Daily Horoscope
✕

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 9 ಜನವರಿ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಿದ್ಯಾರ್ಜನೆಗಾಗಿ ದೂರ ಪ್ರಯಾಣ ಮಾಡಬೇಕಾದ ಸ್ಥಿತಿ ಎದುರಾಗಲಿದೆ. ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದೀರಿ.

ವೃಷಭ: ಮಕ್ಕಳಿಗೆ ಹೊಸ ವಿಚಾರ ಕಲಿಸುವ ಉತ್ಸಾಹ ತೋರಲಿದ್ದೀರಿ. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಸರಕಾರೀ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ.

ಮಿಥುನ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಕಾಡೀತು. ಸಂಗಾತಿಯೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ಸಮಾನ ಮನಸ್ಕರೊಂದಿಗೆ ಬೆರೆಯಲಿದ್ದೀರಿ. ಉದ್ಯೋಗ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿದ್ದರೂ ಖರ್ಚಿಗೆ ನಾನಾ ದಾರಿಗಳು ಕಂಡುಬಂದೀತು. ಮಹಿಳೆಯರಿಗೆ ನೆಮ್ಮದಿಯ ದಿನವಾಗಲಿದೆ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಎಲ್ಲರೂ ನಿಮ್ಮ ಮಾತು ಕೇಳುವಂತಾಗಲಿದೆ. ಕ್ರಿಯಾತ್ಮಕ ಕೆಲಸಗಳಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಚೇತರಿಕೆ ಕಂಡುಬರಲಿದೆ. ದಂಪಂತಿಗಳ ನಡುವೆ ಅನುರಾಗ  ವೃದ್ಧಿ.

ಕನ್ಯಾ: ನಿಮ್ಮಲ್ಲಿರುವ ಸುಪ್ತ ಪ್ರತಿಭೆಗಳನ್ನು ಪ್ರದರ್ಶಿಸುವ ಕಾಲ ಒದಗಿಬರಲಿದೆ. ಕಷ್ಟ ಕಾಲದಲ್ಲಿ ಆಪ್ತರಿಗೆ ಸಹಾಯ ಮಾಡಲಿಲ್ಲ ಎಂಬ ಕೊರಗು ಕಂಡುಬಂದೀತು. ಸಂಗಾತಿಯ ಮಾತುಗಳು ಸಾಂತ್ವನ ನೀಡಲಿವೆ.

ತುಲಾ: ಉದ್ಯೋಗ ಸಂಬಂಧವಾದ ಸಮಸ್ಯೆಗಳಿಗೆ ಸ್ನೇಹಿತರಿಂದ ಪರಿಹಾರ ಸಿಗಲಿದೆ. ಸಹವಾಸ ದೋಷದಿಂದ ಕೆಲವೊಂದು ಅಭ್ಯಾಸಗಳು ಕಂಡುಬಂದೀತು. ಮಾತಿನ ಮೇಲೆ ನಿಗಾ ಇರಲಿ. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ಸುದೃವವಶಾತ್ ಎಲ್ಲವೂ ನೀವಂದುಕೊಂಡಂತೆಯೇ ಕೆಲಸ ಕಾರ್ಯಗಳು ನಡೆಯಲಿವೆ. ಪಾಲುದಾರಿಕೆ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಧನು: ನಿಮ್ಮ ಮಾತುಗಳು ಇತರರಿಗೆ ಕಿರಿ ಕಿರಿ ಎನಿಸೀತು. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ. ಮಾತೃ ಸಮಾನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗುವುದು.

ಮಕರ: ನಿಮ್ಮ ಜೊತೆಗೇ ಇದ್ದು ನಿಮಗೇ ವಂಚಿಸುವವರಿರುತ್ತಾರೆ. ಎಚ್ಚರಿಕೆಯಿರಲಿ. ಹಣಕಾಸಿನ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ದೇವತಾ ಪ್ರಾರ್ಥನೆ ಮರೆಯದಿರಿ.

ಕುಂಭ: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಅಡೆತಡೆಗಳು ಕಂಡುಬಂದೀತು. ವಾಹನ, ಭೂಮಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗದಂತೆ ಎಚ್ಚರಿಕೆ ವಹಿಸಿ.

ಮೀನ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ನಿರ್ಧಾರಗಳನ್ನು ಕೈಗೊಳ್ಳುವಾಗ ಚಿತ್ತಚಾಂಚಲ್ಯ ಕಂಡುಬಂದೀತು. ತಾಳ್ಮೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ಹೊತ್ತು ಓದಲೇಬೇಕಾದ ಶ್ರೀ ಚಂದ್ರಮೌಳೀಶ್ವರ ಸ್ತವ ಸ್ತೋತ್ರ

ನಿತ್ಯ ಬೆಳಿಗ್ಗೆ ಈ ಸೂರ್ಯ ಸ್ತೋತ್ರ ಪಠಿಸಿದರೆ ಸಕಲ ರೋಗಗಳಿಂದ ಮುಕ್ತಿ

ಶನಿಯ ಪವರ್ ಫುಲ್ ಮಂತ್ರಗಳಲ್ಲಿ ಇದೂ ಒಂದು

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಓದಿ ಶ್ರೀ ಭದ್ರಲಕ್ಷ್ಮಿ ಸ್ತೋತ್ರಂ

ಭಯ ನಿವಾರಣೆಗಾಗಿ ಗುರು ರಾಘವೇಂದ್ರ ಆಪತ್ಪರಿಹರಣ ಸ್ತೋತ್ರ

ಮುಂದಿನ ಸುದ್ದಿ