Daily Horoscope
✕

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 27 ಡಿಸೆಂಬರ್ 2022 (08:40 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮನಸ್ಸಿನಲ್ಲಿರುವ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಅಷ್ಟೇ ಖರ್ಚೂ ಇರಲಿದೆ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ.

ವೃಷಭ: ಬಹಳ ದಿನಗಳ ನಂತರ ನಿಮ್ಮ ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾದ ಸಂತೋಷ ಸಿಗಲಿದೆ. ಕಾರ್ಯರಂಗದಲ್ಲಿ ಹಿತಶತ್ರುಗಳ ಕಾಟ ಕಂಡುಬಂದೀತು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ತಾಳ್ಮೆಯಿರಲಿ.

ಮಿಥುನ: ಯಾವುದೇ ಕೆಲಸಕ್ಕೆ ಕೈ ಹಾಕುವ ಮುನ್ನ ಕುಟುಂಬದವರ ಸಲಹೆ ಪಡೆದು ಮುನ್ನಡೆಯುವುದು ಸೂಕ್ತ. ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಕರ್ಕಟಕ: ಎಷ್ಟೇ ಕಷ್ಟವಾದರೂ ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರಿಗಳು ಹೊಸ ಐಡಿಯಾಗಳನ್ನು ಜಾರಿಗೆ ತರಲಿದ್ದಾರೆ.

ಸಿಂಹ: ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಿ. ಕಾರ್ಯರಂಗದಲ್ಲಿ ನಿರೀಕ್ಷಿತ ಸ್ಥಾನ ಮಾನ ಸಿಗಲಿದೆ. ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಕನ್ಯಾ: ನಿಮ್ಮ ಕೆಲಸಗಳಿಗೆ ಪರರ ಮೇಲೆ ಅವಲಂಬನೆಯಾಗುವುದು ಬೇಡ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ವಾಹನ, ಭೂಮಿ ಖರೀದಿ ಯೋಗ್ಯ ಸದ್ಯದಲ್ಲೇ ನನಸಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ನಿಮ್ಮನ್ನು ಮೆಚ್ಚುವ ವ್ಯಕ್ತಿಗಳಿಗಾಗಿ ಕೆಲವೊಂದು ಹೊಂದಾಣಿಕೆಗೆ ಸಿದ್ಧರಾಗಬೇಕಾಗುತ್ತದೆ. ಕೌಟುಂಬಿಕವಾಗಿ ಬಂಧು ಮಿತ್ರರ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ನಿಮ್ಮ ಕಾರ್ಯವೈಖರಿ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಲಭಿಸಲಿದೆ. ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರುವುದು. ಮಾಡುವ ಕೆಲಸದಲ್ಲಿ ತೃಪ್ತಿಯಿರಲಿದೆ.

ಧನು: ನಿಮ್ಮಲ್ಲಿರುವುದನ್ನು ಹಂಚಿ ತಿನ್ನುವ ನಿಮ್ಮ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಹಣಕಾಸಿನ ಏರುಪೇರಾದರೂ ಆತ್ಮೀಯರ ಸಹಾಯ ಸಕಾಲದಲ್ಲಿ ದೊರೆಯುವುದು. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ನಿಮ್ಮ ಸುತ್ತಮುತ್ತಲೂ ನಡೆಯುವ ವಿಚಾರಗಳು ನಿಮ್ಮ ಕೈ ಮೀರಿ ಹೋಗುತ್ತಿದೆ ಎನಿಸಬಹುದು. ದೇವತಾ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಹಳೆಯ ಮಿತ್ರರನ್ನು ಭೇಟಿಯಾಗಲಿದ್ದೀರಿ.

ಕುಂಭ: ಹಿಂದೆ ಮಾಡಿದ್ದ ಒಳ್ಳೆಯ ಕೆಲಸಗಳು ಇಂದು ನಿಮ್ಮ ಕೈ ಹಿಡಿಯಲಿವೆ. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಿದರೆ ಉತ್ತಮ.

ಮೀನ: ನಿಮ್ಮಲ್ಲಿರುವ ಕ್ರಿಯಾತ್ಮಕ ವಿಚಾರಗಳನ್ನು ಹೊರತರಲು ಇದು ಸಕಾಲ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಾಯತ್ರಿ ಜಪ ಮಾಡುವ ಮೊದಲು ಓದಲೇಬೇಕಾದ ಸ್ತೋತ್ರ

ಶ್ರೀ ಕಾಳಿ ಏಕಾಕ್ಷರ ಮಂತ್ರ ಜಪಿಸುವ ವಿಧಾನ, ಫಲವೇನು ನೋಡಿ

ಸಂಜೆ ಹೊತ್ತು ಓದಲೇಬೇಕಾದ ಶ್ರೀ ಚಂದ್ರಮೌಳೀಶ್ವರ ಸ್ತವ ಸ್ತೋತ್ರ

ನಿತ್ಯ ಬೆಳಿಗ್ಗೆ ಈ ಸೂರ್ಯ ಸ್ತೋತ್ರ ಪಠಿಸಿದರೆ ಸಕಲ ರೋಗಗಳಿಂದ ಮುಕ್ತಿ

ಶನಿಯ ಪವರ್ ಫುಲ್ ಮಂತ್ರಗಳಲ್ಲಿ ಇದೂ ಒಂದು

ಮುಂದಿನ ಸುದ್ದಿ
Show comments