Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 26 ಮಾರ್ಚ್ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಗೃಹಿಣಿಯರಿಗೆ ಗೃಹಕೃತ್ಯಗಳಿಂದ ಬಿಡುವು. ಮನಸ್ಸಿಗೆ ಉಲ್ಲಾಸ ಕೊಡುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಎಷ್ಟೇ ಪ್ರಯತ್ನಪಟ್ಟರೂ ಪರಿಶ್ರಮಕ್ಕೆ ತಕ್ಕ ಫಲ ಸಿಗುತ್ತಿಲ್ಲ ಎಂಬ ಬೇಸರ ಕಾಡಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಅಭಿವೃದ್ಧಿಗೆ ಕೆಲವೊಂದು ಯೋಜನೆ ಹಮ್ಮಿಕೊಳ್ಳಬೇಕಾಗುತ್ತದೆ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ವ್ಯಾಪಾರೀ ವರ್ಗದವರಿಗೆ ಆದಾಯಕ್ಕೆ ಕೊರತೆಯಿರದು.

ಕರ್ಕಟಕ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಭೂಮಿ ಕ್ರಯ, ವಿಕ್ರಯ ವಿಚಾರವಾಗಿ ಮಾತುಕತೆ ನಡೆಸಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಅವಿವಾಹಿತರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ.

ಕನ್ಯಾ: ಸತ್ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಆಸ್ತಿ ವಿಚಾರದಲ್ಲಿ ಅನ್ಯರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ತಾಳ್ಮೆಯಿರಲಿ.

ತುಲಾ: ಮಕ್ಕಳಿಂದ ಸಂತೋಷ, ಆತ್ಮೀಯರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ ನಿಮ್ಮದಾಗಲಿದೆ. ಪರರ ಕೆಲಸಗಳಲ್ಲಿ ಸಹಾಯ ಮಾಡಲಿದ್ದೀರಿ. ನೆರೆಹೊರೆಯವರಿಂದ ಶಹಬ್ಬಾಶ್ ಗಿರಿ ಪಡೆಯುವಿರಿ. ಅವರಸರ ನಿರ್ಧಾರ ಬೇಡ.

ವೃಶ್ಚಿಕ: ಹೊಸ ಯೋಜನೆಗಳಿಗೆ ಕೈಹಾಕಲು ಇದು ಸಕಾಲ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಆತ್ಮೀಯರೊಂದಿಗೆ ಬೆರೆಯಲಿದ್ದೀರಿ. ಶುಭ ಮಂಗಲ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸುವಿರಿ. ದೇವತಾ ಪ್ರಾರ್ಥನೆ ಮಾಡಿ.

ಧನು: ಧನಾದಾಯ ಹೆಚ್ಚಳಕ್ಕೆ ಸೂಕ್ತ ಕ್ರಮ ಕೈಗೊಳ್ಳಲಿದ್ದೀರಿ. ವಿಶೇಷ ವ್ಯಕ್ತಿಗಳು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ಆತ್ಮೀಯರನ್ನು ಬಹಳ ದಿನಗಳ ನಂತರ ಭೇಟಿಯಾದ ಖುಷಿ ನಿಮ್ಮದಾಗಲಿದೆ.

ಮಕರ: ಹೊಸ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡುವಿರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಸರಕಾರಿ ಉದ್ಯೋಗಿಗಳಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕುಂಭ: ಮನಸ್ಸಿನಲ್ಲಿ ಹುಟ್ಟುವ ಗೊಂದಲಗಳಿಗೆ ಆಪ್ತರಿಂದ ಸಲಹೆ ಪಡೆಯಲಿದ್ದೀರಿ. ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆ.

ಮೀನ: ನಿರೀಕ್ಷಿಸಿದಂತೇ ಕೆಲಸ ಕಾರ್ಯಗಳು ನಡೆದು ಹೋಗುವುದರಿಂದ ನೆಮ್ಮದಿಯಾದೀತು. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಮಕ್ಕಳಿಂದ ಸಂತೋಷ ಹೆಚ್ಚಾಗಲಿದೆ. ಹಿರಿಯರು ದೇವತಾ ಸ್ಥಳ ಸಂದರ್ಶಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments