Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 4 ಜನವರಿ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬೇರೆಯವರ ಮಾತಿನ ಪ್ರಭಾವಕ್ಕೊಳಗಾಗಿ ಆಪ್ತರೊಂದಿಗೆ ಸಂಘರ್ಷ ಮಾಡಿಕೊಳ್ಳಬೇಡಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ಆರ್ಥಿಕವಾಗಿ ಹಣಕಾಸಿನ ಗಳಿಕೆಗೆ ಹೊಸ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ.

ವೃಷಭ: ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಹೊಸ ಅವಕಾಶಗಳು ಕಂಡುಬಂದೀತು. ವೈಯಕ್ತಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಸನ್ಮಿತ್ರರ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರುವುದು.

ಮಿಥುನ: ಕೌಟುಂಬಿಕವಾಗಿ ವಾದ ವಿವಾದವಾಗದಂತೆ ಎಚ್ಚರಿಕೆ ವಹಿಸಿ. ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ಆಪ್ತರೊಂದಿಗೆ ಸಮಾಲೋಚನೆ ನಡೆಸುವುದು ಉತ್ತಮ. ವಿದ್ಯಾರ್ಥಿಗಳಿಗೆ ಉನ್ನತಿಯ ಯೋಗವಿದೆ.

ಕರ್ಕಟಕ: ಕೌಟುಂಬಿಕವಾಗಿ ಅಭಿವೃದ್ಧಿ, ಸಂತೋಷ ಕಂಡುಬರಲಿದೆ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಭೇಟಿ ಸಾಧ್ಯತೆ. ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚೂ ಇರಲಿದೆ. ವ್ಯಾಪಾರಿಗಳಿಗೆ ಹಿತ ಶತ್ರುಗಳ ಕಾಟ ಕಂಡುಬಂದೀತು.

ಸಿಂಹ: ಕಾರ್ಯಕ್ಷೇತ್ರದಲ್ಲಿ ನಾಯಕತ್ವ  ವಹಿಸಿಕೊಳ್ಳಬೇಕಾದ ಸಂದರ್ಭ ಬಂದೀತು. ಕ್ರಿಯಾತ್ಮಕ ಕೆಲಸಗಳಿಗೆ ಇತರರಿಂದ ಮೆಚ್ಚುಗೆ ಸಿಗಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ಗುರು, ಹಿರಿಯರ ಮಾರ್ಗದರ್ಶನದಿಂದ ಕೈ ಹಿಡಿದ ಕೆಲಸಗಳಲ್ಲಿ ಯಶಸ್ಸು ಸಿಕ್ಕೀತು. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಹಳೆಯ ಮಿತ್ರರನ್ನು ಅನಿರೀಕ್ಷಿತವಾಗಿ  ಭೇಟಿಯಾಗುವ ಯೋಗ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ನಿಮ್ಮ ತಾಳ್ಮೆಯನ್ನು ಇತರರು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ‍್ಯತೆಯಿದೆ. ಮಾತಿನಲ್ಲಿ ಸ್ಪಷ್ಟತೆಯಿರಲಿ. ಮಹಿಳೆಯರಿಂದ ನಿಮಗೆ ಒಳಿತಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ವೃಶ್ಚಿಕ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕಾರ್ಯರಂಗದಲ್ಲಿ ಇತರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕಾಗುತ್ತದೆ. ವಾಹನ, ಭೂಮಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ಧನು: ಮಕ್ಕಳ ಜೀವನದ ಬಗ್ಗೆ ಅನಗತ್ಯ ಯೋಚನೆಗಳಿಂದ ಮನಸ್ಸು ಹೈರಾಣಾಗಲಿದೆ. ವೃಥಾ ಖರ್ಚು ವೆಚ್ಚವಾಗದಂತೆ ಎಚ್ಚರಿಕೆ ವಹಿಸಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಬಂಧು ಮಿತ್ರರ ಭೇಟಿಯಾಗುವ ಸಾಧ‍್ಯತೆ.

ಮಕರ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವೈದ್ಯಕೀಯ ವೃತ್ತಿಯವರಿಗೆ ಬಿಡುವಿಲ್ಲದ ಕೆಲಸ. ದೇಹಾರೋಗ್ಯದ ಬಗ್ಗೆ ಗಮನಕೊಡಿ.

ಕುಂಭ: ಕೌಟುಂಬಿಕವಾಗಿ ಸಣ್ಣ ಪುಟ್ಟ ಸಮಸ್ಯೆಗಳಾದರೂ ಉಪೇಕ್ಷೆ ಬೇಡ. ತಾಳ್ಮೆ, ಸಂಯಮ ಅಗತ್ಯ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಕಾರ್ಯನಿಮಿತ್ತ ಪ್ರಯಾಣ ಮಾಡಬೇಕಾಗಿ ಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಮೀನ: ಪರರಿಗೆ ಸಹಾಯ ಮಾಡುವ ಮುನ್ನ ಪೂರ್ವಾಪರ ವಿಚಾರಿಸುವುದು ಉತ್ತಮ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಸಂಗಾತಿಯಿಂದ ಮುಚ್ಚಿಟ್ಟ ವಿಚಾರಗಳು ಹೊರ ಬಂದೀತು. ತಾಳ‍್ಮೆಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?