Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

webdunia
ಬೆಂಗಳೂರು , ಶನಿವಾರ, 14 ಜನವರಿ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಹೋದರ ಸಮಾನರಿಗೆ ಸಹಾಯ ಮಾಡಲಿದ್ದೀರಿ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆ. ಪರವೂರಿನ ವ್ಯವಹಾರದಿಂದ ನಷ್ಟದ ಭೀತಿ. ಗೃಹಿಣಿಯರಿಗೆ ಬಿಡುವಿಲ್ಲದ ಕೆಲಸದೊತ್ತಡ.

ವೃಷಭ: ಮಕ್ಕಳಿಂದ ನಿಮ್ಮ ಸಂತೋಷ ಹೆಚ್ಚಲಿದೆ. ಆರ್ಥಿಕ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಹೊಸ ಮಿತ್ರರಿಂದ ಕಾರ್ಯಾನುಕೂಲವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಪಾರದರ್ಶಕತೆಗೆ ಅವಕಾಶ ನೀಡಿ. ನೂತನವಾಗಿ ಕೆಲಸಕ್ಕೆ ಸೇರಿಕೊಂಡಿದ್ದರೆ ಸವಾಲುಗಳು ಎದುರಾದೀತು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಅಧಿಕ ಶ್ರಮದಾಯಕ ಕೆಲಸದಿಂದ ದೇಹಾಯಾಸವಾದೀತು. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು. ಎಚ್ಚರಿಕೆಯಿರಲಿ.

ಸಿಂಹ: ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವ ಸಾಧ‍್ಯತೆ. ಇನ್ನೊಬ್ಬರಿಗೆ ಭರವಸೆ ಕೊಡುವ ಮುನ್ನ ಯೋಚನೆ ಮಾಡಿ ನಿರ್ಧಾರಕ್ಕೆ ಬನ್ನಿ. ಹಣಕಾಸಿನ ವಿಚಾರದಲ್ಲಿ ಸಾಮಾನ್ಯ ಪರಿಸ್ಥಿತಿಯಿರಲಿದೆ.

ಕನ್ಯಾ: ಆಸ್ತಿ ಪರಭಾರೆ ವಿಚಾರಗಳಲ್ಲಿ ತೊಂದರೆಗಳು ಕಂಡುಬಂದೀತು. ಆದರೆ ಕೌಟುಂಬಿಕವಾಗಿ ನಿಮಗೆ ಬೆಂಬಲ ಸಿಗಲಿದ್ದು, ಮನಸ್ಸಿಗೆ ನೆಮ್ಮದಿಯಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ಅನಗತ್ಯ ಚಿಂತೆ ಬೇಡ.

ತುಲಾ: ಮನರಂಜನಾ ಕೆಲಸಗಳಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ದಾಂಪತ್ಯದಲ್ಲಿ ತೃಪ್ತಿಕರ ವಾತಾವರಣವಿರಲಿದೆ. ಹಣಕಾಸಿನ ವಿಚಾರದಲ್ಲಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ಉದ್ಯೋಗ, ವ್ಯವಹಾರದಲ್ಲಿ ಎಚ್ಚರಿಕೆಯ ಹೆಜ್ಜೆಯಿಡುವುದು ಉತ್ತಮ. ಹಿತ ಶತ್ರುಗಳ ಕಾಟ ಕಂಡುಬಂದೀತು. ಕಾರ್ಯರಂಗದಲ್ಲಿ ನಿಮ್ಮ ನಿಷ್ಠೆಗೆ ತಕ್ಕ ಫಲ ಸಿಗುವುದು. ಬಂಧು ಮಿತ್ರರನ್ನು ಭೇಟಿ ಮಾಡಲಿದ್ದೀರಿ.

ಧನು: ಮನೆಯವರೊಂದಿಗೆ ಸಂತೋಷದಿಂದ ಕಾಲ ಕಳೆಯುವ ಯೋಗ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ.

ಮಕರ: ದೂರದ ವ್ಯವಹಾರಗಳಿಂದ ಧನಾಗಮನವಾಗಲಿದೆ. ಅಧ್ಯಯನ ಶೀಲರಿಗೆ ಅನುಕೂಲಕರ ವಾತಾವರಣ. ಹೊಸ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಉತ್ಸಾಹ ಕಂಡುಬರಲಿದೆ. ಇಷ್ಟಭೋಜನ ಮಾಡಲಿದ್ದೀರಿ.

ಕುಂಭ: ಸರಕಾರೀ ನೌಕರರಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ಕೆಲಸ ಮಾಡಬೇಕಾಗುತ್ತದೆ.

ಮೀನ: ಮಹಿಳೆಯರಿಗೆ ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯ. ಕೆಲಸ ಕಾರ್ಯಗಳಲ್ಲಿ ಗುರುಹಿರಿಯರ ಮಾರ್ಗದರ್ಶನ ಪಡೆಯಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?