Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 8 ಫೆಬ್ರವರಿ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮುಖ್ಯವಾಗಿ ಮಾಡಬೇಕಾದ ಕೆಲಸ ಮರೆತು ಕಿರಿ ಕಿರಿ ಅನುಭವಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಪ್ರಶಂಸೆ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚ ಬೇಡ.

ವೃಷಭ: ನಿಮ್ಮ ಖಾಸಗಿ ಬದುಕಿನಲ್ಲಿ ಮೂರನೆಯವರ ಪ್ರವೇಶದಿಂದ ತೊಂದರೆ ಎದುರಾಗುವ ಸಾಧ‍್ಯತೆ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ತಾಳ್ಮೆಯಿರಲಿ.

ಮಿಥುನ: ಬೀಜ ಹಾಕಿದ ತಕ್ಷಣ ಫಲ ಸಿಗಬೇಕೆಂದು ಬಯಸುವುದು ಒಳ್ಳೆಯಲ್ಲ. ತಾಳ್ಮೆಯಿರಬೇಕು. ಉದ್ಯೋಗ ಕ್ಷೇತ್ರದಲ್ಲಿ ಅಡೆತಡೆಯಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ವ್ಯಾಪಾರಿಗಳಿಗೆ ಹಿತಶತ್ರುಗಳಿಂದ ಮುಕ್ತಿ ಸಿಗಲಿದೆ.

ಕರ್ಕಟಕ: ಇಷ್ಟು ದಿನ ನೀವು ಕಾಪಾಡಿಕೊಂಡು ಬಂದಿದ್ದ ವಸ್ತು ಅನಿರೀಕ್ಷಿತವಾಗಿ ನಷ್ಟವಾಗುವ ಸಾಧ‍್ಯತೆ. ಮಾನಸಿಕವಾಗಿ ಕಾಡುವ ವಿಚಾರವನ್ನು ಆತ್ಮೀಯರೊಂದಿಗೆ ಹಂಚಿಕೊಳ್ಳಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಸೆಯಾದೀತು. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಯೋಗ. ಹಿರಿಯರು ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ.

ಕನ್ಯಾ: ನೂತನ ಕೆಲಸಗಳಿಗೆ ಕೈ ಹಾಕುವಾಗ ಅಡೆತಡೆಗಳು ಸಾಮಾನ್ಯ. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗಬೇಕಾದ ಅನಿವಾರ್ಯತೆ ಎದುರಾಗಲಿದೆ. ಇಷ್ಟಮಿತ್ರರನ್ನು ಭೇಟಿಯಾಗಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣವಿರಲಿ.

ತುಲಾ: ಉದ್ದೇಶಿತ ಕೆಲಸಗಳು ನಿಗದಿತ ಸಮಯದಲ್ಲಿ ಪೂರ್ತಿ ಮಾಡಿದ ಸಂತೋಷ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಕಾರ್ಯನಿಮಿತ್ತ ಪರವೂರಿಗೆ ಸಂಚರಿಸಬೇಕಾದೀತು.

ವೃಶ್ಚಿಕ: ಸಮಯದ ಅಭಾವದಿಂದ ಕೆಲವೊಂದು ಕೆಲಸಗಳನ್ನು ಪೂರ್ತಿ ಮಾಡಲಾಗದೇ ನಿರಾಸೆ ಅನುಭವಿಸಲಿದ್ದೀರಿ. ಹಿರಿಯರು ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದೀರಿ. ಆದಾಯ ವೃದ್ಧಿಗೆ ಮಾರ್ಗ ಕಂಡುಬರಲಿದೆ.

ಧನು: ಪರರ ಹಿತ ಬಯಸುವುದು ಅತಿಯಾದರೂ ನಿಮಗೇ ತೊಂದರೆ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ನಿರುದ್ಯೋಗಿಗಳು ಪಾಲಿಗೆ ಬಂದಿದ್ದೇ ಪಂಚಾಮೃತ ಎಂದು ತೃಪ್ತಿಪಟ್ಟುಕೊಳ್ಳುವ ಅನಿವಾರ್ಯತೆ.

ಮಕರ: ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲಿದ್ದೀರಿ. ಸಂಗಾತಿಯಿಂದ ಅಸಮಾಧಾನ ತೋರಿಬಂದರೂ ಹೆಚ್ಚು ತಲೆಕಡಿಸಿಕೊಳ್ಳಬೇಕಾಗಿಲ್ಲ. ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಸರಕಾರೀ ನೌಕರರಿಗೆ ಉನ್ನತಿಯ ಯೋಗವಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕೌಟುಂಬಿಕವಾಗಿ ಹಳೆಯ ಸಮಸ್ಯೆಗಳು ಮತ್ತೆ ತಲೆದೋರಲಿವೆ. ಎಚ್ಚರಿಕೆಯಿಂದಿರಿ.

ಮೀನ: ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ಏಳಿಗೆ ಕಂಡುಬರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಸರಕಾರಿ ಕಚೇರಿಗೆ ಓಡಾಟ ನಡೆಸಬೇಕಾದೀತು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?