Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 13 ಜನವರಿ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮಕ್ಕಳ ವಿದ್ಯಾಭ್ಯಾಸದ ಕಡೆಗೆ ವಿಶೇಷ ಗಮನ ಕೊಡಬೇಕಾಗುತ್ತದೆ. ವಾರಂತ್ಯದಲ್ಲಿ ಕಿರು ಪ್ರವಾಸಕ್ಕೆ ಯೋಜನೆ ಹಾಕಿಕೊಳ್ಳಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗಲಿದೆ. ಸತ್ಕಾರ್ಯದಲ್ಲಿ ಆಸಕ್ತಿ ಮೂಡಲಿದೆ.

ವೃಷಭ: ಶೈಕ್ಷಣಿಕ ರಂಗದಲ್ಲಿರುವವರಿಗೆ ಸಾಧನೆ ಮಾಡುವ ಅವಕಾಶ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಆತುರದ ನಿರ್ಧಾರದಿಂದ ತೊಂದರೆ ಮೈಮೇಲೆಳದುಕೊಳ್ಳಬೇಡಿ. ತಾಳ್ಮೆಯಿರಲಿ.

ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ಸಿಗಲಿದೆ. ಹಣಕಾಸಿನ ಖರ್ಚು ವೆಚ್ಚ ಕಂಡುಬಂದೀತು. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ಎಷ್ಟೇ ನಿಷ್ಠರಾಗಿದ್ದರೂ ಕೆಲವೊಂದು ಅಚಾತುರ್ಯಗಳು ನಡೆಯುವ ಸಂಭವ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ನಿರುದ್ಯೋಗಿಗಳು ಉದ್ಯೋಗಕ್ಕಾಗಿ ಶತ ಪ್ರಯತ್ನ ನಡೆಸಬೇಕಾಗುತ್ತದೆ.

ಸಿಂಹ: ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿ ಎದುರಾದೀತು. ಸಂಗಾತಿಯೊಂದಿಗೆ ತಾಳ್ಮೆಯಿಂದ ನಡೆದುಕೊಳ್ಳಿ. ಕೆಲಸ ಕಾರ್ಯಗಳಲ್ಲಿ ಕ್ರಿಯಾತ್ಮಕತೆಗೆ ಹೆಚ್ಚು ಒತ್ತು ಕೊಡಬೇಕಾಗುತ್ತದೆ. ಕಿರು ಸಂಚಾರ ಮಾಡಲಿದ್ಧೀರಿ.

ಕನ್ಯಾ: ವಾಹನ ಖರೀದಿ ಮಾಡುವ ನಿಮ್ಮ ಕನಸು ನನಸಾಗಲಿದೆ. ಮಕ್ಕಳನ್ನು ಕಿರು ಪ್ರವಾಸಕ್ಕೆ ಕರೆದೊಯ್ಯುವ ಮೂಲಕ ಸಂತೋಷ ನೀಡಲಿದ್ದೀರಿ. ಬಂಧು ಮಿತ್ರರನ್ನು ಭೇಟಿಯಾಗುವ ಯೋಗ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ತುಲಾ: ವಿವೇಚನೆಯಿಲ್ಲದೇ ತೆಗೆದುಕೊಳ್ಳುವ ನಿರ್ಧಾರಗಳು ಸಂಕಷ್ಟ ತಂದೀತು. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ಹಿರಿಯರಿಂದ ಬಳವಳಿ ಸಂರಕ್ಷಿಸುವ ಹೊಣೆಗಾರಿಕೆ ಹೆಗಲಿಗೇರಲಿದೆ. ತಾಳ್ಮೆಯಿರಲಿ.

ವೃಶ್ಚಿಕ: ಇನ್ನೊಬ್ಬರ ಮನಸ್ಸು ಅರಿಯದೇ ಆಡುವ ಮಾತಿನಿಂದ ಭಿನ್ನಾಭಿಪ್ರಾಯಗಳಾದೀತು. ಮಾತಿನ ಮೇಲೆ ನಿಗಾ ಇರಲಿ. ದೂರದ ವ್ಯವಹಾರದಿಂದ ಲಾಭವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ಧನು: ಪಿತ್ರಾರ್ಜಿತ ಆಸ್ತಿ ಕಾಪಾಡುವ ಹೊಣೆ ನಿಮ್ಮ ಹೆಗಲಿಗೇರಲಿದೆ. ಮಹಿಳೆಯರಿಗೆ ಶುಭ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗ. ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಂಡುಬರಲಿದೆ. ದಂಪತಿಗಳಲ್ಲಿ ಅನುರಾಗ ವೃದ್ಧಿ.

ಮಕರ: ಎಷ್ಟೋ ದಿನಗಳಿಂದ ಬಾಕಿಯಿದ್ದ ಹರಕೆ ತೀರಿಸಲು ಮುಂದಾಗಲಿದ್ದೀರಿ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಮನರಂಜನಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಚಿಂತೆ ಬೇಡ.

ಕುಂಭ: ಹೊಸ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ತಕ್ಕ ಫಲ ಸಿಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗದು.

ಮೀನ: ಕಾರ್ಯರಂಗದಲ್ಲಿ ನಿಮ್ಮ ಶೌರ್ಯ, ಸಾಹಸ ಪ್ರವೃತ್ತಿಯಿಂದ ಅನುಕೂಲವಾದೀತು. ಸಂಗಾತಿಯ ಮೆಚ್ಚುಗೆ ಗಳಿಸಲಿದ್ದೀರಿ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?