Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 15 ಮಾರ್ಚ್ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಾಂಸಾರಿಕವಾಗಿ ನಿಮ್ಮ ತಾಳ್ಮೆಯೇ ನಿಮಗೆ ಅಸ್ತ್ರವಾಗಲಿದೆ. ಬೇರೆಯವರು ಹೇಳುವ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ವ್ಯವಹಾರದಲ್ಲಿ ಸುಧಾರಣೆ ಕಂಡುಬರಲಿದೆ. ಮಕ್ಕಳಿಂದ ಸಂತೋಷ ಸಿಗುವುದು.

ವೃಷಭ: ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಗೊಂದಲಗಳು ಕಾಡಲಿವೆ. ಸಂಗಾತಿಯ ಸಹಕಾರ ಸಿಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವ್ಯಾಪಾರಿಗಳಿಗೆ ಹಣಕಾಸಿನ ಹರಿವಿಗೆ ತೊಂದರೆಯಾಗದು.

ಮಿಥುನ: ಯಾವುದೇ ವಸ್ತು ಅಥವಾ ವ್ಯಕ್ತಿಯ ಮೇಲೆ ಅತೀವ ನಿರೀಕ್ಷೆಯಿಟ್ಟುಕೊಂಡಿದ್ದಲ್ಲಿ ನಿರಾಸೆಯಾಗುವ ಸಾಧ‍್ಯತೆ. ಆಸ್ತಿ ವಿಚಾರಗಳಲ್ಲಿ ನಿರ್ಣಯ ಹೊರಬೀಳಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

ಕರ್ಕಟಕ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ ನಿಮ್ಮದಾಗಲಿದೆ. ವ್ಯವಾಹರಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಸಿಂಹ: ಅನಿರೀಕ್ಷಿತವಾಗಿ ಧನಾಗಮನವಾಗಲಿದ್ದು, ಅಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ದೂರದ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕನ್ಯಾ: ಉದ್ಯೋಗ, ವ್ಯವಹಾರದಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಪುಣ್ಯ ಕ್ಷೇತ್ರಗಳ ಸಂದರ್ಶಿಸಲಿದ್ದೀರಿ.

ತುಲಾ: ಭೂಮ್ಯಾದಿ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಹಿಂದೆ ಬಾಕಿ ಉಳಿಸಿಕೊಂಡ ಕೆಲಸಗಳನ್ನು ಪೂರ್ತಿ ಮಾಡಲು ಪ್ರಯತ್ನ ನಡೆಸಲಿದ್ದೀರಿ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಕುಲದೇವರ ಪ್ರಾರ್ಥನೆ ನಡೆಸಿ. ಹಿರಿಯರ ಸಮಯೋಚಿತ ಸಲಹೆಗಳು ಉಪಯೋಗಕ್ಕೆ ಬರಲಿವೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ.

ಧನು: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವದ ಗುಣಕ್ಕೆ ಪ್ರಶಂಸೆ ವ್ಯಕ್ತವಾಗಲಿದೆ. ತಾಳ್ಮೆಯಿರಲಿ.

ಮಕರ: ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ.

ಕುಂಭ: ವಿಶೇಷ ವ್ಯಕ್ತಿಗಳನ್ನು ಭೇಟಿಯಾಗಲಿದ್ದು, ನಿಮ್ಮ ಕೆಲಸ ಕಾರ್ಯಗಳಿಗೆ ನೆರುವ ಸಿಗಲಿದೆ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮೀನ: ಎಷ್ಟೇ ಯೋಜನೆ ಹಾಕಿಕೊಂಡು ಕೆಲಸಕ್ಕೆ ಕೈಹಾಕಿದರೂ ಕೊನೆ ಗಳಿಗೆಯಲ್ಲಿ ಆತಂಕ ಎದುರಿಸುವ ಪರಿಸ್ಥಿತಿ ಬಂದೀತು. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಭೇಟಿ ಸಾಧ‍್ಯತೆ. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?