Daily Horoscope
✕

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 20 ಫೆಬ್ರವರಿ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ನಿಮಿತ್ತ ಪ್ರಯಾಣ ಮಾಡಬೇಕಾಗಿ ಬರಲಿದೆ. ನೀವು ಹಿಂದೆ ಮಾಡಿದ ತಪ್ಪಿಗೆ ತಕ್ಕ ಫಲ ಅನುಭವಿಸಬೇಕಾಗುತ್ತದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ತಾಳ್ಮೆಯಿರಲಿ.

ವೃಷಭ: ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದು.

ಮಿಥುನ: ಫಲಾಪೇಕ್ಷೆಯಿಲ್ಲದೇ ಮಾಡುವ ಕೆಲಸಗಳು ನಿಮಗೆ ಒಳಿತು ಮಾಡಲಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ. ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ.

ಕರ್ಕಟಕ: ವಿವೇಚನೆಯಿಂದ ತೀರ್ಮಾನ ತೆಗೆದುಕೊಳ್ಳುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ದೂರವಾಗಲಿದ್ದೀರಿ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ದನಾದಾಯ ವೃದ್ಧಿಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಸಿಂಹ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು ಕಂಡುಬರಲಿದೆ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ಕನ್ಯಾ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಚನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಮಕ್ಕಳಿಂದ ಸಂತೋಷ ವೃದ್ಧಿಯಾಗಲಿದೆ. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ತಾಳ್ಮೆಯಿರಲಿ.

ತುಲಾ: ಸಂಶೋಧನಾ ವೃತ್ತಿಯಲ್ಲಿ ತೊಡಗಿಸಿಕೊಂಡವರಿಗೆ ಕೀರ್ತಿ ಸಂಪಾದಿಸುವ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ.

ವೃಶ್ಚಿಕ: ಹಿಂದಿನಿಂದ ನಡೆದುಕೊಂಡ ಬಂದ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗುವ ಹೊಣೆಗಾರಿಕೆ ನಿಮ್ಮದಾಗಲಿದೆ. ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರುವುದು.

ಧನು: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾದೀತು. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ.

ಮಕರ: ಭವಿಷ್ಯದ ದೃಷ್ಟಿಯಿಂದ ಆರ್ಥಿಕ ಯೋಜನೆ ಹಾಕಿಕೊಳ್ಳಲಿದ್ದೀರಿ. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಕುಟುಂಬ ಸದಸ್ಯರ ಅಭಿಪ್ರಾಯ ಆಲಿಸಿ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾದೀತು. ಎಚ್ಚರಿಕೆಯಿರಲಿ.

ಕುಂಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಕೂಡಿಟ್ಟ ಹಣ ಖರ್ಚಾಗಿ ಹೋಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ್ಯತೆ. ನೆರೆಹೊರೆಯವರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಗುರುಹಿರಿಯರಿಂದ ಸೂಕ್ತ ಸಲಹೆಗಳು ಸಿಗಲಿವೆ. ಮನೆಯಲ್ಲಿ ಬಂಧು ಮಿತ್ರರ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಕಾಳಿ ಏಕಾಕ್ಷರ ಮಂತ್ರ ಜಪಿಸುವ ವಿಧಾನ, ಫಲವೇನು ನೋಡಿ

ಸಂಜೆ ಹೊತ್ತು ಓದಲೇಬೇಕಾದ ಶ್ರೀ ಚಂದ್ರಮೌಳೀಶ್ವರ ಸ್ತವ ಸ್ತೋತ್ರ

ನಿತ್ಯ ಬೆಳಿಗ್ಗೆ ಈ ಸೂರ್ಯ ಸ್ತೋತ್ರ ಪಠಿಸಿದರೆ ಸಕಲ ರೋಗಗಳಿಂದ ಮುಕ್ತಿ

ಶನಿಯ ಪವರ್ ಫುಲ್ ಮಂತ್ರಗಳಲ್ಲಿ ಇದೂ ಒಂದು

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಓದಿ ಶ್ರೀ ಭದ್ರಲಕ್ಷ್ಮಿ ಸ್ತೋತ್ರಂ

ಮುಂದಿನ ಸುದ್ದಿ
Show comments