Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 23 ಡಿಸೆಂಬರ್ 2022 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಾಹನ, ಭೂಮಿ ಖರೀದಿ ವಿಚಾರದಲ್ಲಿ ಅಡೆತಡೆಗಳು ಬಂದೀತು. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಯಂತ್ರೋಪಕರಣಗಳ ಕೆಲಸಗಳನ್ನು ಮಾಡುವಾಗ ಎಚ್ಚರಿಕೆಯಿರಲಿ. ಪಾಲುದಾರಿಕೆ ಕ್ಷೇತ್ರದಲ್ಲಿ ಅನಿರೀಕ್ಷಿತ ಪ್ರಗತಿ. ದುಂದು ವೆಚ್ಚಕ್ಕೆ ಕಡಿವಾಣವಿರಲಿ.

ಕರ್ಕಟಕ: ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲಸ ಪೂರ್ತಿ ಮಾಡಲಿದ್ದೀರಿ. ಸಂಗಾತಿಯ ಸಹಕಾರ ಸಿಗಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನ ಸಿಗಲಿದೆ. ಸಾಂಸಾರಿಕವಾಗಿ ತೃಪ್ತಿ, ನೆಮ್ಮದಿ ಇರಲಿದೆ. ಅತಿಯಾದ ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಕುಲದೇವರ ಪ್ರಾರ್ಥನೆ ಮಾಡಿ.

ಕನ್ಯಾ: ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ತುಲಾ: ನಿಮ್ಮಲ್ಲಿರುವ ಕ್ರಿಯಾತ್ಮಕ ವಿಚಾರಗಳನ್ನು ಹೊರ ತರಲು ಇದು ಸಕಾಲ. ಹಣಕಾಸಿನ ವಿಚಾರದಲ್ಲಿ ಅನ್ಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಕೆಳ ಹಂತದ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ತಾಳ್ಮೆಯಿರಲಿ.

ವೃಶ್ಚಿಕ: ಕಾರ್ಯಕ್ಷೇತ್ರದಲ್ಲಿ ನಿಮಗೆ ಹೊಸ ಪ್ರತಿಸ್ಪರ್ಧಿಗಳು ಹುಟ್ಟಿಕೊಳ್ಳಲಿದ್ದಾರೆ. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕಾಗುತ್ತದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗಲಿದೆ.

ಧನು: ಮಾತಿನಲ್ಲಿ ಸಹನೆ ಇರಲಿ. ಇನ್ನೊಬ್ಬರ ವಿಚಾರಕ್ಕೆ ಮೂಗು ತೂರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಮಾನಸಿಕವಾಗಿ ನೆಮ್ಮದಿಯಿರಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣವಿರಲಿದೆ.

ಮಕರ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ, ಅಧ‍್ಯಯನಶೀಲರಿಗೆ ಹೊಸ ಅವಕಾಶಗಳು ತೋರಿಬರಲಿವೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಹಿರಿಯರಿಗೆ ಪುಣ್ಯಕ್ಷೇತ್ರಗಳ ಸಂದರ್ಶನ ಯೋಗ.

ಕುಂಭ: ಆಸ್ತಿ, ವಾಹನಾದಿ ಖರೀದಿ ಪ್ರಕ್ರಿಯೆಯಲ್ಲಿ ಮುನ್ನಡೆ ಕಂಡುಬರಲಿದೆ. ವ್ಯವಹಾರದಲ್ಲಿ ನಿರೀಕ್ಷಿತ ಧನಾಗಮನವಾಗದಿದ್ದರೂ ನಷ್ಟವಾಗದು. ಸಂದರ್ಭಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ.

ಮೀನ: ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ವಿನೋದ ಯಾತ್ರೆ ಕೈಗೊಳ್ಳುವ ಅವಕಾಶ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?