Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 3 ಮಾರ್ಚ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಆಪ್ತರ ದೇಹಾರೋಗ್ಯದ ಬಗ್ಗೆ ಚಿಂತೆಯಾದೀತು. ನೆರೆಹೊರೆಯವರ ಸಹಾಯಕ್ಕೆ ಧಾವಿಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿಯಾದೀತು. ತಾಳ್ಮೆಯಿಲ್ಲದೇ ಕೆಲಸವಾಗದು.

ವೃಷಭ: ಹಿಂದೆ ಒಬ್ಬರಿಂದ ಪಡೆದ ಸಹಾಯಕ್ಕೆ ಪ್ರತ್ಯುಪಕಾರ ಮಾಡುವ ಅವಕಾಶ ಒದಗಿಬರಲಿದೆ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ.  ಗುರುಹಿರಿಯರಿಂದ ಸಲಹೆ ಸೂಚನೆಗಳು ಸಿಗಲಿವೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಸಂದರ್ಭಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವ ಅವಕಾಶ ಸಿಗಲಿದೆ.  ಆಸ್ತಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ತಾಳ್ಮೆಯಿರಲಿ.

ಕರ್ಕಟಕ: ನಿಮ್ಮ ಕೆಲಸ ಕಾರ್ಯಗಳಿಗೆ ಬಂಧು ಮಿತ್ರರಿಂದ ಸಹಕಾರ ಕಂಡುಬರಲಿದೆ. ಆಸ್ತಿ ವಿವಾದಗಳು ಹಿರಿಯರ ಮಧ‍್ಯಸ್ಥಿಕೆಯಲ್ಲಿ ಬಗೆಹರಿಯಲಿವೆ. ದೂರದ ಮಿತ್ರರ ಭೇಟಿಯಾಗಲಿದ್ದೀರಿ. ದಿನದಂತ್ಯಕ್ಕೆ ಸಂತೋಷದ ಸುದ್ದಿ.

ಸಿಂಹ: ಪಾಲುದಾರಿಕಾ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಸಮಯ ಕಳೆಯುವ ಯೋಗ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲಿದ್ದೀರಿ.

ಕನ್ಯಾ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಾಂಸಾರಿಕವಾಗಿ ಸುಖ ಸಮೃದ್ಧಿ ಕಂಡುಬಂದೀತು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ತುಲಾ: ಹಣಕಾಸಿನ ವಿಚಾರದಲ್ಲಿ ಅನಗತ್ಯ ವಿವಾದಕ್ಕೆ ಅನುವು ಮಾಡಿಕೊಡಬೇಡಿ. ಸಹೋದ್ಯೋಗಿಗಳಿಗೆ ಸಹಾಯ ಮಾಡಲಿದ್ದೀರಿ. ಅನಿರೀಕ್ಷಿತ ಮೂಲಗಳಿಂದ ಧನಾಗಮನವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ ಕಂಡುಬರಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಮಹತ್ವದ ಯೋಜನೆ ಕಂಡುಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ದೂರ ಸಂಚಾರಕ್ಕೆ ಸಿದ್ಧತೆ.

ಧನು: ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಹಿರಿಯರ ಮಾತುಗಳನ್ನು ಅಸಡ್ಡೆ ಮಾಡದಿರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗ.

ಮಕರ: ಕೆಲಸ ಕಾರ್ಯಗಳಲ್ಲಿ ಪರಿಶ್ರಮದಿಂದ ದೇಹಾಯಾಸವಾದೀತು. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಯೋಗ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಆಸ್ತಿ  ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ.

ಕುಂಭ: ಧಾರ್ಮಿಕ ಚಟುವಟಿಕೆಗಳಿಂದ ನಿಮ್ಮ ಮನಸ್ಸಿನ ಭಾರ ಕಡಿಮೆಯಾದೀತು. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಮನೆಗೆ ಬಂಧು ಮಿತ್ರರ ಆಗಮನವಾಗಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ.

ಮೀನ: ಹಣಕಾಸಿನ ವಿಚಾರದಲ್ಲಿ ಆಪ್ತರಿಂದಲೇ ವಂಚನೆಗೊಳಗಾಗುವ ಭೀತಿ ಎದುರಾದೀತು. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಹೆಚ್ಚಿನ ಆಸಕ್ತಿ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಈ ಒಂದು ವಸ್ತು ತಂದಿಟ್ಟರೆ ಲಕ್ಷ್ಮಿ ನಿಮ್ಮ ಮನೆಗೆ ಬರುತ್ತಾಳೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಕ್ಕಳಿಗೆ ವಿದ್ಯೆ ತಲೆಗೆ ಹತ್ತದಿರಲು ಯಾವ ದೋಷ ಕಾರಣ

ಮುಂದಿನ ಸುದ್ದಿ
Show comments