Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 10 ಜನವರಿ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಹಠಮಾರೀ ಮನೋಭಾವದಿಂದ ನಷ್ಟವೇ ಹೆಚ್ಚು. ಪರರ ನಿಂದನೆಯಲ್ಲಿ ಕಾಲ ಹರಣ ಮಾಡಬೇಡಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಎದುರಾಳಿಗಳಿಂದ ಅಡೆತಡೆಗಳು ಕಂಡುಬಂದೀತು. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗಬೇಕಾಗುತ್ತದೆ. ಸಹೋದರಾದಿ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯ ಸರಿಪಡಿಸಿಕೊಳ್ಳಲಿದ್ಧೀರಿ.

ಮಿಥುನ: ಆಸ್ತಿ ಪರಭಾರೆ ವಿಚಾರಗಳಲ್ಲಿ ಹಿರಿಯರ ಸಲಹೆ ಪಡೆಯುವುದು ಉತ್ತಮ. ಸರಕಾರೀ ನೌಕರರಿಗೆ ಮುಂಬಡ್ತಿ ಯೋಗ. ವಿದ್ಯಾರ್ಥಿಗಳಿಗೆ ಹೊಸ ವಿಷಯ ಕಲಿಕೆಗೆ ಅವಕಾಶಗಳು ಒದಗಿಬರಲಿದೆ. ಬಳಸಿಕೊಳ್ಳಿ.

ಕರ್ಕಟಕ: ನಿಮ್ಮ ಎದುರಾಳಿಗಳಿಗಳೂ ಮನಸೋಲುವಂತೆ ಕೆಲಸ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಆತಂಕ ಬೇಡ.

ಸಿಂಹ: ವೈಯಕ್ತಿಕ ವಿಚಾರದಲ್ಲಿ ಮೂರನೆಯವರು ಮೂಗು ತೂರಿಸುವುದರಿಂದ ನಿಮಗೆ ಕಿರಿ ಕಿರಿ ಎನಿಸೀತು. ಸರಿಯಾಗಿ ವಿಮರ್ಶೆ ನಡೆಸಿ ನಿರ್ಧಾರ ತೆಗೆದುಕೊಳ‍್ಳುವುದು ಸೂಕ್ತ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ನಿಮ್ಮ ಎದುರಿಗೇ ನಡೆದ ತಪ್ಪು ಬಗ್ಗೆ ನೆನೆದು ಮನಸ್ಸಿಗೆ ಹಿಂಸೆಯಾದೀತು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ನಿಮ್ಮಿಂದ ಹಿಂದೆ ಸಹಾಯ ಪಡೆದವರಿಂದ ಪ್ರತ್ಯುಪಕಾರ ಲಭಿಸಲಿದೆ. ವ್ಯಾವಹಾರಿಕವಾಗಿ ಹೊಸ ಅವಕಾಶಗಳು ಒದಗಿಬರಲಿದೆ. ಸಂಗಾತಿಗೆ ಅಚ್ಚರಿಯ ಉಡುಗೊರೆ ಮೂಲಕ ಖುಷಿ ನೀಡಲಿದ್ದೀರಿ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ಗಣ್ಯ ವ್ಯಕ್ತಿಗಳ ಸಂಪರ್ಕದಿಂದ ನಿಮ್ಮ ಕೆಲಸ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರುವುದು. ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಧನು: ಗೃಹಸಂಬಂಧೀ ವಿಚಾರವಾಗಿ ಸಂಗಾತಿಯೊಂದಿಗೆ ಸಂಘರ್ಷಕ್ಕಿಳಿಯಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ವಿದ್ಯಾರ್ಥಿಗಳಿಗೆ ಉತ್ತಮ ಫಲ ದೊರೆಯಲಿದೆ. ತಾಳ್ಮೆಯಿರಲಿ.

ಮಕರ: ಮನಸ್ಸಿಗೆ ಸಂತೋಷ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಕುಂಭ: ನಿಮ್ಮ ಬೆನ್ನ ಹಿಂದೆ ಹುನ್ನಾರ ನಡೆಸುವವರ ಸಂಚು ಬಯಲಾಗಲಿದೆ. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನ ಸಾಧ‍್ಯತೆ. ಹಣಕಾಸಿನ ಹರಿವಿದ್ದರೂ ಖರ್ಚೂ ಅಷ್ಟೇ ಇರಲಿದೆ. ಪ್ರೀತಿ ಪಾತ್ರರಿಂದ ನೆಮ್ಮದಿ.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ್ಯತೆ. ಆರ್ಥಿಕವಾಗಿ ಅಡಚಣೆಗಳು ಕಂಡುಬಂದೀತು. ನಿಮಗೆ ಸಿಗಬೇಕಾಗಿದ್ದ ವಸ್ತು ನಿಮ್ಮ ಕೈಗೆ ಬಂದೇ ಬರುತ್ತದೆ. ಭೂಮ್ಯಾದಿ ವ್ಯವಹಾರಗಳಲ್ಲಿ ನಿರ್ಣಾಯಕ ದಿನ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments