Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 5 ಫೆಬ್ರವರಿ 2023 (07:40 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬಹಳ ದಿನಗಳ ನಂತರ ಹಳೆಯ ಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಮನಸ್ಸಿಗೆ ಉಲ್ಲಾಸ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ.

ವೃಷಭ: ಮಕ್ಕಳ ಖುಷಿಗಾಗಿ ಕಿರು ಪ್ರವಾಸ ಮಾಡಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಕಿರು ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ಕಾರ್ಯರಂಗದಲ್ಲಿ ಘರ್ಷಣೆಗೆ ಅವಕಾಶ ಕೊಡದೇ ಕಾರ್ಯನಿರ್ವಹಿಸಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದೀರಿ.

ಕರ್ಕಟಕ: ಭೂಮ್ಯಾದಿ ವ್ಯವಹಾರಗಳಲ್ಲಿ ಅನುಕೂಲಕರ ಪರಿಸ್ಥಿತಿಯಿರಲಿದೆ. ಸರಕಾರೀ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ನಿಮ್ಮ ಗುಟ್ಟು ಇತರರ ಮುಂದೆ ಬಯಾಗಲಿದೆ. ಸಂಗಾತಿಯೊಂದಿಗೆ ಮಾತನಾಡುವಾಗ ಸಹನೆಯಿರಲಿ.

ಸಿಂಹ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಇಷ್ಟ ಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ನಿಮ್ಮ ಒಳ್ಳೆಯತನವನ್ನು ಇತರರು ದುರುಪಯೋಗಪಡಿಸಿಕೊಳ್ಳಲು ಬಿಡಬೇಡಿ.

ಕನ್ಯಾ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಅಡೆತಡೆಗಳು ಬಂದೀತು. ಪೂರ್ವಾಪರ ವಿಚಾರಿಸದೇ ಯಾವುದೇ ವ್ಯಕ್ತಿಯನ್ನು ನಂಬುವುದು ಒಳ್ಳೆಯದಲ್ಲ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಇದುವರೆಗೆ ಇದ್ದ ಅಡಚಣೆಗಳು ದೂರವಾಗಲಿದೆ.

ತುಲಾ: ಕಾರ್ಯರಂಗದಲ್ಲಿ ವಿಶೇಷಾಧಿಕಾರ ನಿಮಗೆ ಸಿಗುವುದು. ಜವಾಬ್ಧಾರಿಗಳನ್ನು ಸರಿಯಾಗಿ ನಿಭಾಯಿಸಲು ಕಲಿಯಬೇಕು. ಮನಸ್ಸಿನಲ್ಲಿ ಏನೇ ಇದ್ದರೂ ಅದನ್ನು ಮುಕ್ತವಾಗಿ ಹೇಳದೇ ಮುಚ್ಚಿಡುವ ಪರಿಸ್ಥಿತಿ.

ವೃಶ್ಚಿಕ: ದೂರದ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ತಲ್ಲೀನತೆ ಕಂಡುಬರಲಿದೆ. ಉದ್ಯೋಗ ನಿಮಿತ್ತ ಪರವೂರಿಗೆ ಸಂಚರಿಸುವ ಅನಿವಾರ್ಯತೆಯಿರಲಿದೆ. ಪ್ರಯಾಣದಲ್ಲಿ ಎಚ್ಚರ.

ಧನು: ಎಷ್ಟೇ ಕಾರ್ಯದೊತ್ತಡವಿದ್ದರೂ ತಾಳ್ಮೆ ಕಳೆದುಕೊಳ್ಳುವ ಪ್ರಸಂಗ ಬಾರದಂತೆ ಎಚ್ಚರಿಕೆ ವಹಿಸಿ. ಗುರು ಹಿರಿಯರ ಪ್ರೀತಿಗೆ ಪಾತ್ರರಾಗಲಿದ್ದೀರಿ. ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರಲಿದೆ.

ಮಕರ: ನಿಮ್ಮಿಂದಾಗಿ ಮನೆಯ ಸದಸ್ಯರೊಬ್ಬರಿಗೆ ತೊಂದರೆಯಾಗುವ ಸಾಧ್ಯತೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಕುಂಭ: ಇನ್ನೊಬ್ಬರಿಗೆ ಲಾಭವಾಗುವ ಕೆಲಸಗಳು ನಿಮ್ಮಿಂದ ನಡೆಯಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗುವುದು. ಹಣಕಾಸಿನ ಹರಿವಿಗೆ ತೊಂದರೆಯಾಗದು. ದೇವತಾ ಪ್ರಾರ್ಥನೆ ಮಾಡಿ.

ಮೀನ: ಏನೇ ನಿರ್ಧಾರ ತೆಗೆದುಕೊಳ್ಳುವುದಿದ್ದರೂ ಮನಸ್ಸು ನಿಮ್ಮ ಹತೋಟಿಯಲ್ಲಿರಲಿ. ಬಂಧು ಮಿತ್ರರನ್ನು ಭೇಟಿಯಾಗುವ ಯೋಗ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?