ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಅಭಿವೃದ್ಧಿಯ ಯೋಗ. ಸಾಂಸಾರಿಕವಾಗಿ ಎಂದಿನ ತಾಪತ್ರಯಗಳಿದ್ದರೂ ಅದನ್ನು ಸರಿದೂಗಿಸಿಕೊಂಡು ಹೋಗಬೇಕಾದ ಅನಿವಾರ್ಯತೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಲಿದ್ದೀರಿ.
ವೃಷಭ: ನಿಮಗೆಂದೇ ಬಗೆದ ಕೆಲಸ ನಿಮ್ಮ ಮೇಲೇ ಬರುವುದನ್ನು ತಪ್ಪಿಸಲು ಸಾಧ್ಯವಿಲ್ಲ. ನೆರೆಹೊರೆಯವರೊಂದಿಗೆ ಸಣ್ಣ ಮಟ್ಟಿನ ಘರ್ಷಣೆ ನಡೆದೀತು. ಮಾತಿನ ಮೇಲೆ ನಿಗಾ ಇರಲಿ. ದೇವತಾ ಪ್ರಾರ್ಥನೆ ಮಾಡಿದರೆ ಉತ್ತಮ.
ಮಿಥುನ: ಮನಸ್ಸಿಲ್ಲದೇ ಹೋದರೂ ಕೆಲವೊಂದು ಕೆಲಸಗಳನ್ನು ಅನಿವಾರ್ಯವಾಗಿ ಮಾಡಬೇಕಾಗುತ್ತದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹಣಕಾಸಿನ ವಿಚಾರದಲ್ಲಿ ಅನಿರೀಕ್ಷಿತ ಖರ್ಚು ವೆಚ್ಚ ಸಾಧ್ಯತೆ.
ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಮುನ್ನಡೆ ಕಂಡುಬರಲಿದೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ. ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಕಂಡುಬರಲಿದೆ. ತಾಳ್ಮೆಯಿರಲಿ.
ಸಿಂಹ: ನಿಮಗೆ ಹಿಂದೆ ಉಪಕಾರ ಮಾಡಿದ್ದವರಿಂದ ಪ್ರತ್ಯುಪಕಾರ ಲಭಿಸಲಿದೆ. ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಅನಗತ್ಯ ಚಿಂತೆ ಬೇಡ.
ಕನ್ಯಾ: ಉದ್ಯೋಗ ನಿಮಿತ್ತವಾಗಿ ಪರವೂರಿಗೆ ಸಂಚರಿವು ಸಾಧ‍್ಯತೆ. ಮೇಲಧಿಕಾರಿಗಳ ನಿರೀಕ್ಷೆ ಪೂರ್ತಿ ಮಾಡುವ ಒತ್ತಡವಿರಲಿದೆ. ಸಂಗಾತಿಯ ಸಾಂತ್ವನ ಮನಸ್ಸಿಗೆ ಸಮಾಧಾನ ನೀಡಿತು. ಆರೋಗ್ಯದ ಬಗ್ಗೆ ಎಚ್ಚರವಿರಲಿ.
ತುಲಾ: ಅಂದುಕೊಂಡಿದ್ದನ್ನು ಸಾಧಿಸಲು ಕೆಲವು ಅಡೆತಡೆಗಳು ಬಂದರೂ ಅಂತಿಮ ಜಯ ನಿಮ್ಮದಾಗಲಿದೆ. ಕೌಟುಂಬಿಕವಾಗಿ ನಿಮಗೆ ಸಹಕಾರ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬಂದೀತು. ಚಿಂತೆ ಬೇಡ.
ವೃಶ್ಚಿಕ: ಮನೆಯವರೊಂದಿಗೆ ಪರಾಮರ್ಶಿಸಿ ಯಾವುದೇ ನಿರ್ಧಾರ ತೆಗೆದುಕೊಂಡರೆ ಉತ್ತಮ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು. ಕಿರು ಸಂಚಾರ ಮಾಡಲಿದ್ದೀರಿ.
ಧನು: ಮನೆ ರಿಪೇರಿ, ಕಟ್ಟಡ ಕಾಮಗಾರಿ ಕೆಲಸಗಳನ್ನು ಪ್ರಾರಂಭಿಸಿದ್ದರೆ ಅಡೆತಡೆಗಳು ಕಂಡುಬಂದೀತು. ಕೆಲಸದವರಿಂದ ತೊಂದರೆ ಎದುರಾದೀತು. ತಾಳ್ಮೆ ಅಗತ್ಯ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ.
ಮಕರ: ವಿವೇಚನೆಯಿಂದ ನಿರ್ಧಾರ ತೆಗೆದುಕೊಂಡರೆ ಸಂಭಾವ್ಯ ಸಮಸ್ಯೆಗಳು ದೂರವಾಗಲಿದೆ. ಸರಕಾರೀ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ವಾಹನ ಖರೀದಿಸುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಚಿಂತೆ ಬೇಡ.
ಕುಂಭ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಕುಟುಂಬ ಸದಸ್ಯರ ಪ್ರೀತ್ಯಾದರಗಳಿಗೆ ಪಾತ್ರರಾಗಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.
ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ‍್ಯತೆ. ವಿಶೇಷ ವ್ಯಕ್ತಿಗಳು ಇಂದು ನಿಮ್ಮ ಜೀವನಕ್ಕೆ ತಿರುವ ನೀಡಲಿದ್ದಾರೆ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ಸಿಗಲು ಕೆಲವು ದಿನ ಕಾಯಬೇಕಾದೀತು.