ಮೇಷ: ಶಾರೀರಿಕ ಸುಖ ವೃದ್ಧಿಯಾಗಲಿದ್ದು, ಹೊಸ ಆಲೋಚನೆಗಳು ನಿಮ್ಮಲ್ಲಿ ಉತ್ಸಾಹ ತುಂಬಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ಅಷ್ಟೇ ಖರ್ಚೂ ಇರಲಿದೆ. ತಾಳ್ಮೆಯಿರಲಿ.
ವೃಷಭ: ಹೆಚ್ಚು ಜನ ಸಂಪರ್ಕದಿಂದ ನಿಮ್ಮ ಬಲ ವೃದ್ಧಿಯಾಗಲಿದೆ. ಬಂಧು ಮಿತ್ರರಿಂದ ಸಹಕಾರ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಸಿಗಲಿವೆ. ಕುಲದೇವರ ಪ್ರಾರ್ಥನೆ ಮಾಡಿ.
ಮಿಥುನ: ನಿಮ್ಮ ಬಲಹೀನತೆಯನ್ನು ಇತರರು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ. ಎಚ್ಚರಿಕೆ ಅಗತ್ಯ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.
ಕರ್ಕಟಕ: ಅನಿರೀಕ್ಷಿತ ಧನಾಗಮನವಾಗಲಿದ್ದು, ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಮೈಮರೆತು ತೊಂದರೆಗೆ ಸಿಲುಕಿಕೊಳ್ಳುವ ಸಾಧ್ಯತೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ತಾಳ್ಮೆ ಅಗತ್ಯ.
ಸಿಂಹ: ವಿಶೇಷವಾದ ವ್ಯಕ್ತಿಗಳು ನಿಮ್ಮ ಜೀವನಕ್ಕೆ ಇಂದು ಹೊಸ ತಿರುವು ನೀಡಲಿದ್ದಾರೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗಲಿದೆ. ಹಣಕಾಸಿನ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.
ಕನ್ಯಾ: ಕಾರ್ಯರಂಗದಲ್ಲಿ ನಿಮ್ಮ ಮೇಲೆ ಇತರರಿಗೆ ಗೌರವ ವೃದ್ಧಿಯಾಗಲಿದೆ. ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬಂದೀತು. ಸಾಂಸಾರಿಕವಾಗಿ ನೆಮ್ಮದಿ.
ತುಲಾ: ನೀವು ಆಡುವ ಮಾತಿನಿಂದ ಇತರರೊಂದಿಗೆ ಸಂಘರ್ಷಗಳಾಗುವ ಸಾಧ್ಯತೆ. ಮಾತಿನ ಮೇಲೆ ನಿಗಾ ಇರಲಿ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬಂದೀತು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.
ವೃಶ್ಚಿಕ: ಕಟ್ಟಡ ಕಾಮಗಾರಿ ಕೆಲಸಗಳಿಗೆ ವಿಘ್ನಗಳು ತೋರಿಬಂದೀತು. ಕೆಳ ಹಂತದ ನೌಕರರೊಂದಿಗೆ ನಯವಾಗಿ ನಡೆದುಕೊಳ್ಳಬೇಕಾಗುತ್ತದೆ. ಹಿರಿಯರ ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.
ಧನು: ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆ. ಇಷ್ಟಮಿತ್ರರೊಂದಿಗೆ ಭೋಜನ ಮಾಡುವ ಯೋಗ. ಸಹೋದ್ಯೋಗಿಗಳ ಸಹಾಯದಿಂದ ಕಾರ್ಯರಂಗದಲ್ಲಿ ಜಯ ಪ್ರಾಪ್ತಿಯಾಗಲಿದೆ. ಅನಗತ್ಯ ಚಿಂತೆ ಬೇಡ.
ಮಕರ: ದೇಹಾರೋಗ್ಯದ ಬಗ್ಗೆ ಇಲ್ಲಸಲ್ಲದ ಯೋಚನೆ ಬೇಡ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ಕೊಡಲಿದ್ದೀರಿ. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಯಶಸ್ಸು ಸಿಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.
ಕುಂಭ: ಉದ್ಯೋಗ, ವ್ಯವಹಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಮಕ್ಕಳ ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಮೀನ: ಸರಕಾರೀ ನೌಕರರಿಗೆ ಬಿಡುವಿನ ಖುಷಿ ಸಿಗಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ನೆರೆಹೊರೆಯವರಿಂದ ಸಣ್ಣ ಪುಟ್ಟ ತೊಂದರೆ ಎದುರಾದೀತು. ಮಾತಿನ ಮೇಲೆ ಸಂಯಮವಿರಲಿ.