ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 18 ಜನವರಿ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಯೋಗ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಅಪಾಯ ಸಾಧ್ಯತೆ.

ವೃಷಭ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ದೂರದ ಮಿತ್ರರ ಸಮಾಗಮ ಸಾಧ‍್ಯತೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ವ್ಯಾಪಾರಿಗಳಿಗೆ ಆದಾಯ ವೃದ್ಧಿಗೆ ನಾನಾ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ.

ಮಿಥುನ: ನಿರ್ಧಾರ ತೆಗೆದುಕೊಳ್ಳುವಾಗ ಮಾನಸಿಕವಾಗಿ ಗೊಂದಲಗಳು ಕಾಡೀತು. ಆಪ್ತರ ಸಲಹೆ ಪಾಲಿಸುವುದು ಉತ್ತಮ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ಮಾಡಿಕೊಳ್ಳಲಿದ್ದೀರಿ.

ಕರ್ಕಟಕ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಧನಾದಾಯ ಹೆಚ್ಚಳಕ್ಕೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ತಾಳ್ಮೆಯಿರಲಿ.

ಸಿಂಹ: ಆಹಾರ ಸೇವನೆಯಲ್ಲಿ ಮಿತಿಯಿರಲಿ. ಇಲ್ಲದೇ ಹೋದರೆ ಆರೋಗ್ಯ ಸಮಸ್ಯೆಯಾದೀತು. ದೇವತಾ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಹಿಂದೆ ಮಾಡಿದ ಸತ್ಕಾರ್ಯಗಳಿಗೆ ತಕ್ಕ ಫಲ ಪಡೆಯಲಿದ್ದೀರಿ.

ಕನ್ಯಾ: ಕಾರ್ಯಕ್ಷೇತ್ರದಲ್ಲಿ ಅತೀ ಕಾಳಜಿ ವಹಿಸಿ ಮಾಡುವ ಕೆಲಸಗಳಲ್ಲೂ ಕೆಲವೊಮ್ಮೆ ಅಚಾತುರ್ಯ ಸಂಭವಿಸೀತು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಆತುರದ ನಿರ್ಣಯ ಬೇಡ. ತಾಳ್ಮೆ ಅಗತ್ಯ.

ತುಲಾ: ನಿಮ್ಮ ಭವಿಷ್ಯಕ್ಕಾಗಿ ಕೆಲವೊಂದು ತೀರ್ಮಾನ ಕೈಗೊಳ್ಳಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಿದ್ದರೆ ಕೆಲಸಗಾರರಿಂದ ತೊಂದರೆಗಳು ಎದುರಾದೀತು. ತಾಳ್ಮೆಯಿಂದ ವ್ಯವಹರಿಸಬೇಕು. ಆರೋಗ್ಯದ ಕಡೆಗೆ ಗಮನವಿರಲಿ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ವಿಶೇಷವಾದ ಸೌಲಭ್ಯ ಪಡೆಯಲಿದ್ದೀರಿ. ಬೇರೆಯವರ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ವಿವಾಹಾದಿ ಪ್ರಯತ್ನಗಳಿಗೆ ತಕ್ಕ ಫಲ ಸಿಗುವುದು.

ಧನು: ಸಾಂಸಾರಿಕವಾಗಿ ಬಿಡುವಿಲ್ಲದ ಕೆಲಸಗಳಿಂದಾಗಿ ದೇಹಾಯಾಸವಾದೀತು. ಸಂಗಾತಿಯೊಂದಿಗೆ ಅಸಮಾಧಾನ ತೋರಿಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಸ್ಥಾನ ಮಾನದಿಂದ ಮಾನಸಿಕವಾಗಿ ತೃಪ್ತಿ ಕಂಡುಬರಲಿದೆ.

ಮಕರ: ಉನ್ನತ ಸ್ಥಾನಮಾನ ಪಡೆಯುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಹೊಸದಾಗಿ ಪರಿಚಿತರಾದವರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಸಹಾಯವಾದೀತು. ಮನೆಯಲ್ಲಿ ಅಶಾಂತಿಗೆ ಅವಕಾಶ ಕೊಡಬೇಡಿ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಆದರೆ ನಿಮ್ಮಲ್ಲಿರುವ ಕ್ರಿಯಾತ್ಮಕ ಶಕ್ತಿಯನ್ನು ಹೊರತರಲು ಅವಕಾಶ ಸಿಗಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಮೀನ: ನೂತನ ವ್ಯವಹಾರದಲ್ಲಿ ಪ್ರಾಮಾಣಿಕತೆಗೆ ಅವಕಾಶ ನೀಡುವುದು ಉತ್ತಮ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸುವ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ನಿಮ್ಮ ಸ್ವತಂತ್ರ ಆಲೋಚನೆಗಳು ಇತರರಿಗೆ ಕಿರಿ ಕಿರಿಯಾಗದಂತೆ ನೋಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments