ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 22 ಫೆಬ್ರವರಿ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅನಿರೀಕ್ಷಿತ ಧನ ಸಂಪತ್ತಿನ ಯೋಗ. ಹಳೆಯ ಬಾಕಿಗಳು ಪಾವತಿಯಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕೃಪಾಕಟಾಕ್ಷಕ್ಕೊಳಗಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರಲಿದೆ.

ವೃಷಭ: ಇಂದಿನ ದಿನ ಕಷ್ಟ-ಸುಖ ಎರಡೂ ಇರಲಿದ್ದು, ಸಮಚಿತ್ತದಿಂದ ಸ್ವೀಕರಿಸಬೇಕಾಗುತ್ತದೆ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ಕಂಡುಬಂದೀತು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಬೇಕಾಗುತ್ತದೆ.

ಮಿಥುನ: ಹಿಂದೆ ಮಾಡಿದ್ದ ಸಾಲ ತೀರಿಸಲು ಪರದಾಡಬೇಕಾಗುತ್ತದೆ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ದೇವತಾ ಪ್ರಾರ್ಥನ ಮರೆಯದಿರಿ.

ಕರ್ಕಟಕ: ಮಹಿಳೆಯರಿಗೆ ಮಂಗಳ ವಸ್ತ್ರ ಖರೀದಿಸುವ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು. ವ್ಯಾವಹಾರಿಕವಾಗಿ ನಿಮ್ಮ ಕೈ ಮೇಲಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ.

ಸಿಂಹ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತಿಯ ಯೋಗ. ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಿದ್ದರೆ ಅಡೆತಡೆಗಳು ಕಂಡುಬಂದೀತು. ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಒತ್ತಡಗಳು ಹೆಚ್ಚಾಗಲಿವೆ. ಸಂಗಾತಿಯ ಸಾಂತ್ವನ ಮನಸ್ಸಿಗೆ ನೆಮ್ಮದಿ ನೀಡೀತು.

ತುಲಾ: ಕುಟುಂಬ ಸದಸ್ಯರ ಹಿತ ದೃಷ್ಟಿಯಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ನವದಂಪತಿಗಳು ಸುಂದರ ಕ್ಷಣ ಕಳೆಯಲಿದ್ದಾರೆ.

ವೃಶ್ಚಿಕ: ಮನಸ್ಸಿನಲ್ಲಿ ಅಂದುಕೊಂಡಿದ್ದ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಇಷ್ಟಾರ್ಥ ಸಿದ್ಧಿಗೆ ದೇವರ ಮೊರೆ ಹೋಗಲಿದ್ದೀರಿ. ಧಾರ್ಮಿಕ ಕೆಲಸಗಳಿಗೆ ಧನವಿನಿಯೋಗವಾದೀತು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಧನು: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳು ಸ್ವಯಂ ವೃತ್ತಿಯ ಬಗ್ಗೆ ಒಲವು ತೋರಿಸಲಿದ್ದಾರೆ.

ಮಕರ: ತಾಳ್ಮೆಯಿಂದ ವ್ಯವಹರಿಸಿದಲ್ಲಿ ನಿಮ್ಮ ಕೆಲಸ ಕಾರ್ಯಗಳಿಗೆ ಯಾವುದೇ ತೊಂದರೆಯಾಗದು. ಹಿತ ಶತ್ರುಗಳಿಂದ ದೂರವಿದ್ದರೆ ಉತ್ತಮ. ಆಸ್ತಿ ವಿಚಾರದಲ್ಲಿ ಲೆಕ್ಕಾಚಾರ ಹಾಕಿ ಮುನ್ನಡೆಯುವುದು ಉತ್ತಮ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಇನ್ನೊಬ್ಬರಿಗೆ ಉಪಕಾರ ಮಾಡುವ ಸಲುವಾಗಿ ಧನವಿನಿಯೋಗ ಮಾಡಲಿದ್ದೀರಿ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ತಾಳ್ಮೆಯಿರಲಿ.

ಮೀನ: ಸರಕಾರೀ ಉದ್ಯೋಗಿಗಳಿಗೆ ಸ್ಥಾನ ಪಲ್ಲಟ ಭೀತಿ. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳನ್ನು ಕಲಿಯಲು ಅವಕಾಶಗಳು ಸಿಗಲಿವೆ. ಸಾಂಸಾರಿಕವಾಗಿ ಮಧ್ಯಮ ಸುಖವಿರುವುದು. ಮಕ್ಕಳ ನಿಮಿತ್ತ ಖರ್ಚು ವೆಚ್ಚವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಆಂಜನೇಯನ ಕೃಪೆಗೆ ಹನುಮದಷ್ಟಕಂ ಓದಿ

ಶ್ರೀ ಕಾಲಭೈರವ ಬ್ರಹ್ಮ ಕವಚಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಮುಂದಿನ ಸುದ್ದಿ
Show comments