ ನೀಡದೇ ನಾಜೂಕಾಗಿ ಕೆಲಸ ನಿಭಾಯಿಸಬೇಕಾಗುತ್ತದೆ. ಸಾಂಸಾರಿಕವಾಗಿ ತಾಳ್ಮೆಯಿರಲಿ. ಹಣಕಾಸಿನ ವಿಚಾರದಲ್ಲಿ ಅಡೆತಡೆಗಳು ಬಂದೀತು. ಭೂಮ್ಯಾದಿ ವ್ಯವಹಾರಗಳಲ್ಲಿ ಅನುಕೂಲವಾದೀತು.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿದಾಯಕ ಬದಲಾವಣೆ. ಸಹವಾಸ ದೋಷದಿಂದ ಕೆಲವೊಂದು ದುಶ್ಚಟಗಳು ಬಂದೀತು. ಹಿರಿಯರ ಸಲಹೆ ಪಡೆಯುವುದು ಉತ್ತಮ. ಕಾರ್ಯನಿಮಿತ್ತ ಪರರನ್ನು ಅವಲಂಬಿಸಬೇಕಾಗುತ್ತದೆ.

ಮಿಥುನ: ಅನ್ಯರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದೇಹಾರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಕಂಡುಬರಲಿದೆ.

ಕರ್ಕಟಕ: ನಿರೀಕ್ಷೆಯಂತೇ ಕಾರ್ಯಗಳು ನಡೆಯಲಿರುವುದರಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಹೊಸದಾಗಿ ಪರಿಚಯವಾದವರಿಂದ ಕಾರ್ಯಾನುಕೂಲವಾದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಸಿಂಹ: ವಯಸ್ಸಿನಲ್ಲಿ ನಿಮ್ಮಿಂದ ಕಿರಿಯರಾದರೂ ಅವರು ನೀಡುವ ಸಲಹೆಗಳನ್ನು ಅಲಕ್ಷಿಸದಿರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಪ್ರಯಾಣಕ್ಕೆ ಸಿದ್ಧತೆ ನಡೆಸಿದ್ದರೂ ವಿಘ್ನಗಳು ಕಂಡುಬಂದೀತು. ತಾಳ್ಮೆಯಿರಲಿ.

ಕನ್ಯಾ: ಕಾರ್ಯನಿಮಿತ್ತ ಅನ್ಯ ಊರಿಗೆ ಪ್ರಯಾಣ ಬೆಳೆಸಬೇಕಾಗುತ್ತದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಇಷ್ಟ ಭೋಜನ ಮಾಡುವ ಯೋಗ. ಅನಗತ್ಯ ಚಿಂತೆ ಬೇಡ.

ತುಲಾ: ದೈವಾನುಗ್ರಹದಿಂದ ಇಂದು ನೀವು ಅಂದುಕೊಂಡ ಕೆಲಸ ಸುಗಮವಾಗಿ ನೆರವೇರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಲ್ಯಾಣ ಪ್ರಾಪ್ತಿಯಾಗಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ, ನೆಮ್ಮದಿಯಿರಲಿದೆ.

ವೃಶ್ಚಿಕ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಪರರ ವಸ್ತುವಿನ ಮೇಲೆ ವ್ಯಾಮೋಹ ಬೆಳೆದೀತು. ಸಂಗಾತಿಗೆ ಅಚ್ಚರಿಯ ಉಡುಗೊರೆ ನೀಡಲಿದ್ದೀರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ.

ಧನು: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಕಂಡುಬರಲಿದೆ. ಇಷ್ಟ ವ್ಯಕ್ತಿಗಳ ಭೇಟಿಯಾಗಲಿದ್ದು, ಮನಸ್ಸಿಗೆ ಸಂತೋಷವಾಗಲಿದೆ. ಶೈಕ್ಷಣಿಕ ರಂಗದಲ್ಲಿರುವವರಿಗೆ ಪ್ರಗತಿ ಕಂಡುಬರುವುದು. ದೇವತಾ ಪ್ರಾರ್ಥನೆ ಮಾಡಿ.

ಮಕರ: ಸಂದರ್ಭಕ್ಕೆ ತಕ್ಕಂತೆ ನಿಮ್ಮ ಕೆಲಸ ಕಾರ್ಯಗಳಲ್ಲಿ ಕೊನೆಯ ಗಳಿಗೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾಗಬಹುದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಕಿರು ಸಂಚಾರ ಮಾಡಲಿದ್ದೀರಿ.

ಕುಂಭ: ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳು ಸಾಮಾನ್ಯ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗಬೇಕಾಗುತ್ತದೆ. ಮಕ್ಕಳ ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.

ಮೀನ: ಮನಸ್ಸಿನಲ್ಲಿ ಎಷ್ಟೇ ಆಸೆಯಿದ್ದರೂ ಅದುಮಿಟ್ಟುಕೊಳ್ಳಬೇಕಾದ ಪರಿಸ್ಥಿತಿ ಬರಲಿದೆ. ಸಹೋದ್ಯೋಗಿಗಳ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಸಾಲಗಾರರಿಂದ ಮುಕ್ತಿ. ಕುಲದೇವರ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?