ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 3 ಜನವರಿ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಗುರು ಹಿರಿಯರ ಆಶೀರ್ವಾದ ಕೈಗೆತ್ತಿಕೊಂಡ ಕೆಲಸದಲ್ಲಿ ಯಶಸ್ಸು ಸಿಗಲಿದೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದೀರಿ.ದೀರ್ಘ ಪ್ರಯಾಣದ ಸಂಭವ. ಮಹಿಳೆಯರಿಗೆ ಬಿಡುವಿನ ದಿನದ ಖುಷಿ.

ವೃಷಭ: ಸಹೋದ್ಯೋಗಿಗಳೊಂದಿಗೆ ಕಿರು ಪ್ರವಾಸ ಮಾಡಲಿದ್ದೀರಿ. ದಾಂಪತ್ಯದಲ್ಲಿ ತೃಪ್ತಿಕರ ವಾತಾವರಣವಿರಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮ ಹೆಚ್ಚಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಕೌಟುಂಬಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ವೃತ್ತಿ ಸಂಬಂಧವಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಯತ್ನಿಸಲಿದ್ದೀರಿ. ಮಾತಿನ ಮೇಲೆ ನಿಗಾ ಇರಲಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಮನಸ್ಸಿಗೆ ಖುಷಿಕೊಡುವ ಕೆಲಸ ಮಾಡಲಿದ್ದೀರಿ.

ಸಿಂಹ: ಇನ್ನೊಬ್ಬರ ಕಷ್ಟಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ಒಂದು ರೀತಿಯ ಸಂತೋಷ ಸಿಗಲಿದೆ. ಸಾಂಸಾರಿಕವಾಗಿ ತೃಪ್ತಿ, ನೆಮ್ಮದಿಯಿರಲಿದೆ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ತಾಳ್ಮೆಯಿರಲಿ.

ಕನ್ಯಾ: ನಿಮ್ಮ ಚೇಷ್ಠೆಗಳು ಇತರರ ಅಸಮಾಧಾನಕ್ಕೆ ಕಾರಣವಾದೀತು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ದಾಂಪತ್ಯದಲ್ಲಿ ತೃಪ್ತಿಕರ ವಾತಾವರಣ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ.

ತುಲಾ: ವ್ಯಾವಹಾರಿಕವಾಗಿ ನಿಮ್ಮ ಎದುರಾಳಿಗಳಾಗಿ ಇರುವವರಿಂದ ತೊಂದರೆ ಎದುರಾದೀತು. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಗುರುಹಿರಿಯರಲ್ಲಿ ಅನಗತ್ಯ ಚರ್ಚಗೆ ಅವಕಾಶ ಕೊಡದಿರಿ. ತಾಳ್ಮೆಯಿರಲಿ.

ವೃಶ್ಚಿಕ: ನಿಮ್ಮಲ್ಲಿರುವ ಒಳ್ಳೆಯತನ ದುರುಪಯೋಗಪಡಿಸಿಕೊಳ್ಳುವವರು ಇರುತ್ತಾರೆ. ಕಾರ್ಯರಂಗದಲ್ಲಿ ತೀವ್ರ ಪೈಪೋಟಿ ಎದುರಾದಿತು. ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲಿದ್ದೀರಿ. ಮಹಿಳೆಯರಿಗೆ ಖುಷಿಯ ದಿನ.

ಧನು: ಬಹಳ ದಿನಗಳ ನಂತರ ಆಪ್ತರನ್ನು ಭೇಟಿ ಮಾಡಿದ ಸಂತೋಷ ನಿಮ್ಮದಾಗುವುದು. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬರಲಿದೆ. ಮನಸ್ಸಿನಲ್ಲಿರುವ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ.

ಮಕರ: ನೆಂಟರಿಷ್ಟರೊಂದಿಗೆ ಕೌಟುಂಬಿಕ ವಿಚಾರವಾಗಿ ಸಂಘರ್ಷಗಳಾಗುವ ಸಾಧ‍್ಯತೆ. ಮಾತಿನ ಮೇಲೆ ನಿಗಾ ಇರಲಿ. ಆಸ್ತಿ ವಿವಾದಗಳನ್ನು ಹಿರಿಯರ ಮಧ‍್ಯಸ್ಥಿಕೆಯಲ್ಲಿ ಬಗೆಹರಿಸಿಕೊಳ್ಳಿ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಸರಕಾರೀ ಕೆಲಸಗಳನ್ನು ಅನಿವಾರ್ಯವಾಗಿ ಮುಂದೂಡಬೇಕಾಗುತ್ತದೆ. ಬೇರೆಯವರಿಗೆ ಒಳ್ಳೆಯದನ್ನು ಬಯಸುವ ನಿಮ್ಮ ಗುಣ ಇತರರ ಮೆಚ್ಚುಗೆಗೆ ಪಾತ್ರವಾಗಲಿದೆ. ಮನೆಗೆ ನೆಂಟರಿಷ್ಟರ ಭೇಟಿ ಸಾಧ‍್ಯತೆಯಿದೆ.

ಮೀನ: ಒಳ್ಳೆಯ ಭೋಜನ, ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗುವುದು. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments