Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 7 ಮಾರ್ಚ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಾಂಸಾರಿಕವಾಗಿ ಅನೇಕ ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳಲು ಗೊಂದಲಗಳು ಕಾಡೀತು. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ.

ವೃಷಭ: ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಾಗುತ್ತದೆ. ಸಾಂಸಾರಿಕವಾಗಿ ಸುಖ ಸಮೃದ್ಧಿ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಉದ್ಯೋಗ, ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ಧಾರಿ ನಿಮ್ಮದಾಗಲಿದೆ. ಗುರುಹಿರಿಯರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ಕಂಡುಬರಲಿದೆ. ಬಹಳ ದಿನಗಳ ನಂತರ ಬಂಧು ಮಿತ್ರರನ್ನು ಭೇಟಿಯಾಗಲಿದ್ದೀರಿ.

ಕರ್ಕಟಕ: ದೇಹಾರೋಗ್ಯದಲ್ಲಿ ಏರುಪೇರಾಗಿದ್ದರೂ ಆಪ್ತರ ಬೆಂಬಲ ಮಾನಸಿಕವಾಗಿ ಬೆಂಬಲ ಸಿಗಲಿದೆ. ದಾಂಪತ್ಯದಲ್ಲಿ ಮಧ‍್ಯಮ ಸುಖ. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳನ್ನು ಕಲಿಯುವ ಉತ್ಸಾಹ ಕಂಡುಬರಲಿದೆ.

ಸಿಂಹ: ಸಂದರ್ಭಕ್ಕೆ ಸರಿಯಾಗಿ ತೀರ್ಮಾನ ತೆಗೆದುಕೊಳ್ಳುವುದರಿಂದ ಸಂಭಾವ್ಯ ಸಮಸ್ಯೆಯಿಂದ ಪಾರಾಗಬಹುದು. ಕೌಟುಂಬಿಕವಾಗಿ ಕ್ಷಮಾಗುಣವಿದ್ದರೆ ಭಿನ್ನಾಬಿಪ್ರಾಯಗಳು ದೂರವಾದೀತು. ತಾಳ್ಮೆಯಿರಲಿ.

ಕನ್ಯಾ: ನಕಾರಾತ್ಮಕ ಚಿಂತನೆಗೆ ಅವಕಾಶ ಮಾಡಿಕೊಡದಿರಿ. ತಾಳ್ಮೆ, ಸಹನೆಯಿಂದ ಕಾರ್ಯಪ್ರವೃತ್ತರಾಗಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಚಿಂತೆ ಬೇಡ.

ತುಲಾ: ಇನ್ನೊಬ್ಬರಿಗೆ ಮಾತು ನೀಡುವ ಮೊದಲು ಸರಿಯಾಗಿ ಪರಾಮರ್ಶೆ ನಡೆಸಿ.  ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ.

ವೃಶ್ಚಿಕ: ಸಾಂಸಾರಿಕವಾಗಿ ಸುಖ, ಸಮೃದ್ಧಿಯಿದ್ದರೂ ಉದ್ಯೋಗ ಸಂಬಂಧವಾದ ಚಿಂತೆ ನಿಮ್ಮನ್ನು ಕಾಡಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ದೇವತಾ ಪ್ರಾರ್ಥನೆ ಮಾಡಿ.

ಧನು: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಿದ್ದರೆ ಅಡೆತಡೆಗಳು ಕಂಡುಬಂದೀತು. ಬಚ್ಚಿಟ್ಟಿದ್ದ ಸಂಪಾದನೆ ಅನಿರೀಕ್ಷಿತವಾಗಿ ಖರ್ಚು ವೆಚ್ಚವಾಗಲಿದೆ. ದೀರ್ಘ ಪ್ರಯಾಣಕ್ಕೆ  ಸಿದ್ಧತೆ ನಡೆಸಲಿದ್ದೀರಿ.

ಮಕರ: ಧಾರ್ಮಿಕ ಚಟುವಟಿಕೆಗಳಿಗೆ ನೇತೃತ್ವ ವಹಿಸಲಿದ್ದೀರಿ. ಹೊಸ ಕೆಲಸಕ್ಕೆ ಕೈ ಹಾಕಲು ಇದು ಸಕಾಲ. ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗಲಿದೆ.  ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆಕಂಡುಬರಲಿದೆ.

ಕುಂಭ: ಸರಕಾರೀ ಉದ್ಯೋಗಿಗಳಿಗೆ ಮುಂಬಡ್ತಿಯ ಕನಸು ಸದ್ಯದಲ್ಲೇ ನನಸಾಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ಮೀನ: ನೂತನ ದಂಪತಿಗಳು ಸುಂದರ ಕ್ಷಣ ಕಳೆಯಲಿದ್ದಾರೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸ್ವಯಂ ವೃತ್ತಿಯವರಿಗೆ ಲಾಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?