ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಉದ್ಯೋಗ, ವ್ಯವಹಾರದಲ್ಲಿ ಪರಸ್ಪರ ಸಹಕಾರವಿದ್ದರೆ ಮಾತ್ರ ಯಶಸ್ಸು. ಮಕ್ಕಳ ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.
ವೃಷಭ: ಅನಿರೀಕ್ಷಿತವಾಗಿ ಭೇಟಿಯಾಗುವ ವ್ಯಕ್ತಿಗಳಿಂದ ನಿಮ್ಮ ಜೀವನಕ್ಕೆ ತಿರುವ ಸಿಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಕೆಲಸ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ.
ಮಿಥುನ: ಕೆಲಸ ಕಾರ್ಯಗಳಲ್ಲಿ ಧಾವಂತ ಕಂಡುಬರಲಿದೆ. ಕ್ರಿಯಾತ್ಮಕವಾಗಿ ಯೋಚನೆ ಮಾಡಿದರೆ ಸಮಸ್ಯೆಗಳಿಂದ ಪಾರಾಗಬಹುದು. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡಲಿದ್ದಾರೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.
ಕರ್ಕಟಕ: ಪಾಲುದಾರಿಕಾ ವೃತ್ತಿಯಲ್ಲಿ ಪ್ರಗತಿ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಾಂಸಾರಿಕವಾಗಿ ಪರಸ್ಪರ ಸಹಕಾರ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಸಿಂಹ: ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಉದ್ಯೋಗ, ವ್ಯವಹಾರದಲ್ಲಿ ಗೌರವಾದರಗಳಿಗೆ ಒಳಗಾಗಲಿದ್ದೀರಿ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ತಾಳ್ಮೆಯಿರಲಿ.
ಕನ್ಯಾ: ನಿಮ್ಮ ಕೆಲಸ ಕಾರ್ಯಗಳಲ್ಲಿ ಬೇರೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ಸರಿಯಾದ ಯೋಜನೆ ಅಗತ್ಯ. ಕಿರು ಸಂಚಾರ ಮಾಡಬೇಕಾಗುತ್ತದೆ.
ತುಲಾ: ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಯಿರಲಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನಕೊಡಬೇಕಾಗುತ್ತದೆ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಮಾತಿನ ಮೇಲೆ ನಿಗಾ ಇರಲಿ.
ವೃಶ್ಚಿಕ: ನಿಮ್ಮ ನಿರೀಕ್ಷೆಗೂ ಮೀರಿ ಧನಾಗಮನವಾಗಲಿದೆ. ಮನರಂಜನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಕೀರ್ತಿ ಸಂಪಾದಿಸುವ ಯೋಗ. ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ದೇವತಾ ಪ್ರಾರ್ಥನೆ ಮಾಡಿ.
ಧನು: ನೀವು ಆಲೋಚಿಸುವ ರೀತಿ ಬದಲಾವಣೆ ಮಾಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ್ಯತೆ. ದೇಹಾರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡುಬರಲಿದೆ. ವಿದ್ಯಾರ್ಥಿಗಳು ಪರೀಕ್ಷಾ ತಯಾರಿ ಮಾಡಬೇಕಾಗುತ್ತದೆ.
ಮಕರ: ನಿಮ್ಮ ಕೆಲಸ ಕಾರ್ಯಗಳಿಗೆ ಗುರು ಹಿರಿಯರಿಂದ ಸಹಕಾರ ಕಂಡುಬರಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಧಾರ್ಮಿಕ ಚಟುವಟಿಕೆಗಳಿಗೆ ನೇತೃತ್ವ ವಹಿಸಲಿದ್ದೀರಿ. ತಾಳ್ಮೆಯಿರಲಿ.
ಕುಂಭ: ಮಕ್ಕಳ ನಿಮಿತ್ತ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಗೃಹ ಸಂಬಂಧೀ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.
ಮೀನ: ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಹಿರಿಯರು ಪುಣ್ಯ ಕ್ಷೇತ್ರಗಳ ಸಂದರ್ಶನ ಮಾಡಲಿದ್ದಾರೆ. ಆಸ್ತಿ ವಿವಾದಗಳು ಬಗೆಹರಿಯಲಿವೆ. ಕಿರು ಸಂಚಾರ ಮಾಡಲಿದ್ದೀರಿ.