ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 25 ಡಿಸೆಂಬರ್ 2022 (08:50 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಾಹನ, ಭೂಮಿ ಖರೀದಿರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ. ಸಾಂಸಾರಿಕವಾಗಿ ತಾಳ್ಮೆಯಿಂದ ವ್ಯವಹರಿಸುವುದು ಮುಖ್ಯ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಐಡಿಯಾ ಬರಲಿದೆ. ಇಷ್ಟಮಿತ್ರರೊಂದಿಗೆ ಸಂತೋಷದಿಂದ ಸಮಯ ಕಳೆಯುವ ಯೋಗ.

ಮಿಥುನ: ಪಾಲುದಾರಿಕೆ ವ್ಯವಹಾರದಲ್ಲಿ ಅನಿರೀಕ್ಷಿತ ಏರುಪೇರಾಗಬಹುದು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ಬಂಧು ಮಿತ್ರರನ್ನು ಭೇಟಿಯಾಗುವ ಅವಕಾಶ.

ಕರ್ಕಟಕ: ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಭಾಗ್ಯ ಕೂಡಿಬರಲಿದೆ. ಹಣಕಾಸಿನ ವ್ಯವಹಾರ ಮಾಡುವಾಗ ಎಚ್ಚರಿಕೆಯಿರಲಿ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ಸಿಂಹ: ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಭೇಟಿ ಸಾಧ‍್ಯತೆ. ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ಉನ್ನತ ಅವಕಾಶಗಳು ಕೂಡಿಬರಲಿದೆ. ಗುರುಹಿರಿಯರ ಸಲಹೆ ಪಾಲಿಸುವುದು ಉತ್ತಮ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಸಕಾಲ. ಬೇಡವೆಂದು ಬಿಟ್ಟಿದ್ದ ವಸ್ತೂ ಇಂದು ನಿಮ್ಮ ಉಪಯೋಗಕ್ಕೆ ಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ತಾಳ್ಮೆಯಿರಲಿ.

ತುಲಾ: ಮನೆಯಲ್ಲಿ ಅತಿಥಿ ಸತ್ಕಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ಇನ್ನೊಬ್ಬರ ಮೇಲೆ ಅತಿಯಾದ ಅವಲಂಬನೆ ನಿಮಗೇ ಕಷ್ಟ ತರಬಹುದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ.

ವೃಶ್ಚಿಕ: ಸತ್ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ದೂರದ ವ್ಯವಹಾರಗಳಿಂದ ಧನ ಲಾಭವಾಗಲಿದೆ. ಹೊಸ ಯೋಜನೆಗಳಲ್ಲಿ ತೊಡಗಿಸಿಕೊಳ್ಳಲಿದ್ಧೀರಿ. ಮನರಂಜನಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ.

ಧನು: ಆದಾಯ ವೃದ್ಧಿಗೆ ನಾನಾ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ಮಾತೃ ಸಮಾನರಿಂದ ಕೆಲಸ ಕಾರ್ಯಗಳಿಗೆ ಸಹಾಯವಾಗಲಿದೆ. ದಾಂಪತ್ಯ ಜೀವನದಲ್ಲಿ ಸುಖ ಸಮೃದ್ಧಿಯಿರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಕರ: ನಿರೀಕ್ಷೆಯಂತೇ ಧನಾದಾಯ ಹೆಚ್ಚಾಗಲಿದ್ದು, ಹೊಸ ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮುನ್ನಡೆ ಕಂಡುಬರಲಿದೆ. ದಿನದಂತ್ಯಕ್ಕೆ ಶುಭ ಸಮಾಚಾರ ಕೇಳಿಬರಲಿದೆ.

ಕುಂಭ: ದೂರ ಪ್ರಯಾಣಕ್ಕೆ ಅಡಚಣೆಗಳು ಕಂಡುಬಂದೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ವಾಹನಾದಿ ಸೌಕರ್ಯಗಳು ಸದ್ಯದಲ್ಲೇ ನಿಮ್ಮದಾಗಲಿದೆ. ಅನಗತ್ಯ ಚಿಂತೆ ಬೇಡ.

ಮೀನ: ಯಾವುದೇ ವಿಚಾರದಲ್ಲೂ ಆತುರದ ತೀರ್ಮಾನ ಮಾಡಲು ಹೋಗಬೇಡಿ. ಹಣಕಾಸಿನ ವಿಚಾರದಲ್ಲಿ ವಂಚನೆಗೊಳಗಾಗುವ ಭೀತಿ. ಎಚ್ಚರಿಕೆ ಅಗತ್ಯ. ದೇವತಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಮುಂದಿನ ಸುದ್ದಿ
Show comments