Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 1 ಫೆಬ್ರವರಿ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವ್ಯಾಪಾರ, ವ್ಯವಹಾರದಲ್ಲಿ ವಿಶ್ವಾಸ ಗಳಿಸಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಏನೂ ಸಮಸ್ಯೆಯಾಗದು. ಆದರೆ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಬಹಳ ದಿನಗಳ ನಂತರ ಹಳೆಯ ಮಿತ್ರರ ಭೇಟಿ ಯೋಗ.

ವೃಷಭ: ಮುಖ್ಯವಾದ ವಿಷಯ ಮರೆತು ತೊಂದರೆಗೆ ಸಿಲುಕಿಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಹೊಸದಾಗಿ ಕೆಲಸಕ್ಕೆ ಪ್ರಯತ್ನಿಸುವವರಿಗೆ ಕೊಂಚ ಮುನ್ನಡೆ ಕಂಡುಬಂದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮೇಲಧಿಕಾರಿಗಳ ವಿಶ್ವಾಸಕ್ಕೆ ಪಾತ್ರರಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಗೃಹ, ವಾಹನಾದಿ ಖರೀದಿ ವಿಚಾರದಲ್ಲಿ ಅಡೆತಡೆಗಳು ಕಂಡುಬಂದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಕ್ರಿಯಾತ್ಮಕವಾಗಿ ಯೋಚನೆ ಮಾಡಬೇಕಾಗುತ್ತದೆ. ಸಂಗಾತಿಯ ಸಾಥ್ ಸಿಗಲಿದೆ.

ಸಿಂಹ: ಹಿಂದೆ ಮಾಡಿದ್ದ ಸಾಲ ಪಾವತಿಯಾಗಿ ಮನಸ್ಸಿಗೆ ನೆಮ್ಮದಿಯಾಗಲಿದೆ. ಇತರರೊಂದಿಗೆ ಹಣಕಾಸಿನ ವ್ಯವಹಾರ ನಡೆಸುವಾಗ ಎಚ್ಚರಿಕೆಯಿರಲಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹೆಚ್ಚಿನ ಆಸಕ್ತಿ ಕಂಡುಬರಲಿದೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಅತೃಪ್ತಿ ಕಂಡುಬಂದೀತು. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ದಾಕ್ಷಿಣ್ಯಕ್ಕೆ ಒಳಗಾಗದೇ ನಿಮಗೆ ಅನಿಸಿದ್ದನ್ನು ನೇರವಾಗಿ ಹೇಳಲಿದ್ದೀರಿ.

ತುಲಾ: ಆತ್ಮೀಯರೊಂದಿಗೆ ಉತ್ತಮ ಕ್ಷಣ ಕಳೆಯುವ ಅವಕಾಶ ಸಿಗಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಕಿರು ಸಂಚಾರ ಮಾಡಬೇಕಾಗುತ್ತದೆ.

ವೃಶ್ಚಿಕ: ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಿಸಿಕೊಳ್ಳಬೇಕಾಗುತ್ತದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಧನು: ಗೃಹ ಸಂಬಂಧೀ ಕೆಲಸಗಳಲ್ಲಿ ಬಿಡುವಿಲ್ಲದೇ ದುಡಿಯಲಿದ್ದೀರಿ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ನಿಮ್ಮಲ್ಲಿರುವ ಕೊರತೆ ಇತರರ ಎದುರು ತೋರ್ಪಡಿಸಿಕೊಳ್ಳಬೇಡಿ. ದೇವತಾ ಪ್ರಾರ್ಥನೆ ಮಾಡಿದರೆ ಉತ್ತಮ.

ಮಕರ: ನಿಮ್ಮ ಕ್ರಿಯಾತ್ಮಕ ಯೋಜನೆಗಳಿಗೆ ಮನೆಯವರ ಸಹಕಾರ ಸಿಗಲಿದೆ. ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಮಹಿಳೆಯರಿಗೆ ಹಣಕಾಸಿನ ವಿಚಾರದಲ್ಲಿ  ವಂಚನೆಯ ಭೀತಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಮೀನ: ಹಠಮಾರೀತನ ಮನೋಭಾವ ಬಿಟ್ಟು ಸಹನೆಯಿಂದ ಕಾರ್ಯಪ್ರವೃತ್ತರಾದರೆ ಕೈ ಹಿಡಿಯುವ ಕೆಲಸಗಳಲ್ಲಿ ಯಶಸ್ಸು ಕಾಣಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?