Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

webdunia
ಬೆಂಗಳೂರು , ಬುಧವಾರ, 11 ಜನವರಿ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮಲ್ಲಿರುವ ಒಳ್ಳೆಯತನದ ಬಗ್ಗೆ ಇನ್ನೊಬ್ಬರ ಮುಂದೆ ಸಾಬೀತುಪಡಿಸಬೇಕಾಗಿಲ್ಲ. ಒಳ್ಳೆಯ ಕೆಲಸಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಯೋಗ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಹೊಸದಾಗಿ ಕೆಲವೊಂದು ಜವಾಬ್ಧಾರಿಗಳನ್ನು ನಿಭಾಯಿಸಬೇಕಾಗಿ ಬಂದಾಗ ತಾಳ್ಮೆ ಕಳೆದುಕೊಳ್ಳುವ ಪ್ರಸಂಗ ಎದುರಾದೀತು. ಹಿರಿಯರ ಸಲಹೆ ಪಾಲಿಸುವುದು ಉತ್ತಮ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ಮಿಥುನ: ಹಿಂದೆ ನಿಮ್ಮಿಂದ ಸಾಲ ಪಡೆದಿದ್ದವರು ಮರಳಿ ನೀಡಲಿದ್ದಾರೆ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವಿದ್ಯಾರ್ಥಿಗಳಿಗೆ ಕಲಿಕೆಗೆ ನೂತನ ಅವಕಾಶಗಳು ದೊರೆಯಲಿವೆ.

ಕರ್ಕಟಕ: ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ತಕ್ಕಮಟ್ಟಿನ ಯಶಸ್ಸು ನಿಮ್ಮದಾಗುವುದು. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷ ಬೇಡ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.

ಸಿಂಹ: ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿದಾಯಕ ಬೆಳವಣಿಗೆಯಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಸತ್ಕಾರ್ಯಕ್ಕೆ ಧನವಿನಿಯೋಗ ಮಾಡಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಥತೆ ನಡೆಸಲಿದ್ದೀರಿ. ನಿಮ್ಮ ವಾಕ್ಚತುರತೆಯಿಂದ ಕಾರ್ಯ ಸಾಫಲ್ಯತೆ ಕಂಡುಬರಲಿದೆ. ಚಿಂತೆ ಬೇಡ.

ತುಲಾ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಕುಟುಂಬಸ್ಥರ ಸಹಕಾರ ಕಂಡುಬರಲಿದೆ. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷ ಬೇಡ. ತಾಳ್ಮೆಯಿರಲಿ.

ವೃಶ್ಚಿಕ: ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದು, ನಿಮ್ಮ ಕೆಲಸ ಕಾರ್ಯಗಳಿಗೆ ಅನುಕೂಲವಾಗಲಿದೆ. ಕೆಳ ಹಂತದ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರುವುದು.

ಧನು: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ, ಶ್ರೇಯಸ್ಸು ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಗೆ ಭಂಗವುಂಟಾದೀತು. ಕೆಟ್ಟ ಸ್ನೇಹಿತರ ಸಂಗದಿಂದ ದೂರವಿರುವುದು ಉತ್ತಮ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಆರ್ಥಿಕವಾಗಿ ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕುಲದೇವರ ಪ್ರಾರ್ಥನೆ ನಡೆಸಿ.

ಕುಂಭ: ಮನಸ್ಸಿನಲ್ಲಿರುವ ಮಾತುಗಳನ್ನು ಕೆಲವೊಂದು ಸಂದರ್ಭದಲ್ಲಿ ಆಡದೇ ಇದ್ದರೇ ಕ್ಷೇಮ. ಕೌಟುಂಬಿಕವಾಗಿ ಸಮಾಧಾನಕರ ವಾತಾವರಣವಿರಲಿದೆ. ಮಕ್ಕಳಿಂದ ಸಂತೋಷದ ಸುದ್ದಿ ಕೇಳಿಬರಲಿದೆ.

ಮೀನ: ಯಾವುದಾದರೂ ವಸ್ತು, ವ್ಯಕ್ತಿಯ ಮೇಲೆ ವ್ಯಾಮೋಹ ಬೆಳೆಸಿಕೊಂಡಿದ್ದರೆ ನಿರಾಸೆಯಾದೀತು. ಅನಿರೀಕ್ಷಿತ ಖರ್ಚು ವೆಚ್ಚದ ಸಾಧ್ಯತೆ. ಮಾತೃ ಸಮಾನರಿಂದ ಕೆಲಸ ಕಾರ್ಯಗಳಿಗೆ ಸಾಥ್ ಸಿಗುವುದು. ತಾಳ್ಮೆ ಅಗತ್ಯ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?