ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 8 ಜನವರಿ 2023 (08:40 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಯೋಗ್ಯತೆಯಿದ್ದರೂ ಅದಕ್ಕೆ ತಕ್ಕ ಕೆಲಸ ಸಿಗುತ್ತಿಲ್ಲವೆಂಬ ಬೇಸರ ಕಾಡೀತು. ಗೃಹೋಪಕರಣಗಳ ಖರೀದಿ ವಿಚಾರದಲ್ಲಿ ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ನೀವು ಮಾಡುವ ಸಣ್ಣ ತಪ್ಪು ನಿಮಗೆ ತೊಂದರೆ ತಂದೊಡ್ಡೀತು. ಕಾರ್ಯಾರಂಭಕ್ಕೆ ಮೊದಲೇ ಅಶುಭ ಸೂಚನೆಗಳು ಮನಸ್ಸಿನ ಚಿಂತೆ ಹೆಚ್ಚಿಸಲಿದೆ. ಗುರುಹಿರಿಯರ ಸಲಹೆ ಪಡೆಯುವುದು ಉತ್ತಮ. ತಾಳ್ಮೆಯಿರಲಿ.

ಮಿಥುನ: ವ್ಯಾವಹಾರಿಕವಾಗಿ ನಿಮ್ಮ ಏಳಿಗೆಯನ್ನು ಯಾರೂ ತಡೆಯಲಾಗದು. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಸಂಗಾತಿಯೊಂದಿಗೆ ಕ್ಷುಲ್ಲುಕ ವಿಚಾರಕ್ಕೆ ಭಿನ್ನಾಭಿಪ್ರಾಯ ಮಾಡಿಕೊಳ್ಳಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಕರ್ಕಟಕ: ನಿಮ್ಮ ಮನಸ್ಸಿನ ಮಾತಿನಂತೇ ನಿರ್ಧಾರ ತೆಗೆದುಕೊಳ್ಳುವಿರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ.

ಸಿಂಹ: ನಿಮ್ಮ ಮಾತನ್ನು ಇತರರು ಅಪಾರ್ಥ ಮಾಡಿಕೊಳ್ಳುವ ಸಾಧ್ಯತೆಯಿದೆ. ಮಾತಿನ ಮೇಲೆ ನಿಗಾ ಇರಲಿ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ.

ಕನ್ಯಾ: ಹಿರಿಯರು ನೀಡುವ ಸಲಹೆಗಳು ನಿಮಗೆ ಪಥ್ಯವಾಗದೇ ಹೋಗಬಹುದು. ಕಾರ್ಯ ನಿಮಿತ್ತ ಪರವೂರಿಗೆ ಪ್ರಯಾಣ ಮಾಡುವ ಸನ್ನಿವೇಶವಿರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಖರ್ಚು ವೆಚ್ಚಗಳಿಗೆ ಸಿದ್ಧರಾಗಿ.

ತುಲಾ: ಹಿರಿಯರಿಗೆ ತೀರ್ಥ ಕ್ಷೇತ್ರಗಳಿಗೆ ಸಂದರ್ಶನ ಮಾಡುವ ಮನಸ್ಸಾಗಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಗೃಹ, ವಾಹನ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚವಾದೀತು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಶ್ಚಿಕ: ಕಷ್ಟಗಳು ಬಂದಾಗ ಪರಿಹಾರ ಮಾರ್ಗದ ಬಗ್ಗೆ ಸಂಗಾತಿಯೊಂದಿಗೆ ಚರ್ಚಿಸುವುದು ಉತ್ತಮ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಕುಲದೇವರ ಪ್ರಾರ್ಥನೆ ಮಾಡಿ.

ಧನು: ವಿದ್ಯಾರ್ಥಿಗಳಿಗೆ ಕ್ರಿಯಾತ್ಮಕ ಕೆಲಸಗಳಲ್ಲಿ ಆಸಕ್ತಿ ಹೆಚ್ಚಲಿದೆ. ಪರರ ನಿಂದನೆಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಇಷ್ಟಭೋಜನ ಮಾಡುವ ಯೋಗವಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.

ಮಕರ: ಬಹಳ ದಿನಗಳಿಂದ ಭೇಟಿಯಾಗಬೇಕೆಂದಿದ್ದ ವ್ಯಕ್ತಿಗಳನ್ನು ಅನಿರೀಕ್ಷಿತವಾಗಿ ಭೇಟಿ ಮಾಡಲಿದ್ದೀರಿ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗುವ ಯೋಗ. ಆಪ್ತರ ಕಷ್ಟಗಳಿಗೆ ನೆರವಾಗಲಿದ್ದೀರಿ. ಮನಸ್ಸಿಗೆ ನೆಮ್ಮದಿಯಿರುವುದು.

ಕುಂಭ: ಬೇಡದ ವಿಚಾರಕ್ಕೆ ಕೈ ಹಾಕಲು ಹೋಗಿ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗುವ ಸಾಧ‍್ಯತೆ. ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗುವುದು.

ಮೀನ: ಮನೆಗೆ ನೆಂಟರಿಷ್ಟರ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗವಿದ್ದರೂ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ. ಭೂಮ್ಯಾದಿ ವ್ಯವಹಾರಗಳ ಮಾತುಕತೆಗೆ ಮುಂದಾಗುವಿರಿ. ತಾಳ್ಮೆ ಅಗತ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮಂಗಳಗೌರಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಮುಂದಿನ ಸುದ್ದಿ
Show comments