ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 6 ಜನವರಿ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರದಲ್ಲಿ ಬದಲಾವಣೆಗೆ ಪ್ರಯತ್ನ ನಡೆಸಲಿದ್ದೀರಿ. ಸತ್ಕರ್ಮಗಳಿಗಾಗಿ ಧನ ವ್ಯಯ ಮಾಡಬೇಕಾಗುತ್ತದೆ. ಸಾಂಸಾರಿಕವಾಗಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ತಾಳ್ಮೆಯಿರಲಿ.

ವೃಷಭ: ನಿಮ್ಮಲ್ಲಿರುವ ವಿಶೇಷ ಪ್ರತಿಭೆಯನ್ನು ಹೊರತರಲು ಪ್ರಯತ್ನ ನಡೆಸಲಿದ್ದೀರಿ. ಇಷ್ಟಾನುಸಾರ ನಿರ್ಧಾರ ತೆಗೆದುಕೊಳ್ಳಲು ಹೋಗಿ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗುವ ಸಾಧ್ಯತೆ. ಮಾತಿನ ಮೇಲೆ ನಿಗಾ ಇರಲಿ.

ಮಿಥುನ: ಜವಾಬ್ಧಾರಿಯುತವಾಗಿ ಕಾರ್ಯ ನಿರ್ವಹಿಸುವುದರಿಂದ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ.  ದೇಹಾರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಹಿರಿಯರಿಗೆ ತೀರ್ಥ ಯಾತ್ರ ಮಾಡುವ ಯೋಗ.

ಕರ್ಕಟಕ: ಪಾಲುದಾರಿಕೆ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ಸಿಂಹ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಉದಾಸೀನತೆ ಸಲ್ಲದು. ಮಾನಸಿಕವಾಗಿ ಕಾಡುತ್ತಿರುವ ಚಿಂತೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಪ್ರೀತಿ ಪಾತ್ರರನ್ನು ನೋಡುವ ಮನಸ್ಸಾಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾದೀತು. ಸಂಗಾತಿಯೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯಿಂದ ಉಡುಗೊರೆ ಸಿಗಲಿದೆ. ವ್ಯಾಪಾರಿಗಳಿಗೆ ಮುನ್ನಡೆ.

ವೃಶ್ಚಿಕ: ವ್ಯವಹಾರದಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಮಾತಿನಿಂದ ಇತರರನ್ನು ಕೆಣಕಲು ಹೋಗಿ ನೀವೇ ತೊಂದರೆಗೆ ಸಿಲುಕಿಕೊಳ್ಳುವಿರಿ. ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲಿದ್ದೀರಿ.

ಧನು: ಮಕ್ಕಳ ಜೀವನದ ಬಗ್ಗೆ ಅನಗತ್ಯ ಯೋಚನೆ ಬೇಡ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಾಂಪತ್ಯದಲ್ಲಿ ತೃಪ್ತಿದಾಯಕ ವಾತಾವರಣ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚ ಬೇಡ.

ಮಕರ: ಸರಕಾರೀ ನೌಕರಿಯಲ್ಲಿರುವವರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಗುರುಹಿರಿಯರಿಂದ ಸಮಯೋಚಿತ ಸಲಹೆ ಬರಲಿದೆ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಆಸ್ತಿ ವಿಚಾರದಲ್ಲಿ ನಿಮ್ಮ ಪರವಾಗಿ ನಿರ್ಣಯ ಬರಲಿದೆ. ಬಹಳ ಸುಲಭವಾಗಿ ನೀವು ಅಂದುಕೊಂಡ ಕೆಲಸಗಳು ನೆರವೇರಲಿದೆ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಗೃಹಿಣಿಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.

ಮೀನ: ಉಪಕಾರ ಮಾಡಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಭೂಮ್ಯಾದಿ ವ್ಯವಹಾರಗಳಲ್ಲಿ ತೊಡಕು ಕಂಡುಬರಲಿದೆ. ಮನೆಗೆ ನೆಂಟರಿಷ್ಟರ ಭೇಟಿ ಸಾಧ‍್ಯತೆ. ಖರ್ಚು ವೆಚ್ಚಗಳಿಗೆ ಕಡಿವಾಣವಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments