Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 14 ಫೆಬ್ರವರಿ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಮ್ಮ ಸಾಮರ್ಥ್ಯ ಇನ್ನೊಬ್ಬರಿಂದ ತಿಳಿದುಕೊಳ್ಳಬೇಕಾದ ಪರಿಸ್ಥಿತಿ. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟದಿಂದ ದೇಹಾಯಾಸವಾದೀತು. ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳನ್ನು ಮರೆತು ಮುನ್ನಡೆಯಬೇಕಾಗುತ್ತದೆ.

ವೃಷಭ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಿದ್ದೀರಿ. ಸಾಂಸಾರಿಕವಾಗಿ ಸುಖ, ಸಮೃದ್ಧಿಯಿರಲಿದೆ. ಸಂಗಾತಿಗೆ ಅಚ್ಚರಿಯ ಉಡುಗೊರೆ ನೀಡಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ನೀವು ಇಷ್ಟಪಡುವ ವ್ಯಕ್ತಿಯೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲು ಅವಕಾಶ ಸಿಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭದಾಯಕ ದಿನವಾಗಿರಲಿದೆ. ಚಿಂತೆ ಬೇಡ.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಧನಗಳಿಕೆಗೆ ಅನ್ಯ ಮಾರ್ಗಗಳ ಬಗ್ಗೆಯೂ ಚಿಂತನೆ ನಡೆಸಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಯಾವುದೇ ಕೆಲಸಕ್ಕೆ ಮುನ್ನ ಪೂರ್ವಾಪರ ತಿಳಿದು ಮುಂದುವರಿಯುವುದು ಉತ್ತಮ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ನಿಮ್ಮ ಹಿಂದಿನ ಸಾಲಗಳು ಪಾವತಿಯಾಗಲಿದೆ.

ಕನ್ಯಾ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಆಪ್ತರಿಂದಲೇ ತೊಂದರೆಗಳು ಎದುರಾದೀತು. ಮೇಲಧಿಕಾರಿಗಳ ಸಹಾಯ ಪಡೆಯಲಿದ್ದೀರಿ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ದೂರದ ವ್ಯವಹಾರಗಳಿಂದ ಲಾಭವಾದೀತು.

ತುಲಾ: ಆಸ್ತಿ ವಿಚಾರಗಳಲ್ಲಿ ಅನಿರೀಕ್ಷಿತ ಬೆಳವಣಿಗೆಗಳು ಕಂಡುಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿಯಾದೀತು. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಶ್ಚಿಕ: ದೈವಾನುಗ್ರಹದಿಂದ ಇಂದು ನೀವು ಕೈಗೊಳ್ಳುವ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಸನ್ಮಿತ್ರರ ಸಹಕಾರದಿಂದ ಕಾರ್ಯರಂಗದಲ್ಲಿ ಸಮಸ್ಯೆಗಳು ನಿವಾರಣೆಯಾಗಲಿವೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.

ಧನು: ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಪ್ರಯತ್ನ ನಡೆಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆಯಿರುವುದು. ಚಿಂತೆ ಬೇಡ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ವಾಕ್ಚತುರತೆಯೇ ಉಪಯೋಗಕ್ಕೆ ಬರಲಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ಮೂಲಕ ಸಂತೋಷ ನೀಡಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಅಜಾಗರೂಕತೆ ತೋರಿದರೆ ನಷ್ಟವಾದೀತು.

ಕುಂಭ: ಕೌಟುಂಬಿಕವಾಗಿ ಸಂತೋಷದಾಯಕ ದಿನವಾಗಿರಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಮಾತೃ ಸಮಾನರ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಕೊಡು ಕೊಳ್ಳುವ ವ್ಯವಹಾರದಲ್ಲಿ ಲಾಭ ಕಂಡುಬಂದೀತು. ದಿನದಂತ್ಯಕ್ಕೆ ಶುಭ ಸುದ್ದಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?