Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 7 ಜನವರಿ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಧನಾರ್ಜನೆಯಿದ್ದರೂ ಅದಕ್ಕೆ ಸರಿಸಮನಾದ ಖರ್ಚು ವೆಚ್ಚವಿರಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿಬರಲಿದೆ. ತಾಳ್ಮೆಯಿರಲಿ.

ವೃಷಭ: ಮಾನಸಿಕವಾಗಿ ನೆಮ್ಮದಿಯಿರಲಿದ್ದು, ಆಪ್ತರೊಂದಿಗೆ ಸಂತೋಷದಿಂದ ಕಾಲ ಕಳೆಯಲಿದ್ದೀರಿ. ಇಷ್ಟ ಭೋಜನ ಮಾಡಲಿದ್ದೀರಿ. ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಪೂರ್ವ ಯೋಜಿತ ಕೆಲಸಗಳಿಗಾಗಿ ಪರವೂರಿಗೆ ಪ್ರಯಾಣ ಮಾಡಬೇಕಾಗುತ್ತದೆ. ನೀವು ಅಂದುಕೊಂಡಂತೇ ಕೆಲಸ ಕಾರ್ಯಗಳು ನಡೆಯುತ್ತಿವೆ ಎಂಬ ತೃಪ್ತಿ ನಿಮ್ಮದಾಗಿರಲಿದೆ. ವ್ಯಾಪಾರೀ ವರ್ಗದವರಿಗೆ ಮುನ್ನಡೆ ಕಂಡುಬರಲಿದೆ.

ಕರ್ಕಟಕ: ಮನಸ್ಸಿಗೆ ಹಿಡಿಸಿದ ವ್ಯಕ್ತಿಗಳೊಂದಿಗೆ ನಿಮ್ಮ ಮನಸ್ಸು ಹಂಚಿಕೊಳ್ಳಲಿದ್ದೀರಿ. ಪ್ರೇಮಿಗಳಿಗೆ ಶುಭ ದಿನವಾಗಲಿದೆ. ಕಾರ್ಯರಂಗದಲ್ಲಿ ಮೇಲ್ವರ್ಗದ ಅಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ನಿಮ್ಮ ಮುಂದಿನ ಭವಿಷ್ಯಕ್ಕಾಗಿ ಕೆಲವೊಂದು ತೀರ್ಮಾನ ಕೈಗೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರ ಮೆಚ್ಚುಗೆ ಸಿಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆ. ಹಣಕಾಸಿನ ಹರಿವಿಗೆ ತೊಂದರೆಯಾಗದು.

ಕನ್ಯಾ: ನೀವು ಕೆಲಸ ಮಾಡುವ ಕ್ಷೇತ್ರದಲ್ಲಿ ನಿಮ್ಮ ಏಳಿಗೆ ತಡೆಯಲು ಯಾರಿಂದಲೂ ಸಾಧ‍್ಯವಾಗದು. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಮಾತೃ ಸಮಾನರ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಮನಸ್ಸಿನಲ್ಲಿರುವ ಕೆಲಸವನ್ನು ಕಾರ್ಯರೂಪಕ್ಕೆ ತರಲು ಹೊರಟರೆ ನೂರೆಂಟು ವಿಘ್ನಗಳು ತೋರಿಬಂದೀತು. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ವೃಶ್ಚಿಕ: ಮಾತಿನಲ್ಲೇ ನಿಮ್ಮನ್ನು ಮೋಡಿ ಮಾಡಿ ವಂಚಿಸುವವರಿರುತ್ತಾರೆ. ಎಚ್ಚರಿಕೆ ಅಗತ್ಯ. ತಾಂತ್ರಿಕ ವೃತ್ತಿಯವರಿಗೆ ಬಿಡುವಿನ ಸಮಯದ ಸಂತೋಷ ಸಿಗುವುದು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಧನು: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಸರಕಾರೀ ನೌಕರರಿಗೆ ಕೊಂಚ ವಿರಾಮದ ಸಮಯ. ಆರ್ಥಿಕ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಗುರು ಹಿರಿಯರ ಪ್ರೋತ್ಸಾಹದಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆ.

ಮಕರ: ಭೂಮ್ಯಾದಿ ವ್ಯವಹಾರಗಳನ್ನು ಮಾಡುವವರಿಗೆ ಲಾಭವಾದೀತು. ಹಿರಿಯರಿಗೆ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವ ಯೋಗ. ಸತ್ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭ.

ಕುಂಭ: ಕೌಟುಂಬಿಕ ವಿಚಾರದಲ್ಲಿ ಬೇರೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಮಹಿಳೆಯರಿಗೆ ಮಂಗಲ ವಸ್ತ್ರ ಖರೀದಿ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟಮಿತ್ರರನ್ನು ಭೇಟಿ ಮಾಡಲಿದ್ದೀರಿ.

ಮೀನ: ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಪಾಲು ಬಂಡವಾಳ ಹೂಡಿಕೆಗೆ ಇದು ಸಕಾಲ. ನಿಮ್ಮಿಂದ ಉಪಕಾರ ಪಡೆದವರಿಗೆ ಪ್ರತ್ಯುಪಕಾರ ಸಿಗುವುದು. ಸಾಂಸಾರಿಕವಾಗಿ ಸುಖ ಸಮೃದ್ಧಿಯಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?