ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 17 ಫೆಬ್ರವರಿ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಆಪ್ತರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಸಹಾಯ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಹಿರಿಯರಿಂದ ಸೂಕ್ತ ಸಮಯಕ್ಕೆ ಸೂಕ್ತ ಸಲಹೆಗಳು ಸಿಗಲಿವೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮದಲ್ಲದ ತಪ್ಪಿಗೆ ಅಪವಾದಕ್ಕೀಡಾಗುವ ಭೀತಿ. ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಅಪರಿಚಿತರನ್ನು ನಂಬಿ ಹೂಡಿಕೆ ಮಾಡಲು ಹೋಗಬೇಡಿ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಮಿಥುನ: ದೈವಾನುಕೂಲದಿಂದ ನೀವು ಕೈ ಹಿಡಿಯುವ ಕೆಲಸಗಳಲ್ಲಿ ಇಂದು ಯಶಸ್ಸು ಕಾಣಲಿದ್ದೀರಿ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ಕೊಡಲಿದ್ದೀರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ.

ಕರ್ಕಟಕ: ವ್ಯಾಪಾರ, ವ್ಯವಹಾರಗಳಲ್ಲಿ ತೊಡಗಿಸಿಕೊಂಡವರಿಗೆ ಅನ್ಯ ಊರಿಗೆ ಪ್ರಯಾಣಿಸುವ ಅನಿವಾರ್ಯತೆ ಎದುರಾಗಲಿದೆ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ.

ಸಿಂಹ: ನಿಮ್ಮ ಕೆಲಸ ಕಾರ್ಯದ ವೈಖರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಹೊಸ ಜವಾಬ್ಧಾರಿಗಳು ನಿಮ್ಮ ಹೆಗಲಿಗೇರಲಿವೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ತಾಳ್ಮೆಯಿರಲಿ.

ಕನ್ಯಾ: ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ತುಲಾ: ಕೆಲಸದೊತ್ತಡದಿಂದಾಗಿ ದೇಹಾಯಾಸವಾದೀತು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ವೃಶ್ಚಿಕ: ಮಕ್ಕಳ ಬಗ್ಗೆ ವಿಶೇಷ ಗಮನ ಕೊಡಬೇಕಾಗುತ್ತದೆ. ನೀರು, ಬೆಂಕಿಯಿಂದ ಅಪಾಯವಾಗುವ ಸಾಧ್ಯತೆ. ಮೇಲಧಿಕಾರಿಗಳ ಪ್ರೀತಿಗೆ ಪಾತ್ರರಾಗಲಿದ್ದೀರಿ. ಆರ್ಥಿಕವಾಗಿ ಸಬಲರಾಗಲು ಅವಕಾಶ.

ಧನು: ಉತ್ತಮ ವಾಕ್ಚತುರತೆಯಿಂದ ಜನಮನ್ನಣೆ ಪಡೆಯಲಿದ್ದೀರಿ. ಅನಿರೀಕ್ಷಿತ ಅತಿಥಿಗಳ ಆಗಮನ ಸಾಧ್ಯತೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಗೆ ನಾನಾ ದಾರಿಗಳು ಕಂಡುಬರಲಿವೆ. ಪರರ ಕೆಲಸಗಳಿಗೆ ಸಹಾಯ ಮಾಡುವ ನಿಮ್ಮ ಗುಣ ಪ್ರಶಂಸೆಗೊಳಗಾಗಲಿದೆ. ಸಾಮಾಜಿಕವಾಗಿ ಗೌರವ ಪ್ರಾಪ್ತಿಯಾಗುವುದು. ಆರೋಗ್ಯದಲ್ಲಿ ಸುಧಾರಣೆ.

ಕುಂಭ: ಸತತ ಪ್ರಯತ್ನದ ಫಲವಾಗಿ ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗುವುದು. ಕೌಟುಂಬಿಕವಾಗಿ ಸಂತೋಷದಾಯಕ ದಿನವಾಗಲಿದೆ. ಕುಟುಂಬ ಸದಸ್ಯರ ಅಭಿಪ್ರಾಯ ಆಲಿಸಿ ನಿರ್ಧಾರ ತೆಗೆದುಕೊಳ್ಳಿ.

ಮೀನ: ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗುವುದು. ಮನಸ್ಸಿಗೆ ಖುಷಿ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಪಾಲುದಾರಿಕೆ ವ್ಯವಹಾರದಲ್ಲಿ ಯಶಸ್ಸು ಕಂಡುಬರಲಿದೆ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಶಿವರಾತ್ರಿ 2026 ಪೂಜೆ ಯಾವಾಗ ಮಾಡಬೇಕು, ಪ್ರಶಸ್ತ ಸಮಯದ ಮಾಹಿತಿ ಇಲ್ಲಿದೆ

ಶನಿ ದೋಷ ನಿವಾರಣೆಗೆ ಇಂದು ಆಂಜನೇಯ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments